AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರಾಕಾರ ಮಳೆಗೆ ಮಡಿಕೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕುಸಿತ; ಮಡಿಕೇರಿ-ಮಂಗಳೂರು ಸಂಪರ್ಕ ಕಡಿತ

ನಿರಂತರವಾಗಿ ಸುರಿದ ಧಾರಾಕಾರ ಮಳೆಗೆ ಕೊಡಗು ಜಿಲ್ಲೆಯಲ್ಲಿ ಮಡಿಕೇರಿ ತಾಲೂಕಿನ ಕೊಯನಾಡು ಗ್ರಾಮದಲ್ಲಿರುವ 50 ಮೀಟರ್ ಉದ್ದದ ರಾಷ್ಟ್ರೀಯ ಹೆದ್ದಾರಿ ಕುಸಿದು ಬಿದ್ದಿದ್ದು, ಇದರಿಂದ ಮಡಿಕೇರಿ-ಮಂಗಳೂರು ಸಂಪರ್ಕ ಕಡಿತಗೊಂಡಿದೆ.

ಧಾರಾಕಾರ ಮಳೆಗೆ ಮಡಿಕೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕುಸಿತ; ಮಡಿಕೇರಿ-ಮಂಗಳೂರು ಸಂಪರ್ಕ ಕಡಿತ
ಧಾರಾಕಾರ ಮಳೆಗೆ ಕುಸಿದ ರಾಷ್ಟ್ರೀಯ ಹೆದ್ದಾರಿ
TV9 Web
| Edited By: Rakesh Nayak Manchi|

Updated on:Aug 04, 2022 | 1:40 PM

Share

ಮಡಿಕೇರಿ: ನಿರಂತರವಾಗಿ ಸುರಿದ ಧಾರಾಕಾರ ಮಳೆಗೆ ಕೊಡಗು ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಸೇತುವೆಯೊಂದು ಕುಸಿದು ಬಿದ್ದಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕೊಯನಾಡು ಗ್ರಾಮದಲ್ಲಿರುವ 50 ಮೀಟರ್ ಉದ್ದದ ರಾಷ್ಟ್ರೀಯ ಹೆದ್ದಾರಿ ಕುಸಿದು ಬಿದ್ದಿದ್ದು, ಇದರಿಂದ ಮಡಿಕೇರಿ-ಮಂಗಳೂರು ಸಂಪರ್ಕ ಕಡಿತಗೊಂಡಿದೆ.

ಮಡಿಕೇರಿ-ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 275ರಲ್ಲಿನ ಸೇತುವೆ ಬಿರುಕು ಬಿಟ್ಟಿದ್ದು, ಅಡಿಪಾಯವೇ ಕುಸಿತಗೊಂಡಿದೆ. ಸೇತುವೆಯ ಕೆಳಭಾಗದಲ್ಲಿ‌ ಪ್ರವಾಹದಿಂದ‌ ಕೆಳಭಾಗದ ಮಣ್ಣು ಕೊಚ್ಚಿ ಹೋಗಿ ಬೃಹತ್ ಹೊಂಡ ಸೃಷ್ಟಿಯಾಗಿದೆ. ಪರಿಣಾಮವಾಗಿ ಯಾವುದೇ ಕ್ಷಣದಲ್ಲಿ ಸೇತುವೆ ಕುಸಿದು ಬೀಳುವ ಹಂತಕ್ಕೆ ನಿಂತುಬಿಟ್ಟಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಅಲ್ಲದೆ ಒಂದೊಮ್ಮೆ ಈ ಸೇತುವೆ ಕುಸಿದು ಬಿದ್ದರೆ ಮಡಿಕೇರಿ-ಮಂಗಳೂರು-ಮೈಸೂರು ಸಂಪರ್ಕ ಕಡಿತಗೊಳ್ಳಲಿದೆ.

ಗಡಿಭಾಗದಲ್ಲಿ ಪ್ರವಾಹ ಪರಿಸ್ಥಿತಿ, ಹಲವೆಡೆ ರಸ್ತೆ ಕುಸಿತ‌

ಮಂಗಳೂರು: ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲಾ ಗಡಿಭಾಗದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಸಂಪಾಜೆಯ ಅರೇಕಲ್ಲು ಸೇರಿದಂತೆ ಹಲವೆಡೆ ರಸ್ತೆ ಕುಸಿತ‌ಗೊಂಡಿದೆ. ಕರಾವಳಿ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಅಲ್ಲಲ್ಲಿ ಪ್ರವಾಹ ಪರಿಸ್ಥಿತಿಗಳು ತಲೆದೋರುತ್ತಿವೆ. ಸಂಪಾಜೆಯ ಅರೇಕಲ್ಲು ಬಳಿ ರಸ್ತೆ ಕುಸಿತಗೊಂಡಿದ್ದಲ್ಲದೆ, ಅದೇ ಭಾಗದ ಅನೇಕ ಕಡೆಗಳಲ್ಲಿ ರಸ್ತೆ ಕುಸಿತಗಳು ಸಂಭವಿಸಿವೆ.

ಮಳೆ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ನದಿಗಳಲ್ಲಿ ನೀರಿನ ಹರಿವು ಕೂಡ ಹೆಚ್ಚುತ್ತಿದೆ. ಮಳೆಯಿಂದಾಗಿ ಧರೆಗುರುಳಿ ಸೇತುವೆ ಕಡೆಗೆ ನುಗ್ಗಿತ್ತಿದ್ದು, ಅನಾಹುತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಸ್ಥಳೀಯರು ಅಂತಹ ಮರಗಳನ್ನು ತೆರವುಗೊಳಿಸುವಲ್ಲಿ ನಿರತರಾಗಿದ್ದಾರೆ.

Published On - 1:28 pm, Thu, 4 August 22

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್