ಪ್ರಧಾನಿ ನರೇಂದ್ರ ಮೋದಿ (Narendra Modi) ನಾಳೆ ಮಂಗಳೂರಿಗೆ (Mangalore) ಆಗಮಿಸಲಿದ್ದು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸುಮಾರು 3,800 ಕೋಟಿ ರೂ.ಗಳ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಕೇರಳ ಮತ್ತು ಕರ್ನಾಟಕಕ್ಕೆ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಮೋದಿ ಇಂದು ಕನ್ನಡ ಮತ್ತು ಮಲಯಾಳಂನಲ್ಲಿ ಟ್ವೀಟ್ ಮಾಡಿದ್ದಾರೆ. ನಾಳೆ, ಸೆಪ್ಟೆಂಬರ್ 2 ರಂದು ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು ಎದುರು ನೋಡುತ್ತಿರುವೆ. 3,800 ಕೋಟಿ ರೂಪಾಯಿ ಮೌಲ್ಯದ ಪ್ರಮುಖ ಯೋಜನೆಗಳ ಉದ್ಘಾಟನೆ ಅಥವಾ ಶಿಲಾನ್ಯಾಸ ನೆರವೇರಿಸಲಾಗುವುದು. ಈ ಮುಖ್ಯವಾದ ಯೋಜನೆಗಳು ಯಾಂತ್ರೀಕರಣ ಮತ್ತು ಕೈಗಾರಿಕೀಕರಣಕ್ಕೆ ಸಂಬಂಧಿಸಿದ್ದಾಗಿವೆ ಎಂದು ಮೋದಿ ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.
ನಾಳೆ, ಸೆಪ್ಟೆಂಬರ್ 2 ರಂದು ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು ಎದುರು ನೋಡುತ್ತಿರುವೆ. 3,800 ಕೋಟಿ ರೂಪಾಯಿ ಮೌಲ್ಯದ ಪ್ರಮುಖ ಯೋಜನೆಗಳ ಉದ್ಘಾಟನೆ ಅಥವಾ ಶಿಲಾನ್ಯಾಸ ನೆರವೇರಿಸಲಾಗುವುದು. ಈ ಮುಖ್ಯವಾದ ಯೋಜನೆಗಳು ಯಾಂತ್ರೀಕರಣ ಮತ್ತು ಕೈಗಾರಿಕೀಕರಣಕ್ಕೆ ಸಂಬಂಧಿಸಿದ್ದಾಗಿವೆ.
ಇದನ್ನೂ ಓದಿ— Narendra Modi (@narendramodi) September 1, 2022
ಇದಕ್ಕಿಂತ ಮುಂಚೆ ಮಲಯಾಳಂನಲ್ಲಿ ಟ್ವೀಟ್ ಮಾಡಿದ ಅವರು ಕೊಚ್ಚಿ ನಗರವನ್ನು ತಲುಪಿದ ನಂತರ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದೇನೆ. ಆ ನಂತರ ಕಾಲಡಿಯ ಶ್ರೀ ಆದಿಶಂಕರ ಜನ್ಮಭೂಮಿ ದೇವಸ್ಥಾನಕ್ಕೆ ಭೇಟಿ ನೀಡುವ ಗೌರವ ನನ್ನದು. ಸಂಜೆ ಕೊಚ್ಚಿಯಲ್ಲಿ ಮೆಟ್ರೋ ಮತ್ತು ರೈಲು ಸಂಬಂಧಿತ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನಡೆಯಲಿದೆ ಎಂದು ಟ್ವೀಟ್ ಮಾಡಿದ್ದಾರೆ.
ഊര്ജ്ജസ്വല നഗരമായ കൊച്ചിയിൽ എത്തിയ ശേഷം ഒരു പൊതുസമ്മേളനത്തെ അഭിസംബോധന ചെയ്യും. അതിനുശേഷം കാലടിയിലെ ശ്രീ ആദിശങ്കര ജന്മഭൂമി ക്ഷേത്രം സന്ദർശിക്കാനുള്ള ബഹുമതി എനിക്കുണ്ടാകും. വൈകിട്ട് കൊച്ചിയിൽ മെട്രോ, റെയിൽ അനുബന്ധ പ്രവൃത്തികളുടെ ഉദ്ഘാടനവും തറക്കല്ലിടലും നിർവഹിക്കും.
— Narendra Modi (@narendramodi) September 1, 2022
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿದೆ. ಪ್ರಧಾನಿ ಮೋದಿ ಭೇಟಿ ಬಗ್ಗೆ ಮಾತನಾಡಿದ ಇಂಧನ ಸಚಿವ ವಿ.ಸುನಿಲ್ ಕುಮಾರ್ ಮಾಧ್ಯಮದವರೊಂದಿಗೆ ಮಾತನಾಡಿದ್ದು, ನಾಳೆ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. 3,700 ಕೋಟಿ ವೆಚ್ಚದ ಯೋಜನೆಗಳಿಗೆ ಮೋದಿ ಚಾಲನೆ ನೀಡುತ್ತಾರೆ. ಬಳಿಕ ಕಾರ್ಯಕ್ರಮ ಉದ್ದೇಶಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ 1 ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ. ಕೃಷಿ ಸಮ್ಮಾನ್, ವಿದ್ಯಾನಿಧಿ ಸೇರಿ ಹಲವು ಫಲಾನುಭವಿಗಳು ಭಾಗಿಯಾಗಲಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಿಂದ ಜನರು ಆಗಮಿಸುತ್ತಿದ್ದಾರೆ. ಜನರನ್ನು ಕರೆತರಲು 2 ಸಾವಿರ ಬಸ್ಗಳ ವ್ಯವಸ್ಥೆ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿಕೆ ನೀಡಿದರು.
– Manjunath Raju G (@manjunathraju) 1 Sep 2022
ಆಗಸ್ಟ್ 31 ರಂದು ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, “ಪ್ರಧಾನ ಮಂತ್ರಿಗಳ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳು ಸೇರಿದಂತೆ ಸುಮಾರು 1 ಲಕ್ಷ ಜನರು ಸೇರುತ್ತಾರೆ. ನಾವು ಕಾರ್ಯಕ್ರಮಕ್ಕೆ ಮುಂಚಿತವಾಗಿ ಕೆಲವು ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಮತ್ತು ಉತ್ತಮವಾಗಿ ಸಿದ್ಧರಾಗಿದ್ದೇವೆ. ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಫಲಾನುಭವಿಗಳಿಗೆ ಮನವಿ ಮಾಡಿದ್ದೇವೆ ಎಂದಿದ್ದಾರೆ. ಕಾರ್ಯಕ್ರಮಕ್ಕೆ ಸಾರ್ವಜನಿಕರು ಯಾವುದೇ ರೀತಿಯ ಆಕ್ಷೇಪಾರ್ಹ ವಸ್ತುಗಳನ್ನು ತರುವಂತಿಲ್ಲ, ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 9 ಜಂಕ್ಷನ್‌ಗಳಲ್ಲಿ ಸಂಚಾರ ವ್ಯತ್ಯಯವಿದ್ದು, ವಾಹನ ನಿಲುಗಡೆಗೆ 15 ಸ್ಥಳಗಳನ್ನು ಗುರುತಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ
Published On - 5:51 pm, Thu, 1 September 22