ಭಾನುವಾರ ವೈದ್ಯಕೀಯ ನೀಟ್ ಪರೀಕ್ಷೆ: ಅಭ್ಯರ್ಥಿಗಳಿಗೆ ಮೊದಲ‌ ಡೋಸ್ ಲಸಿಕೆ ಕಡ್ಡಾಯ, ಬೆಳಗ್ಗೆ 11 ರಿಂದ ದಾಖಲೆಗಳ ಪರಿಶೀಲನೆ

NEET Examination September 12: ನೀಟ್ ಪರೀಕ್ಷಾರ್ಥಿಗಳಿಗೆ ಮೊದಲ‌ ಡೋಸ್ ಲಸಿಕೆ ಕಡ್ಡಾಯ ಮಾಡಲಾಗಿದೆ. ವ್ಯಾಕ್ಸಿನ್ ರಿಪೋರ್ಟ್, ಮೆಸೇಜ್ ಪರಿಶೀಲನೆ ಬಳಿಕ ಪರೀಕ್ಷೆಗೆ ಅವಕಾಶ ಕಲ್ಪಿಸಲಾಗುವುದು.

ಭಾನುವಾರ ವೈದ್ಯಕೀಯ ನೀಟ್ ಪರೀಕ್ಷೆ: ಅಭ್ಯರ್ಥಿಗಳಿಗೆ ಮೊದಲ‌ ಡೋಸ್ ಲಸಿಕೆ ಕಡ್ಡಾಯ, ಬೆಳಗ್ಗೆ 11 ರಿಂದ ದಾಖಲೆಗಳ ಪರಿಶೀಲನೆ
ಭಾನುವಾರ ವೈದ್ಯಕೀಯ ನೀಟ್ ಪರೀಕ್ಷೆ: ಅಭ್ಯರ್ಥಿಗಳಿಗೆ ಮೊದಲ‌ ಡೋಸ್ ಲಸಿಕೆ ಕಡ್ಡಾಯ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Sep 11, 2021 | 1:42 PM

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್​​ಗಳಿಗೆ ನಾಳೆ ದೇಶದಾದ್ಯಂತ 2020-21ನೇ ಸಾಲಿನ ನೀಟ್ ಪ್ರವೇಶ ಪರೀಕ್ಷೆ ನಡೆಯಲಿದೆ. ನಾಳೆ ಭಾನುವಾರ ಮಧ್ಯಾಹ್ನ 2ರಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ದೇಶಾದ್ಯಂತ 201 ಪ್ರಮುಖ ನಗರಗಳಲ್ಲಿ ನಾಳೆ ಪರೀಕ್ಷೆ ನಡೆಯಲಿದ್ದು, ಕರ್ನಾಟಕದ ಒಟ್ಟು 9 ನಗರಗಳಲ್ಲಿಯೂ ಪ್ರವೇಶ ಪರೀಕ್ಷೆ ಆಯೋಜಿಸಲಾಗಿದೆ.

ಈ ಹಿನ್ನೆಲೆಯಲ್ಲಿ ನೀಟ್ ಪರೀಕ್ಷಾರ್ಥಿಗಳಿಗೆ (NEET-ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ) ಮೊದಲ‌ ಡೋಸ್ ಲಸಿಕೆ ಕಡ್ಡಾಯ ಮಾಡಲಾಗಿದೆ. ವ್ಯಾಕ್ಸಿನ್ ರಿಪೋರ್ಟ್, ಮೆಸೇಜ್ ಪರಿಶೀಲನೆ ಬಳಿಕ ಪರೀಕ್ಷೆಗೆ ಅವಕಾಶ ಕಲ್ಪಿಸಲಾಗುವುದು. ಲಸಿಕೆ ಪಡೆಯದ ನೀಟ್ ವಿದ್ಯಾರ್ಥಿಗಳಿಗೆ (National Eligibility cum Entrance Test exam -NEET) ಪರೀಕ್ಷೆಗೆ ಅವಕಾಶ ಇಲ್ಲ. ಆದರೆ ಸೋಂಕಿತ ವಿದ್ಯಾರ್ಥಿಗಳೂ ಪರೀಕ್ಷೆ ಬರೆಯಲು ಅವಕಾಶವಿದೆ. ಸೋಂಕಿನ ಲಕ್ಷಣ ಇರುವ ಅಭ್ಯರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಕೆಮ್ಮು, ಜ್ವರ, ನೆಗಡಿಯಂತಹ ಲಕ್ಷಣವಿರುವವರಿಗೆ ಸಹ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.

ಈ ಬಾರಿ ಕೋವಿಡ್ ಮಾರ್ಗಸೂಚಿ ಅನುಸರಿಸಿ ನೀಟ್ ಪರೀಕ್ಷೆ ಬರೆಯಬೇಕಿದೆ. ಪರೀಕ್ಷೆ ಮುಗಿಯುವವರೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಸಾಮಾಜಿಕ ಅಂತರ ಕಾಪಾಡುವುದು, ಹ್ಯಾಂಡ್ ಸ್ಯಾನಿಟೈಸರ್ ಬಳಸುವಂತೆ ಸೂಚನೆ ನೀಡಲಾಗಿದೆ. ಒಂದು ಬೇಂಚಿಗೆ ಒಬ್ಬ ಅಭ್ಯರ್ಥಿ ಕೂರಲು ಅವಕಾಶವಿದ್ದು, ಜಿಗ್ ಜಾಗ್ ಮಾದರಿಯಲ್ಲಿ ಕುಳಿತುಕೊಳ್ಳಲು ಸೂಚನೆ ನೀಡಲಾಗಿದೆ.

ಪರೀಕ್ಷಾ ಕೇಂದ್ರದಲ್ಲಿ ಬೆಳಗ್ಗೆ 11 ರಿಂದ ದಾಖಲೆಗಳ ಪರಿಶೀಲನೆ ಪ್ರಾರಂಭವಾಗಲಿದೆ. ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ದಾಖಲೆಗಳ ಪರಿಶೀಲನಾ ಕಾರ್ಯ ನೆರವೇರಲಿದೆ. ಅರ್ಧ ಗಂಟೆ ಮುಂಚಿತವಾಗಿ ಪರೀಕ್ಷಾ ಕೊಠಡಿಯೊಳಗೆ ಹಾಜರಿರಬೇಕು. ವಿದ್ಯಾರ್ಥಿಗಳು ಪರೀಕ್ಷೆಗೆ ಪೆನ್ ಕೊಂಡೊಯ್ಯುವಂತಿಲ್ಲ. ಪರೀಕ್ಷಾ ಕೇಂದ್ರದಲ್ಲಿ ಕೊಡುವ ಪೆನ್ ಬಳಸಿ ಪರೀಕ್ಷೆ ಬರೆಯಬೇಕು. ವಾಚ್, ಫುಲ್ ಸ್ಲೀವ್ಸ್ ಡ್ರೆಸ್, ಶೂ, ಬ್ಯಾಗ್, ಪರ್ಸ್ ನಿಷೇಧ ಮಾಡಲಾಗಿದೆ.

ಕ್ಯಾಲ್ಕುಲೇಟರ್, ಮೊಬೈಲ್ ನಂತಹ ಎಲೆಕ್ಟ್ರಾನಿಕ್ ವಸ್ತುಗಳನ್ನು ಕೊಂಡೊಯ್ಯುವಂತಿಲ್ಲ. ಪರೀಕ್ಷಾರ್ಥಿಗಳು ಪಾಸ್ ಪೋರ್ಟ್ ಸೈಸ್ ಫೋಟೊ ಕೊಂಡೊಯ್ಯಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಗುರುತಿನ ಚೀಟಿ ಕಡ್ಡಾಯವಾಗಿದೆ.

ಬೆಂಗಳೂರು, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಕಲಬುರಗಿ, ಮೈಸೂರು, ಮಂಗಳೂರು, ಉಡುಪಿಯಲ್ಲಿ ಈ ಪ್ರವೇಶ ಪರೀಕ್ಷೆ ನಡೆಯಲಿದೆ. ನೀಟ್​ಗೆ 16 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ನೊಂದಣಿ ಮಾಡಿಕೊಂಡಿದ್ದಾರೆ. ಒಟ್ಟು 180 ಪ್ರಶ್ನೆಗಳಿದ್ದು, ಪ್ರತಿ ಪ್ರಶ್ನೆಗೆ 4 ಅಂಕ ಗಳಿರಲಿವೆ. ಒಟ್ಟು 720 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಪ್ರತಿ ಪ್ರಶ್ನೆಯ ತಪ್ಪು ಉತ್ತರಕ್ಕೆ ಒಂದು ನೆಗೆಟಿವ್ ಅಂಕ ಕಡಿತಗೊಳಿಸಲಾಗುವುದು. 3 ಗಂಟೆಗಳ ಕಾಲ ಪರೀಕ್ಷೆ ಒಟ್ಟು 13 ಭಾಷೆಗಳಲ್ಲಿ ನಡೆಯಲಿದೆ. ರಸಾಯನಶಾಸ್ತ್ರ, ಭೌತಶಾಸ್ತ್ರ, ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ ವಿಷಯಗಳಿಗೆ ತಲಾ 45 ಪ್ರಶ್ನೆಗಳು ನಿಗದಿಪಡಿಸಲಾಗಿದೆ.

Also Read: NEET UG Exam: ನೀಟ್ ಪರೀಕ್ಷೆ ಮುಂದೂಡಿಕೆ ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್​; ಸೆ. 12ಕ್ಕೆ ಎಕ್ಸಾಂ ನಡೆಯುವುದು ಖಚಿತ

Also Read: ಅಮೆರಿಕಾದ ಪ್ರತಿಷ್ಠೆಯನ್ನು ಅಕ್ಷರಶಃ ಮಣ್ಣುಪಾಲು ಮಾಡಿದ ಉಗ್ರ ದಿನ ಇಂದು; 9/11 ದಾಳಿಯಿಂದ ಅಮೆರಿಕಾ ಕಲಿತ ಪಾಠವೇನು?

(neet examination on september 12 corona vaccination must for all participants)

Published On - 1:31 pm, Sat, 11 September 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ