ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇಯಲ್ಲಿ ಅಪಘಾತ ಹೆಚ್ಚಳ; ವಿಶೇಷ ಸಮಿತಿ ರಚಿಸಿದ ಹೆದ್ದಾರಿ ಪ್ರಾಧಿಕಾರ

ಕಳೆದ 9 ತಿಂಗಳಿನಲ್ಲಿ ಎಕ್ಸ್​ಪ್ರೆಸ್​ ಹೈವೇಯಲ್ಲಿ 550ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ಈ ಅಪಘಾತಗಳಲ್ಲಿ ಮೃತಪಟ್ಟವರ ಬಗ್ಗೆ ಮಾಹಿತಿ ನೀಡುವಂತೆಯೂ ಪ್ರಾಧಿಕಾರ ಆದೇಶಿಸಿದೆ.

ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇಯಲ್ಲಿ ಅಪಘಾತ ಹೆಚ್ಚಳ; ವಿಶೇಷ ಸಮಿತಿ ರಚಿಸಿದ ಹೆದ್ದಾರಿ ಪ್ರಾಧಿಕಾರ
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ Edited By:

Updated on: Jul 17, 2023 | 8:54 PM

ಬೆಂಗಳೂರು, ಜುಲೈ 17: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇಯಲ್ಲಿ (Bengaluru Mysuru expressway) ಅಪಘಾತಗಳು ಹೆಚ್ಚಾಗಿರುವುದರ ಬಗ್ಗೆ ಪರಿಶೀಲನೆ ನಡೆಸಲು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ವಿಶೇಷ ಸಮಿತಿಯೊಂದನ್ನು ರಚನೆ ಮಾಡಿದೆ. ಮೂವರು ತಜ್ಞರನ್ನೊಳಗೊಂಡ ಸಮಿತಿ ಇದಾಗಿದೆ. ರಸ್ತೆ ಸುರಕ್ಷತೆ ಸಲಹೆಗಾರ ಸುದರ್ಶನ್ ಕೆ.ಪೊಪ್ತಿ, ಎನ್​ಹೆಚ್​​​ಎಐ ಉಪ ವ್ಯವಸ್ಥಾಪಕ ಪ್ರವೀಣ್‌ ಕುಮಾ‌ರ್, ಜೈವರ್ಧನ್‌ ಸಿಂಗ್‌ ಅವರು ಸಮಿತಿಯ ಸದಸ್ಯರಾಗಿದ್ದಾರೆ.

ಈ ಸಮಿತಿಯು ಜುಲೈ 20 ರೊಳಗೆ ಎಕ್ಸ್‌ಪ್ರೆಸ್‌ ಹೈವೇಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿ 10 ದಿನದೊಳಗೆ ವರದಿ ನೀಡುವಂತೆ ಪ್ರಾಧಿಕಾರದ ರಸ್ತೆ ಸುರಕ್ಷತೆ ವಿಭಾಗದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುನೀಲ್ ಜಿಂದಾಲ್ ಸಮಿತಿಗೆ ಸೂಚನೆ ನೀಡಿದ್ದಾರೆ.

ಕಳೆದ 9 ತಿಂಗಳಿನಲ್ಲಿ ಎಕ್ಸ್​ಪ್ರೆಸ್​ ಹೈವೇಯಲ್ಲಿ 550ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ಈ ಅಪಘಾತಗಳಲ್ಲಿ ಮೃತಪಟ್ಟವರ ಬಗ್ಗೆ ಮಾಹಿತಿ ನೀಡುವಂತೆಯೂ ಪ್ರಾಧಿಕಾರ ಆದೇಶಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:27 pm, Mon, 17 July 23

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Loading...
Unable to load recommendations.
Follow Us