ಬಳ್ಳಾರಿ ವಿಮ್ಸ್ನಲ್ಲಿ ಎಂಬಿಬಿಎಸ್ ಸೀಟುಗಳ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್
ಬಳ್ಳಾರಿ ಜಿಲ್ಲೆಯ ವಿಮ್ಸ್ನಲ್ಲಿ ಎಂಬಿಬಿಎಸ್ ಸೀಟುಗಳನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ರಾಷ್ಟ್ರೀಯ ವೈದ್ಯಕೀಯ ಆಯೋಗವು ಸೀಟುಗಳನ್ನು ಹೆಚ್ಚಿಸಲು ಅನುಮತಿ ನೀಡಿದೆ.

ಬಳ್ಳಾರಿ: ಜಿಲ್ಲೆಯ ವಿಮ್ಸ್ನಲ್ಲಿ ಎಂಬಿಬಿಎಸ್ ಸೀಟುಗಳನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ ಒಪ್ಪಿಗೆ ಸೂಚಿಸಿದೆ. ಅದರಂತೆ ಇದೇ ಶೈಕ್ಷಣಿಕ ಸಾಲಿನಿಂದ ಬಳ್ಳಾರಿ ವಿಮ್ಸ್ನಲ್ಲಿ 50 ಹೆಚ್ಚುವರಿ ಎಂಬಿಬಿಎಸ್ ಸೀಟುಗಳು ಲಭ್ಯವಾಗಲಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
“ಬಳ್ಳಾರಿಯ ವಿಮ್ಸ್ನಲ್ಲಿ ಎಂಬಿಬಿಎಸ್ ಸೀಟುಗಳನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಅನುಮತಿ ನೀಡಿದ್ದು, ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಸಂತೋಷವಾಗುತ್ತಿದೆ. ಇದೇ ಶೈಕ್ಷಣಿಕ ಸಾಲಿನಿಂದ 50 ಹೆಚ್ಚುವರಿ ಸೀಟುಗಳು ಲಭ್ಯವಾಗಲಿದೆ. ಕಳೆದ 3 ವರ್ಷಗಳಲ್ಲಿ ಕರ್ನಾಟಕ ಬಿಜೆಪಿ ಸರ್ಕಾರವು 4 ಹೊಸ ಮೆಡಿಕಲ್ ಕಾಲೇಜು ಹಾಗೂ 750 ಎಂಬಿಬಿಎಸ್ ಸೀಟುಗಳನ್ನು ಸೃಷ್ಟಿಸಿದೆ” ಎಂದು ಆರೋಗ್ಯ ಸಚಿವರು ಟ್ವೀಟ್ ಮಾಡಿದ್ದಾರೆ.
ಬಳ್ಳಾರಿಯ ವಿಮ್ಸ್ ನಲ್ಲಿ MBBS ಸೀಟುಗಳನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಅನುಮತಿ ನೀಡಿದ್ದು ಇದೇ ಶೈಕ್ಷಣಿಕ ಸಾಲಿನಿಂದ 50 ಹೆಚ್ಚುವರಿ ಸೀಟುಗಳು ಲಭ್ಯವಾಗಲಿದೆ.
ಕಳೆದ 3 ವರ್ಷಗಳಲ್ಲಿ @BJP4Karnataka ಸರ್ಕಾರ 4 ಹೊಸ ಮೆಡಿಕಲ್ ಕಾಲೇಜು ಹಾಗೂ 750 ಎಂಬಿಬಿಎಸ್ ಸೀಟುಗಳನ್ನು ಸೃಷ್ಟಿಸಿದೆ. pic.twitter.com/JHWRWSr8PX
— Dr Sudhakar K (@mla_sudhakar) September 2, 2022
ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:15 pm, Fri, 2 September 22




