AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಕೇಸ್​: ನಟೇಶ್​ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ, ನೋಟಿಸ್ ನೀಡಿದ ಲೋಕಾಯುಕ್ತ

ಗೃಹ ಇಲಾಖೆ ಮುಡಾ ಮಾಜಿ ಆಯುಕ್ತ ನಟೇಶ್ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದೆ. ಸಿಎಂ ಸಿದ್ದರಾಮಯ್ಯ ಅವರನ್ನು ಒಳಗೊಂಡ ಮುಡಾ ಹಗರಣದಲ್ಲಿ ನಟೇಶ್ ಪಾತ್ರದ ಕುರಿತು ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ಅನುಮತಿ ನೀಡಲಾಗಿದೆ. ಮುಂದಿನ ವಾರ ನಟೇಶ್ ವಿಚಾರಣೆಗೆ ಹಾಜರಾಗಬೇಕು ಎಂದು ನೋಟಿಸ್ ಜಾರಿ ಮಾಡಲಾಗಿದೆ.

ಮುಡಾ ಕೇಸ್​: ನಟೇಶ್​ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ, ನೋಟಿಸ್ ನೀಡಿದ ಲೋಕಾಯುಕ್ತ
ಮುಡಾ ಕೇಸ್​: ನಟೇಶ್​ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ, ನೋಟಿಸ್ ನೀಡಿದ ಲೋಕಾಯುಕ್ತ
Shivaprasad B
| Edited By: |

Updated on: Nov 16, 2024 | 3:58 PM

Share

ಬೆಂಗಳೂರು, ನವೆಂಬರ್ 16: ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧದ ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಡಾ ಆಯುಕ್ತ ನಟೇಶ್​ ಅವರ​ ಪ್ರಾಸಿಕ್ಯೂಷನ್​ಗೆ ಗೃಹ ಇಲಾಖೆ ಅನುಮತಿ ನೀಡಿದೆ. ಲೋಕಾಯುಕ್ತ ಪೊಲೀಸರಿಗೆ ವಿಚಾರಣೆ ನಡೆಸಲು ಸರ್ಕಾರ ಅನುಮತಿ ನೀಡಿದೆ.

ಮುಂದಿನ ವಾರ ವಿಚಾರಣೆಗೆ ಹಾಜರಾಗುವಂತೆ ನೋಟಿಸ್

ಸರ್ಕಾರಿ ಅಧಿಕಾರಿ‌ ವಿಚಾರಣೆ ನಡೆಸಲು ಸರ್ಕಾರದ ಅನುಮತಿ ಕಡ್ಡಾಯವಾಗಿದೆ. ಹೀಗಾಗಿ 17(A) ಅಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಒಂದು ತಿಂಗಳ ಹಿಂದೆ ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿದ್ದರು. ಇದೀಗ ಅನುಮತಿ ಬಳಿಕ ನಟೇಶ್ ಅವರಿಗೆ ಮುಂದಿನ ವಾರ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಇದನ್ನೂ ಓದಿ: ಮುಡಾ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಮುಡಾ ಮಾಜಿ ಆಯುಕ್ತ ನಟೇಶ್ ಇಡಿ ವಶಕ್ಕೆ

ಆರೋಪ ಎದುರಿಸುತ್ತಿರುವ ಮುಡಾದಲ್ಲಿ ಈ ಹಿಂದೆ ಆಯುಕ್ತರಾಗಿದ್ದ ನಟೇಶ್, ಸೈಟ್ ಮರು ಹಂಚಿಕೆಯಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಈಗಾಗಲೇ ಇಡಿ ಅಧಿಕಾರಿಗಳ ಮುಂದೆ ಮೂರು ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ.

ಇನ್ನು ಇತ್ತೀಚೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಮಲ್ಲೇಶ್ವರಂನ 10ನೇ ಕ್ರಾಸ್ ನಲ್ಲಿರುವ‌ ನಟೇಶ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದರು ಸತತ 33 ಗಂಟೆಗಳ ಕಾಲ ದಾಖಲೆ ಪರಿಶೀಲನೆ ಮಾಡಿ 4 ಬ್ಯಾಗ್ ಕೊಂಡೊಯ್ದಿದ್ದರು. ಬಳಿಕ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು.

ಇನ್ನೂ ಹಿಂದಿನ ಆಯುಕ್ತರಾದ ನಟೇಶ್, ದಿನೇಶ್‌ಗೆ ಅಕ್ರಮದಲ್ಲಿ ಸಹಾಯ ಆರೋಪದಡಿ ಗುತ್ತಿಗೆ ನೌಕರ ಬಿ.ಕೆ ಕುಮಾರ್ ಎಂಬಾತನನ್ನ ಸೇವೆಯಿಂದ ವಜಾಗೊಳಿಸಲಾಗಿದೆ. ಇನ್ನೂ ಮುಡಾ ಮಾಜಿ ಅಧ್ಯಕ್ಷ ಮರಿಗೌಡ ಮತ್ತು ಆತನ ಬಾಮೈದ ಶಿವಣ್ಣ ಇಡಿ ವಿಚಾರಣೆ ಮುಗಿದಿದ್ದು, ಮಹತ್ವ ಮಾಹಿತಿಗಳನ್ನ ಇಡಿ ಸಂಗ್ರಹಿಸಿದೆ.

ಇದನ್ನೂ ಓದಿ: ಬೆಂಗಳೂರು: ವಾಕಿಂಗ್​ನಲ್ಲಿದ್ದ ಮುಡಾ ಅಧಿಕಾರಿ ಇಡಿ ದಾಳಿ ಸುದ್ದಿ ಕೇಳ್ತಿದ್ದಂತೆ ಅಲ್ಲಿಂದಲೇ ರನ್ನಿಂಗ್!

ಮತ್ತೊಂಕಡೆ ದೂರುದಾರ ಸ್ನೇಹಮಯಿ ಕೃಷ್ಣ ಮತ್ತಷ್ಟು ಆರೋಪಗಳನ್ನ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ 2013ರ ಚುನಾವಣಾ ಅಫಿಡವಿಟ್‌ನಲ್ಲಿ ಪತ್ನಿ ಸೈಟ್ ಪಡೆದಿರುವ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಯಾಕಂದ್ರೆ, ಸಿದ್ದರಾಮಯ್ಯಗೆ ಮುಡಾ ವಶಪಡಿಸಿಕೊಂಡ ಬಗ್ಗೆ ಮಾಹಿತಿ ಇತ್ತು ಹೀಗಾಗಿ ಮಾಹಿತಿ ನೀಡಿಲ್ಲ ಅಂತಾ ಒಂದಿಷ್ಟು ದಾಖಲೆ ರಿಲೀಸ್ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ