ನಕ್ಸಲ್ ಎನ್​ಕೌಂಟರ್: ಕಾರ್ಯಾಚರಣೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು

ಉಡುಪಿ ಜಿಲ್ಲೆಯಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಪೊಲೀಸರು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿರುವ ಬಗ್ಗೆ ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಾಹಿತಿ ನೀಡಿದ್ದು, 20 ವರ್ಷಗಳಿಂದ ಪೊಲೀಸರ ಹುಡುಕಾಟದಲ್ಲಿದ್ದ ಗೌಡ, ಪೊಲೀಸರ ಮೇಲೆ ಗುಂಡು ಹಾರಿಸಿದಾಗ ಪ್ರತಿ ದಾಳಿ ನಡೆದಿದೆ ಎಂದು ಹೇಳಿದ್ದಾರೆ. ಸಚಿವರು ನೀಡಿದ ಮಾಹಿತಿಯ ವಿವರ ಇಲ್ಲಿದೆ.

ನಕ್ಸಲ್ ಎನ್​ಕೌಂಟರ್: ಕಾರ್ಯಾಚರಣೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು
ಗೃಹ ಸಚಿವ ಪರಮೇಶ್ವರ್

Updated on: Nov 19, 2024 | 9:33 AM

ಬೆಂಗಳೂರು, ನವೆಂಬರ್ 19: ಉಡುಪಿ ಜಿಲ್ಲೆಯ ಹೆಬ್ರಿ ಸಮೀಪದ ಕಬ್ಬಿನಾಲೆಯಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಎನ್​ಕೌಂಟರ್​​ನಲ್ಲಿ ಹತ್ಯೆ ಮಾಡಿರುವ ಬಗ್ಗೆ ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ ಮಾಹಿತಿ ನೀಡಿದರು. ಬೆಂಗಳೂರಿನ ಸದಾಶಿವನಗರದಲ್ಲಿ ಮಾತನಾಡಿದ ಅವರು, ವಿಕ್ರಮ್ ಗೌಡ ಎಂಬ ಗ್ರೇಡೆಡ್ ನಕ್ಸಲ್‌ನನ್ನು ನಕ್ಸಲ್ ನಿಗ್ರಹ ಪಡೆ ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ. ಕಳೆದ 20 ವರ್ಷಗಳಿಂದ ಆತನನ್ನು ಪೊಲೀಸರು ಹುಡುಕುತ್ತಿದ್ದರು. ಆತ ತಪ್ಪಿಸಿಕೊಂಡು ಓಡಾಡುತ್ತಿದ್ದ. ಈ ಹಿಂದೆ ನಡೆದ ಅನೇಕ ಎನ್‌ಕೌಂಟರ್​ಗಳಲ್ಲಿ ವಿಕ್ರಂ ಗೌಡ ತಪ್ಪಿಸಿಕೊಂಡಿದ್ದ ಎಂದರು.

ನಿನ್ನೆ ಸಂಜೆ ವಿಕ್ರಂ ಗೌಡ ಎನ್‌ಕೌಂಟರ್ ಆಗಿದೆ. ಆತನ ಚಲನವಲನಗಳನ್ನು ಪೊಲೀಸರು ಗಮನಿಸುತ್ತಿದ್ದರು. ಆತನ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದರು. ಸೋಮವಾರ ರಾತ್ರಿ ಖಚಿತ ಮಾಹಿತಿ‌ ಮೇರೆಗೆ ಕಾರ್ಯಾಚರಣೆ ಮಾಡಿದ್ದಾರೆ. ಆತ ಆತ ಪೊಲೀಸರ ಮೇಲೆ ಗುಂಡಿನ ದಾಳಿ ಮಾಡಿದ್ದ. ಪೊಲೀಸರು ಪ್ರತಿ ದಾಳಿ ನಡೆಸಿದ್ದಾರೆ. ಆತನ ಜತೆಯಲ್ಲಿದ್ದ ಇಬ್ಬರು ಮೂವರು ಓಡಿ ಹೋಗಿದ್ದಾರೆ. ಆ ಭಾಗದಲ್ಲಿ ಕೂಂಬಿಂಗ್ ಮುಂದುವರೆದಿದೆ ಎಂದು ಪರಮೇಶ್ವರ್ ಮಾಹಿತಿ ನೀಡಿದರು.

ಇದನ್ನೂ ಓದಿ: ಉಡುಪಿ: ನಕ್ಸಲ್ ನಿಗ್ರಹ ಪಡೆ ಎನ್​ಕೌಂಟರ್​ಗೆ ನಕ್ಸಲ್ ನಾಯಕ‌ ವಿಕ್ರಂ ಗೌಡ ಬಲಿ

‘ನಕ್ಸಲ್ ಕಾಲ ಮುಗಿಯಿತು ಅಂದುಕೊಂಡಿದ್ದೆವು’

ನಾವು ರಾಜ್ಯದಲ್ಲಿ ನಕ್ಸಲ್ ಕಾಲ ಮುಗಿಯಿತು ಅಂದುಕೊಂಡಿದ್ದೆವು. ಆದರೆ, ಕಳೆದ ವಾರ ರಾಜು ಮತ್ತು ಲತಾ ಎಂಬ ನಕ್ಸಲರು ಪತ್ತೆ ಆದರು. ನಂತರ ಅವರಿಬ್ಬರೂ ತಪ್ಪಿಸಿಕೊಂಡು ಹೋದರೆಂದು ಕೂಂಬಿಂಗ್ ಆಪರೇಷನ್ ನಡೆಸಲಾಯ್ತು. ಕಳೆದ ಒಂದು ವಾರದಿಂದ ಕೂಂಬಿಂಗ್ ನಡೆಯುತ್ತಿತ್ತು. ಆಗ ಇದ್ದಕಿದ್ದ ಹಾಗೆ ವಿಕ್ರಂ ಗೌಡ ಬರುವ ಮಾಹಿತಿ ಸಿಕ್ಕಿತ್ತು. ಆತನ ಎನ್‌ಕೌಂಟರ್ ಮಾಡುವುದು ಆ ಸಂದರ್ಭದಲ್ಲಿ ಪೊಲೀಸರಿಗೆ ಅನಿವಾರ್ಯವಾಯಿತು ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಯಾರು ಈ ವಿಕ್ರಂ ಗೌಡ? ಎನ್​ಕೌಂಟರ್​ಗೆ ಬಲಿಯಾದ ನಕ್ಸಲನ ಹಿನ್ನೆಲೆ ಇಲ್ಲಿದೆ

ನಕ್ಸಲರನ್ನು ಮುಖ್ಯ ವೇದಿಕೆಗೆ ಕರೆತರುವ ಪ್ರಯತ್ನಗಳು ನಡೆಯುತ್ತಿವೆ. ಹಿಂದೆ ಪಾವಗಡ ಭಾಗದಲ್ಲಿ ನಕ್ಸಲರನ್ನು ಮಾತನಾಡಿ ಮುಖ್ಯವೇದಿಕೆಗೆ ಕರೆತರಲಾಗಿತ್ತು. ಈಗಲೂ ಈ ಪ್ರಯತ್ನ ನಡೆಯುತ್ತಿದೆ. ಶರಣಾಗಲು ಬಯಸುವ ನಕ್ಸಲರಿಗೆ ಸಾಮಾನ್ಯ ಬದುಕು ನಡೆಸಲು ಸರ್ಕಾರ ಅವಕಾಶ ಮಾಡಿಕೊಡಲಿದೆ, ಅದು ಇದ್ದಿದ್ದೇ. ಆದರೆ ಅರಣ್ಯ ಭಾಗದಲ್ಲಿದ್ದು, ಪೊಲೀಸರ ಮೇಲೆ ತಪ್ಪಿಸಿಕೊಂಡು ಹೋಗಲು ಪ್ರಯತ್ನ ಮಾಡಿದರೆ ಈ ಥರ ಘಟನೆ ಸಹಜ ಎಂದು ಪರಮೇಶ್ವರ್ ಹೇಳಿದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us