Neha hiremth Murder Case: ನೇಹಾ ಹತ್ಯೆಗೆ ಖಂಡನೆ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಯ ಕಿಚ್ಚು

ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರೆ, ಅತ್ತ ಹುಬ್ಬಳ್ಳಿಯಲ್ಲಿ ಮುಸ್ಲಿಂ ಸಮುದಾಯದವರು ಅಂಗಡಿ ಮುಂಗಟ್ಟು ಬಂದ್ ಮಾಡಿ ಪ್ರತಿಭಟನೆ ವ್ಯಕ್ತಪಡಿಸಿದರು. ತಪ್ಪಿತಸ್ಥನಿಗೆ ಕಠಿಣ ಶಿಕ್ಷೆಯಾಗಲಿ ಎಂದು ಆಗ್ರಹಿಸಿದರು. ರಾಜ್ಯದ ವಿವಿಧ ಕಡೆಗಳಲ್ಲಿನ ಪ್ರತಿಭಟನೆಯ ವಿವರ ಇಲ್ಲಿದೆ.

Neha hiremth Murder Case: ನೇಹಾ ಹತ್ಯೆಗೆ ಖಂಡನೆ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಯ ಕಿಚ್ಚು
ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸಿದರು
Follow us
TV9 Web
| Updated By: Ganapathi Sharma

Updated on: Apr 22, 2024 | 12:40 PM

ಬೆಂಗಳೂರು, ಏಪ್ರಿಲ್ 22: ನೇಹಾ ಕೊಲೆ ಪ್ರಕರಣದ (Neha hiremth Murder Case) ಪ್ರತಿಭಟನೆಯ ಕಿಚ್ಚು ದಿನದಿಂದ ದಿನಕ್ಕೆ ಭುಗಿಲೇಳುತ್ತಲೇ ಇದೆ. ಇದೀಗ ರಾಜ್ಯಾದ್ಯಂತ ಪ್ರತಿಭಟನೆಯ ಕಿಚ್ಚು ವ್ಯಾಪಿಸಿದ್ದು, ಹತ್ಯೆ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ (BJP) ಕಾರ್ಯಕರ್ತರೂ ಸಹ ಪ್ರತಿಭಟನೆ ಮುಂದುವರಿಸಿದ್ದಾರೆ. ಹುಬ್ಬಳ್ಳಿಯಲ್ಲಂತೂ (Hubballi) ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟೇ ಅಲ್ಲದೆ, ‘ಸಿದ್ರಾಮುಲ್ಲಾಖಾನ್, ಡಿಕೆ ಬ್ರದರ್ಸ್​ಗೆ ಧಿಕ್ಕಾರ’ ಎಂದು ಘೋಷಣೆ ಕೂಗಿದ್ದಾರೆ.

ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸಿದರು. ಟೈರ್​​ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಿದ್ರಾಮುಲ್ಲಾಖನ್, ಡಿಕೆ ಬ್ರದರ್ಸ್​ಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ಇಷ್ಟೇ ಅಲ್ಲ, ರಸ್ತೆ ಬಂದ್​ ಮಾಡಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು.

ಹುಬ್ಬಳ್ಳಿಯ ಹಳೇ ಹುಬ್ಬಳ್ಳಿ ವೃತ್ತದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಟೈರ್​​ಗೆ ಬೆಂಕಿ ಹಚ್ಚಿ ಫಯಾಜ್​ ಫೋಟೋ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಇಷ್ಟೇ ಅಲ್ಲ, ಮಹಿಳಾ ಕಾರ್ಯಕರ್ತರು ಆರೋಪಿ ಫಯಾಜ್ ಫೋಟೋಗೆ ಚಪ್ಪಲಿಯಿಂದ ಹೊಡೆದು ಸಿಟ್ಟು ತೀರಿಸಿಕೊಂಡರು.

ಹುಬ್ಬಳ್ಳಿಯಲ್ಲಿ ಮುಸ್ಲಿಂ ವ್ಯಾಪಾರಿಗಳಿಂದ ಅಂಗಡಿ, ಮುಂಗಟ್ಟುಗಳು ಬಂದ್

ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಖಂಡಿಸಿ ಮುಸ್ಲಿಂ ವ್ಯಾಪಾರಿಗಳು ಅಂಗಡಿ, ಮುಂಗಟ್ಟುಗಳನ್ನ ಬಂದ್​ ಮಾಡಿದರು. ಅಂಗಡಿ ಬಂದ್​ ಮಾಡುವ ಮೂಲಕ ಮುಸ್ಲಿಂ ವ್ಯಾಪಾರಿಗಳು ಬಂದ್​ಗೆ ಬೆಂಬಲ ನೀಡಿದರು. ಹಂತಕ ಫಯಾಜ್​ಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು.

ಮೈಸೂರಿನಲ್ಲೂ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ

ಮೈಸೂರಿನಲ್ಲೂ ಸರ್ಕಾರದ ವಿರುದ್ಧ ಪ್ರತಿಭಟನೆ ಕಿಚ್ಚು ಜೋರಾಗಿತ್ತು. ಗಾಂಧಿವೃತ್ತದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ನೂರಾರು ಮಹಿಳಾ ಕಾರ್ಯಕರ್ತರು ಭಾಗಿಯಾದರು. ಇಷ್ಟೇ ಅಲ್ಲದೆ ತುಮಕೂರು, ಹಾವೇರಿ, ಬಳ್ಳಾರಿ, ಬಾಗಲಕೋಟೆ, ಕಲಬುರಗಿಯಲ್ಲೂ ಘಟಾನುಘಟಿ ನಾಯಕರ ಸಮ್ಮುಖದಲ್ಲಿ ಪ್ರತಿಭಟನೆ ನಡೆಸಲಾಯಿತು.

ತುಮಕೂರಿನಲ್ಲಿ ಪ್ರತಿಭಟನಾ ಮೆರವಣಿಗೆ

ತುಮಕೂರಿನ ಬಿಜಿಎಸ್ ವೃತ್ತದಿಂದ ಡಿಸಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪ್ರತಿಭಟನಾಕಾರರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ‘ಕೊಲೆಗಡುಕ ಸಿದ್ದರಾಮಯ್ಯ’, ‘ಸಿದ್ದರಾಮುಲ್ಲಾ ಖಾನ್’ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮಹಿಳೆಯರು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾದರು. ವ್ಯಾಪಕ ಪೊಲೀಸ್ ಭದ್ರತೆ‌‌ ಒದಗಿಸಲಾಗಿತ್ತು.

ಇದನ್ನೂ ಓದಿ: ನೇಹಾ ಕೊಲೆಗಾರರ ಬಗ್ಗೆ ಕಾಂಗ್ರೆಸ್ ಸರ್ಕಾರ ಮೃದು ಧೋರಣೆ: ಸ್ವಪಕ್ಷದ ಕಾರ್ಪೊರೇಟರ್​​ನಿಂದಲೇ ಆರೋಪ, ಸಿಬಿಐ ತನಿಖೆಗೆ ಆಗ್ರಹ

ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ ಮೂಲಕ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಜಿಲ್ಲಾಧಿಕಾರಿಗೆ ಮನವಿ ಪತ್ರ ನೀಡಿದರು. ನೇಹಾ ಹಿರೇಮಠ ಹತ್ಯೆ ಖಂಡಿಸಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಮಾಡಿದರು. ಬಳ್ಳಾರಿಯ ಕನಕ ದುರ್ಗಮ್ಮ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿ ಬಳಿ ತಲುಪಿತು. ಇದೇ ವೇಳೆ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿದರು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್