ಕೇಂದ್ರದಲ್ಲಿ ಸಚಿವ ಸ್ಥಾನ: ಡಾ. ಮಂಜುನಾಥ್, ಕುಮಾರಸ್ವಾಮಿ ಹೇಳಿದ್ದಿಷ್ಟು

ಸರ್ಕಾರ ರಚನೆ ಪ್ರಕ್ರಿಯೆ ಅಂತಿಮಗೊಳಿಸುವುದಕ್ಕಾಗಿ ಇಂದು ದೆಹಲಿಯಲ್ಲಿ ಎನ್​ಡಿಎ ಸಭೆ ನಡೆಯುತ್ತಿದೆ. ಅದಕ್ಕೂ ಮುನ್ನ ಮಾತನಾಡಿದ ಬೆಂಗಳೂರು ಗ್ರಾಮಾಂತರ ನೂತನ ಸಂಸದ ಡಾ. ಮಂಜುನಾಥ್ ಹಾಗೂ ಮಂಡ್ಯ ಜೆಡಿಎಸ್ ಸಂಸದ ಹೆಚ್​ಡಿ ಕುಮಾರಸ್ವಾಮಿ ಸಚಿವ ಸ್ಥಾನ ನಿರೀಕ್ಷೆಯ ಬಗ್ಗೆ ಹೇಳಿದ್ದೇನು? ಇಲ್ಲಿದೆ ವಿವರ.

ಕೇಂದ್ರದಲ್ಲಿ ಸಚಿವ ಸ್ಥಾನ: ಡಾ. ಮಂಜುನಾಥ್, ಕುಮಾರಸ್ವಾಮಿ ಹೇಳಿದ್ದಿಷ್ಟು
ಡಾ. ಮಂಜುನಾಥ್, ಕುಮಾರಸ್ವಾಮಿ
Follow us
ಹರೀಶ್ ಜಿ.ಆರ್​. ನವದೆಹಲಿ
| Updated By: Ganapathi Sharma

Updated on: Jun 07, 2024 | 11:05 AM

ನವದೆಹಲಿ, ಜೂನ್ 7: ಕೇಂದ್ರದಲ್ಲಿ ಎನ್​ಡಿಎ ಸರ್ಕಾರ (NDA Government) ರಚನೆಗೆ ಸಿದ್ಧತೆ ಬಿರುಸಿನಿಂದ ಸಾಗುತ್ತಿದ್ದು, ಇಂದು ಮೈತ್ರಿಕೂಟದ ಸಭೆ ದೆಹಲಿಯಲ್ಲಿ ನಡೆಯುತ್ತಿದೆ. ಸಭೆಗೆ ತೆರಳುವುದಕ್ಕೂ ಮುನ್ನ ಮಾಧ್ಯಮ ಪ್ರತಿನಿಧಿಗಳ ಬಳಿ ಮಾತನಾಡಿದ ಬೆಂಗಳೂರು ಗ್ರಾಮಾಂತರ ನೂತನ ಸಂಸದ ಡಾ. ಮಂಜುನಾಥ್ (Dr CN Manjunath), ನರೇಂದ್ರ ಮೋದಿ 3ನೇ ಬಾರಿ ಪ್ರಧಾನಿ ಆಗುತ್ತಿರುವುದು ಸಂತೋಷದ ವಿಷಯ ಎಂದರು.

ಜವಾಹರ್ ಲಾಲ್ ನೆಹರು ಬಳಿಕ ಮೋದಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿದ್ದಾರೆ. ನಾನು ಸಚಿವ ಆಗಬೇಕೆಂದು ಜನರ ನಿರೀಕ್ಷೆ ಇದೆ. ಹೆಚ್​ಡಿ ಕುಮಾರಸ್ವಾಮಿ ನನ್ನ ಹೆಸರು ಹೇಳಿರುವ ಬಗ್ಗೆ ಮಾಹಿತಿ ಇಲ್ಲ. ಮೊದಲು ಎನ್​ಡಿಎ ಸರ್ಕಾರ ರಚನೆ ಆಗಬೇಕು ಅಷ್ಟೆ. ಮೈತ್ರಿ ಸರ್ಕಾರ ಆಗಿರುವುದರಿಂದ ಅದರದ್ದೇ ಆದ ಸಮಸ್ಯೆಗಳು ಇರುತ್ತವೆ. ಸಚಿವ ಸ್ಥಾನದ ಬಗ್ಗೆ ಈಗಲೇ ಏನೂ ಹೇಳಲು ಸಾಧ್ಯವಿಲ್ಲ. ಹಾಗೆಂದು, ನಾನು ಆರೋಗ್ಯ ಸಚಿವ ಆಗಬೇಕು ಎಂಬುದು ಜನರ ಅನಿಸಿಕೆಯಷ್ಟೆ ಎಂದು ಮಂಜುನಾಥ್ ಹೇಳಿದರು.

ಈ ಮಧ್ಯೆ, ಕೇಂದ್ರ ಸಚಿವ ಸ್ಥಾನದ ಬಗ್ಗೆ ನನಗೆ ಅಧಿಕೃತ ಮಾಹಿತಿ ಬಂದಿಲ್ಲ ಎಂದು ದೆಹಲಿಯಲ್ಲಿ ಜೆಡಿಎಸ್ ಸಂಸದ ಹೆಚ್​​ಡಿ ಕುಮಾರಸ್ವಾಮಿ ಹೇಳಿದ್ದಾರೆ. ಇವತ್ತಿನ ಎನ್​ಡಿಎ ಸಭೆಯಲ್ಲಿ ಭಾಗವಹಿಸಲು ಬಂದಿದ್ದೇನೆ. ಮೋದಿ ನಾಯಕತ್ವದಲ್ಲಿ ಮತ್ತೆ ಸರ್ಕಾರ ಎಂಬ ಮಾಹಿತಿ ಇದೆ. ನಮಗೂ ಸಹ ಸಚಿವ ಸ್ಥಾನ ನೀಡ್ತಾರೆ ಎಂಬ ಮಾಹಿತಿ ಇದೆ. ನಮ್ಮಿಂದ ಒಳ್ಳೆ ಕೆಲಸ ಮಾಡಿಸಲು ಸಾಧ್ಯ ಎಂಬದು ವರಿಷ್ಠರಿಗೆ ಗೊತ್ತಿದೆ. ರಾಜ್ಯದ ಜನರಿಗೂ ಸಹ ಒಂದು ವಿಶ್ವಾಸ ಇದೆ ಎಂದರು.

ನಾಡಿನ ಜನತೆಗೆ ಒಳ್ಳೆಯದಾಗುವ ಖಾತೆ ಸಿಕ್ಕಿದರೆ ಉತ್ತಮ ಕೆಲಸ ಮಾಡುವೆ. ಮಂಜುನಾಥ್​ಗೆ ಖಾತೆ ನೀಡುವ ಬಗ್ಗೆ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ. ನನಗೆ ಮಂತ್ರಿ ಗಿರಿ ಕೊಡಬೇಕು ಎಂದು ಒತ್ತಡ ಹಾಕುತ್ತಿಲ್ಲ. ಬಿಜೆಪಿ ವರಿಷ್ಠರು ನೀಡಿದರೆ ಜವಾಬ್ದಾರಿ ನಿರ್ವಹಿಸುತ್ತೇನೆ ಅಷ್ಟೇ ಎಂದು ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: ಸಚಿವ ಸ್ಥಾನಕ್ಕೆ ಮಿತ್ರಪಕ್ಷಗಳ ಬೇಡಿಕೆಯೇನು, ಮಂತ್ರಿಗಿರಿ ನೀಡಲು ಬಿಜೆಪಿ ಸೂತ್ರವೇನು? ಇಲ್ಲಿದೆ ವಿವರ

ಇಂದು ನಡೆಯುವ ಎನ್​ಡಿಎ ಸಭೆಯಲ್ಲಿ ಸರ್ಕಾರ ರಚನೆ ತೀರ್ಮಾನ ಅಂತಿಮಗೊಳ್ಳುವ ನಿರೀಕ್ಷೆ ಇದೆ. ಮೋದಿ ಅವರು ಪ್ರಧಾನಿಯಾಗಿ ಭಾನುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್