ರಾಜ್ಯದಲ್ಲಿ ಸುಸೂತ್ರವಾಗಿ ನಡೆದ ನೀಟ್‌ ಮರು ಪರೀಕ್ಷೆ: ಎಕ್ಸಾಂ ಬಗ್ಗೆ ವಿದ್ಯಾರ್ಥಿಗಳು ಹೇಳಿದ್ದೇನು?

ಕರ್ನಾಟಕದಲ್ಲಿ ಇಂದು ಯಾವುದೇ ಅಡೆತಡೆ, ಗೊಂದಲ ಇಲ್ಲದೆ ಬಿಗಿ ಭದ್ರತೆಯಲ್ಲಿ ನೀಟ್ ಮರುಪರೀಕ್ಷೆ ಸುಸೂತ್ರವಾಗಿ ನಡೆದಿದೆ. ಮಧ್ಯಾಹ್ನ 2ರಿಂದ ಸಂಜೆ 5.15ರವರೆಗೆ ಪರೀಕ್ಷೆ ನಡೆದಿದ್ದು, 15 ನಿಮಿಷ ಹೆಚ್ಚುವರಿ ಸಮಯ ನೀಡಲಾಗಿತ್ತು. ಆದರೆ ಪರೀಕ್ಷೆ ಬರೆದು ಬಂದು ವಿದ್ಯಾರ್ಥಿಗಳು ಮಾತ್ರ ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಸುಸೂತ್ರವಾಗಿ ನಡೆದ ನೀಟ್‌ ಮರು ಪರೀಕ್ಷೆ: ಎಕ್ಸಾಂ ಬಗ್ಗೆ ವಿದ್ಯಾರ್ಥಿಗಳು ಹೇಳಿದ್ದೇನು?
ವಿದ್ಯಾರ್ಥಿಗಳು
Image Credit source: tv9 kannada
Edited By:

Updated on: Jun 21, 2026 | 7:55 PM

ಬೆಂಗಳೂರು, ಜೂನ್​​ 21: ಪ್ರಶ್ನೆ ಪತ್ರಿಕೆ ಲೀಕ್​ನಿಂದ ರದ್ದಾಗಿದ್ದ ನೀಟ್ ಮರುಪರೀಕ್ಷೆ (NEET Re-Exam) ಇಂದು ರಾಜ್ಯಾದ್ಯಂತ ನಡೆದಿದೆ. ಯಾವುದೇ ಗೊಂದಲ, ಸೋರಿಕೆ ಇಲ್ಲದೆ ಬಿಗಿ ಭದ್ರತೆ ನಡುವೆ ವಿದ್ಯಾರ್ಥಿಗಳು (Students) ಪರೀಕ್ಷೆ ಬರೆದು ಇದೀಗ ಹೊರಬಂದಿದ್ದಾರೆ. ಬೆಂಗಳೂರಿನ 68 ಕೇಂದ್ರಗಳು ಸೇರಿದಂತೆ ರಾಜ್ಯದ 31 ನಗರಗಳ 200ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.15 ರವರೆಗೂ ಪರೀಕ್ಷೆ ನಡೆಯಿತು. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಪರೀಕ್ಷೆ ಕಠಿಣವಾಗಿತ್ತು ಅಂತಾ ಅಭ್ಯರ್ಥಿಗಳು ಹೇಳುತ್ತಿದ್ದಾರೆ. ಅದರಲ್ಲೂ ಜೀವಶಾಸ್ತ್ರ ಹಾಗೂ ರಸಾಯನಶಾಸ್ತ್ರ ಪೇಪರ್​ ಹೆಚ್ಚು ಕಠಿಣವಾಗಿತ್ತು ಎಂದಿದ್ದಾರೆ.

ಮುಖ್ಯಾಂಶಗಳು

  • ರಾಜ್ಯದಲ್ಲಿ ನೀಟ್ ಮರು ಪರೀಕ್ಷೆ ಯಶಸ್ವಿ ಮುಕ್ತಾಯ
  • ಬಿಗಿ ಭದ್ರತೆ ನಡುವೆ ಪರೀಕ್ಷೆ ಬರೆದ ರಾಜ್ಯದ ವಿದ್ಯಾರ್ಥಿಗಳು
  • ಈ ಬಾರಿಯ ಪೇಪರ್ ಕಠಿಣವಾಗಿತ್ತು ಎಂದ ವಿದ್ಯಾರ್ಥಿಗಳು

NEET Re-Exam: ನೀಟ್‌ ಪರೀಕ್ಷೆ ಕಠಿಣ ಇತ್ತಾ? ಸುಲಭನಾ? ವಿದ್ಯಾರ್ಥಿಗಳ ಫಸ್ಟ್ ರಿಯಾಕ್ಷನ್‌| #TV9D

ವೈದ್ಯಕೀಯ ಸೀಟು ಹಂಚಿಕೆಗಾಗಿ ನಡೆಯುವ ನೀಟ್‌ ಪರೀಕ್ಷೆ ದೊಡ್ಡ ಸವಾಲ್ ಆಗಿತ್ತು. ಕಳೆದ ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ಪರೀಕ್ಷೆಯನ್ನೇ ರದ್ದು ಮಾಡಲಾಗಿತ್ತು. ಇದೆಲ್ಲದರ ನಡುವೆ ಇಂದು ನೀಟ್‌ ಮರು ಪರೀಕ್ಷೆ ನಡೆದಿದ್ದು, ಯಾವುದೇ ಗೊಂದಲ ಇಲ್ಲದೆ ಯಶಸ್ವಿಯಾಗಿ ಮುಗಿದಿದೆ.

ಹೆಚ್ಚು ಕಠಿಣವಾಗಿತ್ತು

ಇನ್ನು ಪರೀಕ್ಷೆ ಬರೆದ ಬೆಂಗಳೂರಿನ ವಿದ್ಯಾರ್ಥಿಗಳು ಮಾಧ್ಯಮದವರೊಂದಿಗೆ ಮಾತನಾಡಿದ್ದು, ಪೇಪರ್ ಕಠಿಣವಾಗಿತ್ತು. ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಶೇಕಡಾ 10 ರಿಂದ 15ರಷ್ಟು ಹೆಚ್ಚು ಕಠಿಣವಾಗಿತ್ತು. ಮೇ 3 ರಂದು ನಡೆದ ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸುಲಭವಾಗಿತ್ತು. ಇಂದಿನ ಜೀವಶಾಸ್ತ್ರ ಹಾಗೂ ರಸಾಯನಶಾಸ್ತ್ರ ಪೇಪರ್ ತುಂಬಾ ಕಠಿಣವಾಗಿತ್ತು ಎಂದಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ನೀಟ್​ ಪರೀಕ್ಷೆಯಿಂದ ಮತ್ತೆ ವಂಚಿತರಾದ ಹಲವು ವಿದ್ಯಾರ್ಥಿಗಳು: ಒಬ್ಬೊಬ್ಬರದು ಒಂದೊಂದು ಕಥೆ

ಹಾವೇರಿ ಜಿಲ್ಲೆಯ ಐದು ಕೇಂದ್ರಗಳಲ್ಲಿ ನೀಟ್ ಮರುಪರೀಕ್ಷೆ ಸುಸೂತ್ರವಾಗಿ ನಡೆದಿದೆ. ಜಿಲ್ಲಾಡಳಿತದ ತಯಾರಿಗೆ ಪರೀಕ್ಷಾರ್ಥಿಗಳು ಪುಲ್ ಖುಷ್ ಆಗಿದ್ದಾರೆ. ಆದರೆ ಈ ಬಾರಿ ಪ್ರಶ್ನೆಪತ್ರಿಕೆ ಕಠಿಣವಾಗಿತ್ತು ಎಂದಿದ್ದಾರೆ. ಮುಂದೆ ಎಂಬಿಬಿಎಸ್, ಬಿಎಂಎಸ್ ಓದುವ ಇಂಗಿತವನ್ನು ವಿದ್ಯಾರ್ಥಿಗಳು ವ್ಯಕ್ತಪಡಿಸಿದ್ದಾರೆ.

ಲೀಕ್ ಆದಲ್ಲಿ ಮಾತ್ರ ಪರೀಕ್ಷೆ ಮಾಡಬೇಕಿತ್ತು ಎಂದ ವಿದ್ಯಾರ್ಥಿಗಳು 

ಇನ್ನು ಕೊಪ್ಪಳದಲ್ಲಿ ನೀಟ್ ಪರೀಕ್ಷೆ ಮುಗಿಸಿ ಹೊರಬಂದ ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಕಳೆದ ಬಾರಿಗಿಂತ ಈ ಪರೀಕ್ಷೆ ಕಠಿಣವಾಗಿತ್ತು. ಭೌತಶಾಸ್ತ್ರ ವಿಷಯದಲ್ಲಿ ದೀರ್ಘ ಪ್ರಶ್ನೆಗಳಿತ್ತು. ಎಲ್ಲಿ ಲೀಕ್ ಆಗಿತ್ತು, ಅಲ್ಲಿ ಅಷ್ಟೇ ಪರೀಕ್ಷೆ ಮಾಡಬೇಕಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

NEET Re-Exam: ಕಳೆದ ಬಾರಿ ಬರೆದ ಪರೀಕ್ಷೆಯೇ ಬೆಟರ್.. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಹೀಗ್ಯಾಕಂದ್ರು? | #TV9D

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:16 pm, Sun, 21 June 26

ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
Loading...
Unable to load recommendations.
Follow Us