AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೆ ನಕ್ಸಲರ ಸದ್ದು: ಒಂಟಿ ಮನೆಗಳಿಗೆ ಭೇಟಿ ನೀಡಿರುವ ಶಂಕೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೆ ನಕ್ಸಲ್​ ಚಟುವಟಿಕೆ ಶಂಕೆ ವ್ಯಕ್ತವಾಗಿದೆ. ಯಡಗುಂದಿ ಗ್ರಾಮಗಳಲ್ಲಿ ನಕ್ಸಲರು ಗ್ರಾಮಸ್ಥರೊಂದಿಗೆ ಸಭೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದು, ಉಡುಪಿ-ಚಿಕ್ಕಮಗಳೂರು ಗಡಿ ಭಾಗದಲ್ಲಿ ಸಿಬ್ಬಂದಿಗಳು ಫುಲ್ ಅಲರ್ಟ್ ಆಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೆ ನಕ್ಸಲರ ಸದ್ದು: ಒಂಟಿ ಮನೆಗಳಿಗೆ ಭೇಟಿ ನೀಡಿರುವ ಶಂಕೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೆ ನಕ್ಸಲರ ಸದ್ದು: ಒಂಟಿ ಮನೆಗಳಿಗೆ ಭೇಟಿ ನೀಡಿರುವ ಶಂಕೆ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Nov 11, 2024 | 6:09 PM

Share

ಚಿಕ್ಕಮಗಳೂರು, ನವೆಂಬರ್​ 11: ಕಳೆದ ಕೆಲ ದಿನಗಳ ಹಿಂದೆ ಉಡುಪಿ ಜಿಲ್ಲೆಯಲ್ಲಿ ಮತ್ತೆ ನಕ್ಸಲರ (Naxal) ಓಡಾಟದ ಬಗ್ಗೆ ಮಾಹಿತಿ ದೊರೆತಿತ್ತು. ಇದೀಗ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮತ್ತೆ ನಕ್ಸಲರ ಸದ್ದು ಕೇಳಿಬಂದಿದ್ದು, ಜಯಪುರ ಠಾಣಾ ವ್ಯಾಪ್ತಿಯ ಮನೆಗಳಿಗೆ ಮನೆಗಳಿಗೆ ಭೇಟಿ ನೀಡಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಪೊಲೀಸ್​ ವರಿಷ್ಠಾಧಿಕಾರಿ ವಿಕ್ರಂ ಆಮ್ಟೆ ಮತ್ತು ನಕ್ಸಲ್​ ನಿಗ್ರಹ ಪಡೆ ಎಸ್​ಪಿ ಜಿತೇಂದ್ರ ನೇತೃತ್ವದಲ್ಲಿ ತನಿಖೆ ಮಾಡಲಾಗಿದೆ.

ಅರಣ್ಯ ಒತ್ತುವರಿ ಮತ್ತು ಕಸ್ತೂರಿ ರಂಗನ್​​ ವರದಿ ಸಂಬಂಧ ಕೊಪ್ಪ ತಾಲೂಕಿನ ಯಡಗುಂದಿ ಗ್ರಾಮಕ್ಕೆ ನಕ್ಸಲರು ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಭೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಗ್ರಾಮದ ಪ್ರತಿ ಮನೆಯಲ್ಲೂ ಪೊಲೀಸರಿಂದ ಶೋಧ ಮಾಡಲಾಗಿದೆ. ಗ್ರಾಮಸ್ಥರಿಂದ ಎಎನ್ಎಫ್​​​ ಮತ್ತು ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ.

ಇನ್ನು ಕೆರೆಕಟ್ಟೆ, ಕುದುರೆಮುಖ, ತನಿಕೋಡು ಚೆಕ್​​ಪೋಸ್ಟ್​ ಭಾಗದಲ್ಲಿ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದ್ದು, ಉಡುಪಿ-ಚಿಕ್ಕಮಗಳೂರು ಗಡಿ ಭಾಗದಲ್ಲಿ ಸಿಬ್ಬಂದಿಗಳು ಫುಲ್ ಅಲರ್ಟ್ ಆಗಿದ್ದಾರೆ.

ಉಡುಪಿ ಜಿಲ್ಲೆಯಲ್ಲೂ ಮತ್ತೆ ನಕ್ಸಲ್​ ಚಟುವಟಿಕೆ ಶಂಕೆ

ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಈದು ಗ್ರಾಮದಲ್ಲಿ ನಕ್ಸಲರ ಓಡಾಟದ ಶಂಕೆ ವ್ಯಕ್ತವಾಗಿತ್ತು. ಹಾಗಾಗಿ ನಕ್ಸಲ್​ ನಿಗ್ರಹ ಪಡೆ ಕಾರ್ಯಾಚರಣೆ ಮಾಡಿದ್ದರು. ಕೆಲವು ದಿನಗಳಿಂದ ಅನುಮಾನಾಸ್ಪದ ವ್ಯಕ್ತಿಗಳು ಓಡಾಡುತ್ತಿದ್ದಾರೆ ಎಂಬ ವದಂತಿಗಳು ಹಬ್ಬಿದ್ದವು. ಈ ಬಗ್ಗೆ ಎಎನ್ಎಫ್ ಸಿಬ್ಬಂದಿ ಸ್ಥಳೀಯರನ್ನು ವಿಚಾಣೆ ಮಾಡಿದ್ದಾರೆ. ಆದರೆ ಸ್ಥಳೀಯರಿಂದ ಯಾವುದೇ ಮಾಹಿತಿ ದೊರೆತ್ತಿಲ್ಲ ಎಂಬುವುದು ಎಎನ್ಎಫ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ಸಮೀಪ ನಕ್ಸಲರ ಚಲನವಲನ ಪತ್ತೆ; ಮನೆಗೆ ಭೇಟಿ ನೀಡಿ ಮೊಬೈಲ್ ಚಾರ್ಚ್ ಮಾಡಿರುವ ತಂಡ

ನಕ್ಸಲರು ಪಶ್ಚಿಮ ಘಟ್ಟಗಳ ತಪ್ಪಲಿನ ಪ್ರದೇಶಗಳಲ್ಲಿ ನುಸುಳಿದ್ದಿರಬಹುದು ಎಂದು ಶಂಕಿಸಲಾಗಿದೆ. ಸದ್ಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವಿವಿಧ ಅರಣ್ಯ ಪ್ರದೇಶಗಳಲ್ಲಿ ಅಧಿಕಾರಿಗಳು ಕಾರ್ಯಾಚರಣೆ ಮಾಡಿದ್ದಾರೆ. ಸದ್ಯ ಈದುವರೆಗೆ ನಕ್ಸಲ್​​ರ ಯಾವುದೇ ಸುಳಿವು ಪತ್ತೆಯಾಗಿಲ್ಲ. ಹೀಗಾಗಿ ಸಾರ್ವಜನಿಕರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಎಎನ್​​ಎಫ್​​ ಅಧಿಕಾರಿಗಳು ಸ್ಥಳೀಯರಿಗೆ ಧೈರ್ಯ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?