ಗ್ಯಾರಂಟಿ ಯೋಜನೆಗೆ SCSP-TSP ಹಣ ಬಳಕೆ: ವರದಿ ಕೇಳಿದ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ

ಸಿಎಂ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಕಸರತ್ತು ನಡೆಸುತ್ತಿದೆ. ಎಸ್‌ಸಿಎಸ್‌ಪಿ-ಟಿಎಸ್‌ಪಿ ಮೀಸಲಿಟ್ಟಿದ್ದ 39,171 ಕೋಟಿ ರೂ. ಅನುದಾನದಲ್ಲಿ 14,282 ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಲಾಗಿದೆ. ಈ ಕುರಿತಾಗಿ ಏಳು ದಿನಗಳೊಳಗೆ ಸಂಪೂರ್ಣ ವಿವರಣೆ ನೀಡುವಂತೆ ಸರ್ಕಾರಕ್ಕೆ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ ವರದಿ ಕೇಳಿದೆ.

ಗ್ಯಾರಂಟಿ ಯೋಜನೆಗೆ SCSP-TSP ಹಣ ಬಳಕೆ: ವರದಿ ಕೇಳಿದ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ
ಗ್ಯಾರಂಟಿ ಯೋಜನೆಗೆ CSP-TSP ಹಣ ಬಳಕೆ: ವರದಿ ಕೇಳಿದ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ
Edited By:

Updated on: Jul 10, 2024 | 4:46 PM

ಬೆಂಗಳೂರು, ಜುಲೈ 10: ಸರ್ಕಾರದ ಗ್ಯಾರಂಟಿ ಯೋಜನೆಗೆ ಎಸ್​ಸಿಎಸ್​ಪಿ, ಟಿಎಸ್​​​ಪಿ (SCSP, TSP) ಹಣ ಬಳಕೆ ವಿಚಾರವಾಗಿ ಏಳು ದಿನಗಳ ಒಳಗೆ ವಿವರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ ವರದಿ ಕೇಳಿದೆ. ಎಸ್​ಸಿಎಸ್​ಪಿ, ಟಿಎಸ್​ಪಿ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆಯಾಗಿದೆ. ಹೀಗಾಗಿ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ ಜಂಟಿ ಕಾರ್ಯದರ್ಶಿ ರಾಜೀವ್ ಕುಮಾರ್ ತಿವಾರಿ ರಾಜ್ಯ ಸರ್ಕಾರದ ಸಿಎಸ್​​ಗೆ ಪತ್ರ ಬರೆದಿದ್ದಾರೆ.

ಸಿಎಂ ಸಿದ್ದರಾಮಯ್ಯ ಸರ್ಕಾರದ ಪಂಚ ಯೋಜನೆಗಳಿಗೆ ಹಣ ಹೊಂದಿಸಲು ಕಸರತ್ತು ನಡೆಸಿದೆ. ಹೀಗಾಗಿ 2024-25ನೇ ಹಣಕಾಸು ವರ್ಷಕ್ಕಾಗಿ ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಪಂಗಡದ ಉಪ ಯೋಜನೆಗೆ (ಎಸ್‌ಸಿಎಸ್‌ಪಿ-ಟಿಎಸ್‌ಪಿ) ಮೀಸಲಿಟ್ಟಿದ್ದ 39,171 ಕೋಟಿ ರೂ. ಅನುದಾನದಲ್ಲಿ 14,282 ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಲಾಗಿದೆ.

ಇದನ್ನೂ ಓದಿ: ಗ್ಯಾರಂಟಿ ಯೋಜನೆಗೆ ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿದ್ದ SCP,TSP ಅನುದಾನ ಬಳಕೆ

ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಪಂಗಡದ ಉಪ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿರುವುದನ್ನು ಬಿಜೆಪಿ ಈ ಹಿಂದೆ ಆರೋಪಿಸುವುದರೊಂದಿಗೆ ಆಗಸ್ಟ್​ನಲ್ಲಿ ಪ್ರತಿಭಟನೆ ಕೂಡ ಮಾಡಲಾಗಿತ್ತು.

ಎಸ್​ಸಿಎಸ್​ಪಿ, ಟಿಎಸ್​​​ಪಿ ಅನುದಾನವನ್ನು ಯಾವ ಯಾವ ಗ್ಯಾರಂಟಿ ಯೋಜನೆಗೆ ಎಷ್ಟು ಹಣ ಬಳಸಲಾಗಿದೆ.

  • ಗೃಹಲಕ್ಷ್ಮೀ ಯೋಜನೆಗೆ 7,881.91 ಕೋಟಿ ರೂ.
  • ಭಾಗ್ಯಲಕ್ಷ್ಮೀ ಯೋಜನೆಗೆ 70.28 ಕೋಟಿ ರೂ.
  • ಗೃಹಜ್ಯೋತಿ ಯೋಜನೆಗೆ 2585.93 ಕೋಟಿ ರೂ.
  • ಅನ್ನಭಾಗ್ಯ ಯೋಜನೆಗೆ 448.15 ಕೋಟಿ ರೂ.
  • ಅನ್ನಭಾಗ್ಯ ಯೋಜನೆಯ 2,187 ಕೋಟಿ ರೂ.
  • ಶಕ್ತಿ ಯೋಜನೆಗೆ 1451.45 ಕೋಟಿ ರೂ.
  • ಯುವನಿಧಿ ಯೋಜನೆಗೆ 175.50 ಕೋಟಿ ರೂ.

ಇದನ್ನೂ ಓದಿ: ಎಸ್​ಸಿಪಿ, ಟಿಎಸ್​ಪಿ ಹಣದ ಮೇಲೆ ಕಾಂಗ್ರೆಸ್ ವಕ್ರದೃಷ್ಟಿ, ಸಿಎಂರಿಂದ ದಲಿತರ ಹಿತ ಕಡೆಗಣನೆ: ಮಾಜಿ ಸಿಎಂ ಬೊಮ್ಮಾಯಿ

ಬಾಬಾ ಸಾಹೇಬ್ ಅಂಬೇಡ್ಕರ್ ಅವರೇನಾದರೂ ಬಹುಶಃ ಇವತ್ತು ಬದುಕಿದ್ದರೆ, ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರಕ್ಕೆ ಛೀಮಾರಿ ಹಾಕಿ ತಕ್ಕ ಶಾಸ್ತಿ ಮಾಡುತ್ತಿದ್ದರು ಎಂದು ವಿಪಕ್ಷ ನಾಯಕ ಆರ್​ ಅಶೋಕ ಈ ಹಿಂದೆ ವಾಗ್ದಾಳಿ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us