ನೇಹಾ ಹತ್ಯೆ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸುತ್ತೇನೆ: ಹಂತಕ ಫಯಾಜ್‌ ತಂದೆ ಕಣ್ಣೀರು

Hubballi Neha Hiremath Murder Case:: ಹುಬ್ಬಳ್ಳಿ ಕಾರ್ಪೊರೇಟರ್ ಮಗಳು ನೇಹಾ ಹಿರೇಮಠ್ ಅವರ ಬರ್ಬರ ಹತ್ಯೆ ಪ್ರಕರಣ ತೀವ್ರ ಸಂಚಲನ ಸೃಷ್ಟಿಸಿದೆ. ಚಾಕುವಿನಿಂದ 10 ಬಾರಿ ಇರಿದು ಕೊಂದ ಆರೋಪಿ ಫಯಾಜ್‌ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಜಸ್ಟೀಸ್ ಫಾರ್ ನೇಹಾ ಅನ್ನೋ ಟ್ರೆಂಡಿಂಗ್ ಆಗಿದ್ದು ಕೊಲೆಗಾರನ ಮೇಲೆ ನೆಟ್ಟಿಗರು ಕೆಂಡಕಾರುತ್ತಿದ್ದಾರೆ. ಅಲ್ಲದೇ ಅವನನ್ನು ನೇಣಿಗೆ ಹಾಕಬೇಕು. ಇಲ್ಲ ಎನ್​ಕೌಂಟರ್ ಮಾಡಬೇಕೆಂದು ಆಗ್ರಹಿಸುತ್ತಿದ್ದಾರೆ. ಇನ್ನು ಮಗನ ಈ ಪೈಶಾಚಿಕ ಕೃತ್ಯಕ್ಕೆ ತಂದೆ ಪ್ರತಿಕ್ರಿಯಿಸಿದ್ದಾರೆ. ಹಾಗಾದ್ರೆ, ಮಗನ ಈ ಕೃತ್ಯದ ಬಗ್ಗೆ ಏನು ಹೇಳಿದ್ದಾರೆ ಎನ್ನುವುದು ಇಲ್ಲಿದೆ.

ನೇಹಾ ಹತ್ಯೆ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸುತ್ತೇನೆ: ಹಂತಕ ಫಯಾಜ್‌ ತಂದೆ ಕಣ್ಣೀರು
ನೇಹಾ ಹಿರೇಮಠ, ಆರೋಪಿ ಫಯಾಜ್​
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Apr 19, 2024 | 8:21 PM

ಹುಬ್ಬಳ್ಳಿ,ಬೆಳಗಾವಿ, (ಏಪ್ರಿಲ್ 19): ಹುಬ್ಬಳ್ಳಿಯ(Hubballi ) ಖಾಸಗಿ ಕಾಲೇಜಿನ ಕ್ಯಾಂಪಸ್​​ನಲ್ಲಿ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾಳನ್ನ ಬರ್ಬರವಾಗಿ ಹತ್ಯೆ (Hubballi Neha Hiremath Murder Case) ಮಾಡಲಾಗಿದೆ. ಈ ಕೊಲೆ ಪ್ರಕರಣ ಸಂಬಂಧ ಪೊಲೀಸರು ಆರೋಪಿ ಫಯಾಜ್​ನನ್ನು (23) ಬಂಧಿಸಿದ್ದು, ಇದೀಗ ನೇಹಾ ಕೊಲೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಅಲ್ಲದೇ ಆರೋಪಿ ಫಯಾಜ್​ನನ್ನು ಗಲ್ಲೇರಿಸಬೇಕೆಂದು ಆಗ್ರಹಗಳು ವ್ಯಕ್ತವಾಗುತ್ತಿವೆ. ಮತ್ತೊಂದೆಡೆ ಆರೋಪಿಯನ್ನು ಎನ್​ಕೌಂಟರ್ ಮಾಡಿಬೇಕೆಂದು ಒತ್ತಾಯಗಳು ಕೇಳಿಬರುತ್ತಿವೆ. ಇನ್ನು ಇದರ ಮಧ್ಯೆ ನೇಹಾ ಹಂತಕ ಫಯಾಜ್​ ತಂದೆ ಬಾಬಾ ಸಾಹೇಬ್ ಪ್ರತಿಕ್ರಿಯಿಸಿದ್ದು, ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸುತ್ತೇನೆ ಎಂದು ಕಣ್ಣೀರಿಟ್ಟಿದ್ದಾರೆ.

ಹೆಣ್ಣು ಮಕ್ಕಳು ಎಂದರೆ ಪೂಜಿಸುತ್ತೇವೆ. ಹೆಣ್ಣು ಮಕ್ಕಳು ಎಂದರೆ ದೇವರೆಂದು ಭಾವಿಸುವ ದೇಶ ನಮ್ಮದು, ಅನ್ಯಾಯ ಆದಲ್ಲಿ ಪ್ರತಿಭಟನೆ ಮಾಡುತ್ತಾರೆ. ಅವರ ಹೋರಾಟಕ್ಕೆ ಜಯವಾಗಲಿ. ಕರ್ನಾಟಕ ಜನತೆಯಲ್ಲಿ ನಾನು ಕ್ಷಮೆಯಾಚಿಸುತ್ತೇನೆ. ಈ ಘಟನೆಯಿಂದ ಮುನವಳ್ಳಿ ಊರಿಗೆ ಕಪ್ಪು ಚುಕ್ಕೆ ಬಂದಿದೆ. ರಾಜ್ಯದ ಜನತೆ ಹಾಗೂ ಮುನವಳ್ಳಿ ಯುವಕರು ಶಾಂತಿ ಕಾಪಾಡುವಂತೆ ಕಣ್ಣೀರಾಕುತ್ತಲೇ ಮನವಿ ಮಾಡಿದ ಬಾಬಾ ಸಾಹೇಬ್, ಕಾನೂನು ಯಾವ ಶಿಕ್ಷೆ ಕೊಟ್ಟರೂ ಅದನ್ನು ನಾನು ಸ್ವಾಗತಿಸುತ್ತೇನೆ. ದಯವಿಟ್ಟು ನೇಹಾ ಕುಟುಂಬದವರು, ರಾಜ್ಯದ ಜನ ಹಾಗೂ ಮುನವಳ್ಳಿ ಜನತೆ ನನ್ನನ್ನು ಕ್ಷಮಿಸಬೇಕು ಎಂದು ಕೈ ಮುಗಿದು ಅಂಗಲಾಚಿದ್ದಾರೆ.

ಇದನ್ನೂ ಓದಿ: ನೇಹಾ ಹತ್ಯೆ: ಆರೋಪಿಯ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಹಾಕುತ್ತೇವೆ ಎಂದ ಅಂಜುಮನ್ ಸಂಸ್ಥೆ!

ಎರಡು ವರ್ಷದಿಂದ ಮಗ ನಮ್ಮ ಬಳಿ ಇರಲಿಲ್ಲ. ಹೆಚ್ಚಿನ ಶಿಕ್ಷಣಕ್ಕಾಗಿ ನಗರ ಪ್ರದೇಶಕ್ಕೆ ಹೋಗಿದ್ದನು. ತಪ್ಪು ಮಾಡಿದ್ದಲ್ಲಿ ಖಂಡಿಯ ಪ್ರತಿಭಟನೆ ಮಾಡಬೇಕು. ನ್ಯಾಯಕ್ಕಾಗಿ ಪ್ರತಿಭಟನೆ ನಡೆಸೋದು ತಪ್ಪಲ್ಲ. ಯಾವ ಹೆಣ್ಣು ಮಕ್ಕಳ ಮೇಲೆ ಯಾರೂ ಕಣ್ಣು ಹಾಕಬಾರದು. ಅವಳು ನನ್ನ ಮಗಳಿದ್ದ ಹಾಗೆ. ಅವರ ಮಗಳಿಗೆ ಆದ ಕೃತ್ಯ ನಮ್ಮ ಮಗಳ ಮೇಲೆಯೂ ಆಗಬಹುದು. ಪ್ರತಿಭಟನೆ ಮಾಡುವವರಿಗೆ ದೊಡ್ಡ ಸಲಾಂ ಎಂದರು.

ಜಸ್ಟೀಸ್ ಫಾರ್ ನೇಹಾ ಟ್ರೆಂಡಿಂಗ್

ಇನ್ನು ನೇಹಾ ಹಿರೇಮಠ್ ಅವರ ಬರ್ಬರ ಹತ್ಯೆ ಪ್ರಕರಣ ತೀವ್ರ ಸಂಚಲನ ಸೃಷ್ಟಿಸಿದೆ. 10 ಬಾರಿ ಇರಿದು ಕೊಂದ ಆರೋಪಿ ಫಯಾಜ್‌ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಜಸ್ಟೀಸ್ ಫಾರ್ ನೇಹಾ ಅನ್ನೋ ಟ್ರೆಂಡಿಂಗ್ ಆಗಿದ್ದು ಕೊಲೆಗಾರನ ಮೇಲೆ ನೆಟ್ಟಿಗರು ಕೆಂಡಕಾರುತ್ತಿದ್ದಾರೆ. ನಿನ್ನೆ ಸಂಜೆಯಿಂದಲೇ ಹುಬ್ಬಳ್ಳಿ ಕಾಲೇಜು ಕ್ಯಾಂಪಸ್‌ನಲ್ಲಿ ನಡೆದ ಬರ್ಬರ ಹತ್ಯೆಯ ಲೈವ್‌ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದೀಗ ನೇಹಾ ಸಾವಿಗೆ ವಿದ್ಯಾರ್ಥಿಗಳು, ನೆಟ್ಟಿಗರು ಆಕ್ರೋಶ ಭರಿತ ಪೋಸ್ಟ್‌ಗಳನ್ನ ಹಾಕುತ್ತಿದ್ದಾರೆ. ಆರೋಪಿ ಕಠಿಣ ಶಿಕ್ಷೆಯಾಗಬೇಕು ಆಗಿದ್ದಾಗ ಮಾತ್ರ ಇಂತಹ ಕೃತ್ಯಗಳು ನಡೆಯುವುದಿಲ್ಲ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್