AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET- PG: ಸೇವಾನಿರತ ವೈದ್ಯರ ಪಿಜಿ ಸೀಟು ಮೀಸಲಾತಿ ಇಳಿಕೆ ಆದೇಶ ರದ್ದು

ವೈದ್ಯಕೀಯ ಪ್ರವೇಶ ಪ್ರಕ್ರಿಯೆಯಲ್ಲಿ ಸೇವಾ ನಿರತ ವೈದ್ಯರಿಗೆ ನೀಡುವ ಮೀಸಲಾತಿಯನ್ನು ಕಡಿತಗೊಳಿಸಿರುವ ರಾಜ್ಯದ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್​ ರದ್ದುಪಡಿಸಿದೆ.

NEET- PG: ಸೇವಾನಿರತ ವೈದ್ಯರ ಪಿಜಿ ಸೀಟು ಮೀಸಲಾತಿ ಇಳಿಕೆ ಆದೇಶ ರದ್ದು
NEET-PG
TV9 Web
| Edited By: |

Updated on: Oct 25, 2022 | 9:59 AM

Share

ವೈದ್ಯಕೀಯ ಪ್ರವೇಶ ಪ್ರಕ್ರಿಯೆಯಲ್ಲಿ ಸೇವಾ ನಿರತ ವೈದ್ಯರಿಗೆ ನೀಡುವ ಮೀಸಲಾತಿಯನ್ನು ಕಡಿತಗೊಳಿಸಿರುವ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್​ ರದ್ದುಪಡಿಸಿದೆ. ಹೀಗಾಗಿ ಈ ಮೊದಲಿದ್ದ ಮೀಸಲಾತಿ ಮುಂದುವರೆಯಲಿದೆ.

ಕರ್ನಾಟಕ ಹೈಕೋರ್ಟ್ ಅಕ್ಟೋಬರ್ 6, 2022 ರಂದು ಹೊರಡಿಸಲಾದ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ರದ್ದುಗೊಳಿಸಿದೆ, ಅದರ ಮೂಲಕ 2022 ರ ಪಿಜಿ-ನೀಟ್ ಪರೀಕ್ಷೆಯಿಂದ ಸೇವಾನಿರತ ಅಭ್ಯರ್ಥಿಗಳಿಗೆ ಮೀಸಲಿಟ್ಟ ಸೀಟುಗಳನ್ನು ಶೇಕಡಾ 30 ರಿಂದ ಶೇಕಡಾ 15 ಕ್ಕೆ ಇಳಿಸಲಾಗಿದೆ.

ಈಗಾಗಲೇ ಕರ್ನಾಟಕದಾದ್ಯಂತ ಸರ್ಕಾರಿ ಸೇವೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರು, ಸೇವಾನಿರತ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿ ಹೈಕೋರ್ಟ್ ಈ ಆದೇಶ ನೀಡಿದೆ. ಅಕ್ಟೋಬರ್ 14 ರಂದು ಸಂಬಂಧಿತ ಆದೇಶದಲ್ಲಿ ನ್ಯಾಯಾಲಯದ ಮತ್ತೊಂದು ವಿಭಾಗೀಯ ಪೀಠವು ಮಧ್ಯಂತರ ಆದೇಶವನ್ನು ನೀಡಿತ್ತು.

ಇದಲ್ಲದೆ ಅಕ್ಟೋಬರ್ 9 ರಂದು ವೈದ್ಯಕೀಯ ಶಿಕ್ಷಣ ಇಲಾಖೆ ಹೊರಡಿಸಿದ್ದ ಸೀಟ್ ಮ್ಯಾಟ್ರಿಕ್ಸ್​ನ್ನು ರದ್ದುಗೊಳಿಸಿ ಹೊಸ ಪಟ್ಟಿಯನ್ನು ಪ್ರಕಟಿಸಲು ಸೂಚಿಸಿದೆ.

ಹಾಗೆಯೇ ಕಾಲೇಜು ಲಭ್ಯತೆ ಬಗ್ಗೆಯೂ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರತಿ ಅಭ್ಯರ್ಥಿಯೂ 1:1 ಬದಲಾಗಿ 1:5 ಅನುಪಾತದಲ್ಲಿ ಸೀಟು ಆಯ್ಕೆಗೆ ಅವಕಾಶ ನೀಡಬೇಕು ಎಂದು ಹೈಕೋರ್ಟ್​ ವಿಭಾಗೀಯ ಪೀಠ ಸೂಚಿಸಿದೆ. ಹೈಕೋರ್ಟ್ ತನ್ನ ತೀರ್ಪಿನಲ್ಲಿ ಕೋಟಾಗೆ ಸಂಬಂಧಿಸಿದ ಮಾನದಂಡಗಳೇನು ಎಂಬುದನ್ನು ಉಲ್ಲೇಖಿಸಿದೆ.

ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಡಾ. ಕೆಎಸ್​ ಸ್ವಾತಿ, ಡಾ. ಭೀಮಣ್ಣ ಸಿನ್ನೂರ ಸಹಿತ 50ಕ್ಕೂ ಹೆಚ್ಚು ಸೇವಾನಿರತ ವೈದ್ಯರು ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆಲೋಕ್ ಆರಾಧೆ ಹಾಗೂ ನ್ಯಾ. ಎಸ್​ ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್