Naxals in Karnataka: ಕರ್ನಾಟಕದಲ್ಲಿ ನಕ್ಸಲ್ ಕರಾಳ ಇತಿಹಾಸ: ಇಲ್ಲಿದೆ ಸಮಗ್ರ ಮಾಹಿತಿ

ಕರ್ನಾಟಕದಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಹೆಚ್ಚಾಗಿದೆ. ಉಡುಪಿ ಜಿಲ್ಲೆಯ ಕಬ್ಬಿನಾಲೆಯಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡನ ಎನ್‌ಕೌಂಟರ್ ಆಗಿದೆ. ಸರ್ಕಾರ ಹಲವು ಬಾರಿ ನಕ್ಸಲ್ ಶರಣಾಗತಿಗೆ ಯೋಜನೆಗಳನ್ನು ಘೋಷಿಸಿದೆ. ಅದರಲ್ಲಿ ಕೆಲವರು ಶರಣಾಗಿದ್ದಾರೆ. ಆದರೆ, ಕೆಲವರು ಶರಣಾಗಲು ನಿರಾಕರಿಸಿದ್ದಾರೆ. ಕರ್ನಾಟಕದ ನಕ್ಸಲ್ ಚಟುವಟಿಕೆಯ ಇತಿಹಾಸ, ಸರ್ಕಾರದ ಪ್ರಯತ್ನಗಳು ಮತ್ತು ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಸಮಗ್ರ ಮಾಹಿತಿ ಇಲ್ಲಿದೆ.

Naxals in Karnataka: ಕರ್ನಾಟಕದಲ್ಲಿ ನಕ್ಸಲ್ ಕರಾಳ ಇತಿಹಾಸ: ಇಲ್ಲಿದೆ ಸಮಗ್ರ ಮಾಹಿತಿ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೂಂಬಿಂಗ್, ನಕ್ಸಲ್ ನಿಗ್ರಹ ಕಾರ್ಯಾಚರಣೆ ತೀವ್ರಗೊಂಡಿದೆ.
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: Ganapathi Sharma

Updated on: Nov 19, 2024 | 11:48 AM

ಚಿಕ್ಕಮಗಳೂರು, ನವೆಂಬರ್ 19: ಕರ್ನಾಟಕದಲ್ಲಿ ಮತ್ತೆ ನಕ್ಸಲ್ ಚಟುವಟಿಕೆ ತೀವ್ರಗೊಂಡಿದ್ದು, ನಕ್ಸಲ್ ನಿಗ್ರಹ ಕಾರ್ಯಾಚರಣೆಯೂ ಚುರುಕುಪಡೆದಿದೆ. ಉಡುಪಿಯ ಹೆಬ್ರಿ ಬಳಿಯ ಕಬ್ಬಿನಾಲೆಯಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಎನ್​ಕೌಂಟರ್ ಮಾಡಲಾಗಿದ್ದು, ಪರಾರಿಯಾದ ನಾಲ್ವರು ನಕ್ಸಲರಿಗಾಗಿ ಶೋಧ ಕಾರ್ಯ ಪ್ರಗತಿಯಲ್ಲಿದೆ. ಈ ಸಂದರ್ಭದಲ್ಲಿ, ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಯ ಹಿನ್ನೆಲೆ ಹಾಗೂ ಇತಿಹಾಸ, ಸರ್ಕಾರ ಜಾರಿಗೆ ತಂದಿದ್ದ ನಕ್ಸಲ್ ಶರಣಾಗತಿ ಯೋಜನೆ ಸೇರಿದಂತೆ ಮುಖ್ಯ ಘಟನಾವಳಿಗಳ ಸಮಗ್ರ ವಿವರ ಇಲ್ಲಿದೆ.

ಶರಣಾಗತಿಗೆ ಹಲವು ಬಾರಿ ಅವಕಾಶ ನೀಡಿದ್ದ ಸರ್ಕಾರ

ನಕ್ಸಲರು ಶರಣಾಗಲು ಹಲವು ಬಾರಿ ರಾಜ್ಯ ಸರ್ಕಾರ ಅವಕಾಶ ನೀಡಿತ್ತು. ಶರಣಾಗುವ ನಕ್ಸಲರಿಗೆ ಪುನರ್ವಸತಿ ಪ್ಯಾಕೇಜ್ ಘೋಷಿಸಿತ್ತು. ಆ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರಲು ನಕ್ಸಲರಿಗೂ ಸರ್ಕಾರ ಅವಕಾಶ ನೀಡಿತ್ತು. ಅದಕ್ಕಾಗಿ ಗೌರಿ ಲಂಕೇಶ್ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿತ್ತು. ಕರ್ನಾಟಕ ಸರ್ಕಾರದ ಪ್ಯಾಕೇಜ್​ಗೆ ಒಪ್ಪಿ 7 ಮಂದಿ ನಕ್ಸಲರು ಶರಣಾಗಿದ್ದರು. 2013-14 ರಲ್ಲಿ ಕಾಂಗ್ರೆಸ್ ಸರ್ಕಾರ ಪ್ಯಾಕೇಜ್ ಘೋಷಿಸಿತ್ತು. ಅದೇ ವರ್ಷ ನಕ್ಸಲರಾದ ನೂರ್ ಶ್ರೀಧರ್, ಸಿರಿಮನೆ ನಾಗರಾಜು ಶರಣಾಗಿದ್ದರು. 2014-15ರಲ್ಲಿ ನೀಲಗುಳಿ ಪದ್ಮನಾಭ, ರೇಣುಕಾ ದಂಪತಿ ಶರಣಾಗಿದ್ದರು. 2017ರಲ್ಲಿ ಚೆನ್ನಮ್ಮ, ಕನ್ಯಾಕುಮಾರಿ, ಶಿವು ಶರಣಾಗಿದ್ದರು. ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಿದ್ದರು.

ಶರಣಾಗತಿ ವಿರೋಧಿಸಿದ್ದ ವಿಕ್ರಂ ಗೌಡ

ನಕ್ಸಲರ ಶರಣಾಗತಿ ವಿರೋಧಿಸಿದ್ದ ವಿಕ್ರಂ ಗೌಡ, ಮುಂಡಗಾರು ಲತಾ ಕೇರಳ, ತಮಿಳುನಾಡು ಅರಣ್ಯ ಪ್ರದೇಶದತ್ತ ತೆರಳಿದ್ದರು. ಸರ್ಕಾರ ಸಾಲು ಸಾಲು ಅವಕಾಶ ನೀಡಿದ್ದರೂ ಬಂದೂಕು ತ್ಯಜಿಸಿರಲಿಲ್ಲ. ಶರಣಾಗತಿ ಎಂಬುದು ನಕ್ಸಲ್ ಸಿದ್ಧಾಂತಕ್ಕೆ ವಿರುದ್ಧವಾದದ್ದು ಎಂದು ವಿಕ್ರಂ ಗೌಡ ನಂಬಿದ್ದ.

ಕರ್ನಾಟಕದಲ್ಲಿ ನಕ್ಸಲ್ ಕರಾಳ ಇತಿಹಾಸ

  • 2006 ಆಗಸ್ಟ್ 23: ಶೃಂಗೇರಿಯ ಕೆರೆಕಟ್ಟೆ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಕಚೇರಿ ಮೇಲೆ ನಕ್ಸಲ್ ದಾಳಿ. ಕೆಲದಿನದ ಬಳಿಕ ಕಾರ್ಕಳ ಮುನಿಯಾಲು ಮುಟ್ಲುಪಾಡಿಯಲ್ಲಿ ಸದಾನಂದ ಶೆಟ್ಟಿ ಅವರ ಬೈಕ್​ಗೆ ಬೆಂಕಿ ಹಚ್ಚಿ ನಕ್ಸಲರಿಂದ ಬೆದರಿಕೆ.
  • 2006 ಡಿಸೆಂಬರ್ 25: ಶೃಂಗೇರಿ ಬಳಿಯ ಕಿಗ್ಗದಲ್ಲಿ ನಕ್ಸಲ್ ದಿನಕರ ಎನ್ಕೌಂಟರ್​ಗೆ ಬಲಿ.
  • 2007 ಮಾರ್ಚ್ 13: ಶಂಕಿತ ನಕ್ಸಲ ಯುವತಿ ಚೆನ್ನಮ್ಮ ಅಮಾಸೆಬೈಲಿನಲ್ಲಿ ಸೆರೆ.
  • 2007 ಜೂನ್ 3: ಶೃಂಗೇರಿ ಕಿಗ್ಗ ಸಮೀಪ ಗುಂಡಘಟ್ಟದಲ್ಲಿ ನಕ್ಸಲರಿಂದ ಅಂಗಡಿ ಮಾಲೀಕ ವೆಂಕಟೇಶ ಹತ್ಯೆ. ಜೂನ್ 7: ಆಗುಂಬೆ ತಲ್ಲೂರಂಗಡಿ ಬಳಿ ಕೆಎಸ್ಆರ್ಟಿಸಿ ಬಸ್​ಗೆ ಬೆಂಕಿ.
  • 2007 ಜುಲೈ 10: ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಪಂ ವ್ಯಾಪ್ತಿಯ ಒಡೆಯರಮಠದಲ್ಲಿ ಪೊಲೀಸ್ ಎನ್ಕೌಂಟರ್ ಗೆ ನಕ್ಸಲ್ ಯುವಕ ಸಿಂಧನೂರಿನ ಗೌತಮ್, ರಾ.ಉದ್ಯಾನ ವಿರೋಧಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪರಮೇಶ್ವರ, ಕಾರ್ಮಿಕ ಸುಂದರೇಶ್, ಮನೆಯ ಯಜಮಾನರಾದ ರಾಮೇಗೌಡ್ಲು, ಕಾವೇರಿ ಬಲಿ.
  • 2007 ಜುಲೈ 17: ಆಗುಂಬೆ ಸಮೀಪದ ಹುಲ್ಲಾರಬೈಲಿನಲ್ಲಿ ಗುಂಡಿನ ಚಕಮಕಿ, ಎಸ್ಐ ವೆಂಕಟೇಶ ಹತ್ಯೆ.
  • 2008 ಮೇ 15: ಹೆಬ್ರಿ ಸಮೀಪದ ಸೀತಾನದಿ ಬಳಿ ನಕ್ಸಲರ ಗುಂಡಿಗೆ ಶಿಕ್ಷಕ ಭೋಜ ಶೆಟ್ಟಿ ಹಾಗೂ ಅವರ ಗೆಳೆಯ ಕೃಷಿಕ ಸುರೇಶ್ ಶೆಟ್ಟಿ ಬಲಿ.
  • 2008 ಜುಲೈ 7: ಬೆಳ್ತಂಗಡಿ ತಾಲೂಕಿನ ಕುತ್ಲೂರು ಹಾಗೂ ಕಾರ್ಕಳದ ತಿಂಗಳಮಕ್ಕಿಯಲ್ಲಿ ನಕ್ಸಲರ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಪತ್ತೆ.
  • 2008 ನವೆಂಬರ್ 13: ಶಿವಮೊಗ್ಗದಲ್ಲಿ ಶಂಕಿತ ನಕ್ಸಲ್ ಜನಾರ್ದನ ಬಂಧನ, ನಕ್ಸಲರು ಬಚ್ಚಿಟ್ಟ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಸ್ಪೋಟಕ ವಶ.
  • 2008 ನವೆಂಬರ್ 20: ಹೊರನಾಡು ಸಮೀಪ ಮಾವಿನಹೊಲ ಬಳಿ ಎನ್ಕೌಂಟರ್. ನಕ್ಸಲರಾದ ಸೊರಬದ ಮನೋಹರ್, ಸಹಚರರಾದ ನವೀನ್, ಅಭಿಲಾಷ್ ಹತ್ಯೆ, ಪೇದೆ ಗುರುಪ್ರಸಾದ್ ಸಾವು.
  • 2008 ಡಿಸೆಂಬರ್ 7: ಹಳ್ಳಿಹೊಳೆ ಸಮೀಪದ ಕೃಷಿಕ ಜಮೀನ್ದಾರ ಕೇಶವ ಯಡಿಯಾಳರನ್ನು ಪೊಲೀಸರ ಮಾಹಿತಿದಾರನೆಂಬ ಆರೋಪದಲ್ಲಿ ಮನೆಗೆ ನುಗ್ಗಿ ನಕ್ಸಲರು ಹತ್ಯೆಗೈದರು.
  • 2009 ಆಗಸ್ಟ್ 22: ಕಿಗ್ಗ ಎನ್ಕೌಂಟರ್, ಎರಡು ದಿನಗಳ ಬಳಿಕ ಶೃಂಗೇರಿಯ ನೆಮ್ಮಾರಿನ ದಿಂಡೋಡಿಯಲ್ಲಿ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಪೊಲೀಸರ ವಶ.
  • 2010 ಮಾರ್ಚ್ 1: ಕಾರ್ಕಳ ತಾಲೂಕಿನ ಮುನಿಯಾಲು ಮುಟ್ಲುಪಾಡಿಯ ಮೈರೋಳಿ ಎಂಬಲ್ಲಿ ಪೊಲೀಸರ ಎನ್ಕೌಂಟರ್ ಗೆ ಬೆಳ್ತಂಗಡಿ ತಾಲೂಕು ಕುತ್ಲೂರಿನ ವಸಂತ ಗೌಡ್ಲು ಯಾನೆ ಆನಂದ ಹತ್ಯೆ.
  • 2011 ಅಗಸ್ಟ್ 9: ಬೆಳ್ತಂಗಡಿ ತಾಲೂಕು ಇಂದಬೆಟ್ಟು ಗ್ರಾಪಂ ವ್ಯಾಪ್ತಿಯ ನಾವೂರ ಗ್ರಾಮದ ಮಂಜಲದಲ್ಲಿ ಬೆಳಗಿನ ಜಾವ ನಕ್ಸಲ್ ನಿಗ್ರಹದಳದ ಪೊಲೀಸರ ಗನ್ ಮಿಸ್ ಫೈರ್ ಆಗಿ ಎಎನ್ಎಫ್ ಸಿಬ್ಬಂದಿ ಮಹಾದೇವ ಮಾನೆ ಬಲಿ.
  • 2011 ಡಿಸೆಂಬರ್ 19: ಹೆಬ್ರಿ ಕಬ್ಬಿನಾಲೆ ಸಮೀಪದ ತಿಂಗಳ ಮಕ್ಕಿಯ ಸದಾಶಿವ ಗೌಡ (49) ತೆಂಗಿನಮಾರು ಮನೆಯಿಂದ ನಾಪತ್ತೆ, 22ರಂದು ವಿಷಯ ಬಹಿರಂಗ. ಶಂಕಿತ ನಕ್ಸಲ್ ವಿಶ್ವನಿಂದ ಪತ್ರಕರ್ತರಿಗೆ ಮಾಹಿತಿ.
  • 2011 ಡಿಸೆಂಬರ್ 28: ತೆಂಗಿನಮಾರುವಿನಿಂದ ಎರಡು ಕಿ.ಮೀ. ದೂರ ದಟ್ಟಾರಣ್ಯದಲ್ಲಿ ಸದಾಶಿವ ಗೌಡ ಎಂಬವರ ಶವ ಕೈಕಾಲು ಕಟ್ಟಿ ಸ್ಥಿತಿಯಲ್ಲಿ ಗೋಳಿಮರದಡಿ ಪತ್ತೆ. ನಕ್ಸಲರ ಬರಹವೂ ಸಮೀಪದಲ್ಲಿ ದೊರಕಿತ್ತು.
  • 2024 ನವೆಂಬರ್ 18: ಕಾರ್ಕಳ ತಾಲೂಕಿನ ಹೆಬ್ರಿಯ ಪೀತಬೈಲುವಿನಲ್ಲಿ ಎಎನ್​​ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿ.

ಇದನ್ನೂ ಓದಿ: ಯಾರು ಈ ವಿಕ್ರಂ ಗೌಡ? ಎನ್​ಕೌಂಟರ್​ಗೆ ಬಲಿಯಾದ ನಕ್ಸಲನ ಹಿನ್ನೆಲೆ ಇಲ್ಲಿದೆ

ನಕ್ಸಲರ ವಿರುದ್ಧ ಎಫ್​ಐಆರ್

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಕ್ಸಲ್ ಚಟುವಟಿಕೆ ಪ್ರಕರಣ ಸಂಬಂಧ ನಕ್ಸಲ್ ಮುಖಂಡಾರ ಮುಂಡಗಾರು ಲತಾ, ಜಯಣ್ಣ ಸೇರಿ ಮೂವರ ವಿರುದ್ಧ ಜಯಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. UAPA 1967 ಕಾಯ್ದೆ ಸೇರಿದಂತೆ, 329(4), 351(2), 61(2), 147, BNS 3&25, ಶಸ್ತ್ರಾಸ್ತ್ರ ಕಾಯ್ದೆ 110(B) 13, 16, 18, 20, 38ರ ಅಡಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಉಡುಪಿ: ನಕ್ಸಲ್ ನಿಗ್ರಹ ಪಡೆ ಎನ್​ಕೌಂಟರ್​ಗೆ ನಕ್ಸಲ್ ನಾಯಕ‌ ವಿಕ್ರಂ ಗೌಡ ಬಲಿ

ನಕ್ಸಲರು ಪರಾರಿಯಾದ ಸ್ಥಳದಲ್ಲಿ ಶಸ್ತ್ರಾಸ್ತ್ರ ಪತ್ತೆಯಾಗಿತ್ತು. 3 ಎಸ್​ಬಿಎಂಎಲ್ ಬಂದೂಕು, ಮದ್ದುಗುಂಡು ಪತ್ತೆಯಾಗಿತ್ತು. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಕಡೆಗುಂಡಿ ಗ್ರಾಮದ ಸುಬ್ಬೇಗೌಡ ಎಂಬವರ ಮನೆಗೆ ಬಂದಿದ್ದ ಶಸ್ತ್ರಸಜ್ಜಿತ ನಕ್ಸಲರ ತಂಡ, ಕಡೆಗುಂಡಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಪರಾರಿಯಾಗಿದ್ದರು. ನಾಪತ್ತೆಯಾದ ಮುಂಡಗಾರು ಲತಾ ತಂಡಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ