ಬೆಂಗಳೂರು, ಏಪ್ರಿಲ್ 22: ನೇಹಾ ಕೊಲೆ ಪ್ರಕರಣದ (Neha hiremth Murder Case) ಪ್ರತಿಭಟನೆಯ ಕಿಚ್ಚು ದಿನದಿಂದ ದಿನಕ್ಕೆ ಭುಗಿಲೇಳುತ್ತಲೇ ಇದೆ. ಇದೀಗ ರಾಜ್ಯಾದ್ಯಂತ ಪ್ರತಿಭಟನೆಯ ಕಿಚ್ಚು ವ್ಯಾಪಿಸಿದ್ದು, ಹತ್ಯೆ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ (BJP) ಕಾರ್ಯಕರ್ತರೂ ಸಹ ಪ್ರತಿಭಟನೆ ಮುಂದುವರಿಸಿದ್ದಾರೆ. ಹುಬ್ಬಳ್ಳಿಯಲ್ಲಂತೂ (Hubballi) ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟೇ ಅಲ್ಲದೆ, ‘ಸಿದ್ರಾಮುಲ್ಲಾಖಾನ್, ಡಿಕೆ ಬ್ರದರ್ಸ್ಗೆ ಧಿಕ್ಕಾರ’ ಎಂದು ಘೋಷಣೆ ಕೂಗಿದ್ದಾರೆ.
ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸಿದರು. ಟೈರ್ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಿದ್ರಾಮುಲ್ಲಾಖನ್, ಡಿಕೆ ಬ್ರದರ್ಸ್ಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ಇಷ್ಟೇ ಅಲ್ಲ, ರಸ್ತೆ ಬಂದ್ ಮಾಡಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು.
ಹುಬ್ಬಳ್ಳಿಯ ಹಳೇ ಹುಬ್ಬಳ್ಳಿ ವೃತ್ತದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಟೈರ್ಗೆ ಬೆಂಕಿ ಹಚ್ಚಿ ಫಯಾಜ್ ಫೋಟೋ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಇಷ್ಟೇ ಅಲ್ಲ, ಮಹಿಳಾ ಕಾರ್ಯಕರ್ತರು ಆರೋಪಿ ಫಯಾಜ್ ಫೋಟೋಗೆ ಚಪ್ಪಲಿಯಿಂದ ಹೊಡೆದು ಸಿಟ್ಟು ತೀರಿಸಿಕೊಂಡರು.
ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಖಂಡಿಸಿ ಮುಸ್ಲಿಂ ವ್ಯಾಪಾರಿಗಳು ಅಂಗಡಿ, ಮುಂಗಟ್ಟುಗಳನ್ನ ಬಂದ್ ಮಾಡಿದರು. ಅಂಗಡಿ ಬಂದ್ ಮಾಡುವ ಮೂಲಕ ಮುಸ್ಲಿಂ ವ್ಯಾಪಾರಿಗಳು ಬಂದ್ಗೆ ಬೆಂಬಲ ನೀಡಿದರು. ಹಂತಕ ಫಯಾಜ್ಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು.
ಮೈಸೂರಿನಲ್ಲೂ ಸರ್ಕಾರದ ವಿರುದ್ಧ ಪ್ರತಿಭಟನೆ ಕಿಚ್ಚು ಜೋರಾಗಿತ್ತು. ಗಾಂಧಿವೃತ್ತದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ನೂರಾರು ಮಹಿಳಾ ಕಾರ್ಯಕರ್ತರು ಭಾಗಿಯಾದರು. ಇಷ್ಟೇ ಅಲ್ಲದೆ ತುಮಕೂರು, ಹಾವೇರಿ, ಬಳ್ಳಾರಿ, ಬಾಗಲಕೋಟೆ, ಕಲಬುರಗಿಯಲ್ಲೂ ಘಟಾನುಘಟಿ ನಾಯಕರ ಸಮ್ಮುಖದಲ್ಲಿ ಪ್ರತಿಭಟನೆ ನಡೆಸಲಾಯಿತು.
ತುಮಕೂರಿನ ಬಿಜಿಎಸ್ ವೃತ್ತದಿಂದ ಡಿಸಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪ್ರತಿಭಟನಾಕಾರರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ‘ಕೊಲೆಗಡುಕ ಸಿದ್ದರಾಮಯ್ಯ’, ‘ಸಿದ್ದರಾಮುಲ್ಲಾ ಖಾನ್’ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮಹಿಳೆಯರು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾದರು. ವ್ಯಾಪಕ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.
ಇದನ್ನೂ ಓದಿ: ನೇಹಾ ಕೊಲೆಗಾರರ ಬಗ್ಗೆ ಕಾಂಗ್ರೆಸ್ ಸರ್ಕಾರ ಮೃದು ಧೋರಣೆ: ಸ್ವಪಕ್ಷದ ಕಾರ್ಪೊರೇಟರ್ನಿಂದಲೇ ಆರೋಪ, ಸಿಬಿಐ ತನಿಖೆಗೆ ಆಗ್ರಹ
ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ ಮೂಲಕ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಜಿಲ್ಲಾಧಿಕಾರಿಗೆ ಮನವಿ ಪತ್ರ ನೀಡಿದರು. ನೇಹಾ ಹಿರೇಮಠ ಹತ್ಯೆ ಖಂಡಿಸಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಮಾಡಿದರು. ಬಳ್ಳಾರಿಯ ಕನಕ ದುರ್ಗಮ್ಮ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿ ಬಳಿ ತಲುಪಿತು. ಇದೇ ವೇಳೆ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿದರು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ