AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂಗೆ ಮನವಿ ಬೆನ್ನಲ್ಲೇ ನೇಹಾ ತಂದೆ ನಿರಂಜನ ನಿವಾಸಕ್ಕೆ ಪೊಲೀಸ್ ಸಿಬ್ಬಂದಿ ನಿಯೋಜನೆ

ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನ ಸಿಐಡಿ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ಇತ್ತ ನೇಹಾಳ ಮನೆಗೆ ನಿನ್ನೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಈ ವೇಳೆ ಜೀವ ಬೆದರಿಕೆ ಇದೆ ಕುಟುಂಬಕ್ಕೆ ಭದ್ರತೆ ಬೇಕೆಂದು ನೇಹಾ ತಂದೆ ನಿರಂಜನ ಮನವಿ ಮಾಡಿದ್ದರು. ಹೀಗಾಗಿ ಇದೀಗ ಹುಬ್ಬಳ್ಳಿಯ ಬಿಡನಾಳದಲ್ಲಿರುವ ನಿರಂಜನ ಅವರ ನಿವಾಸಕ್ಕೆ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಸಿಎಂಗೆ ಮನವಿ ಬೆನ್ನಲ್ಲೇ ನೇಹಾ ತಂದೆ ನಿರಂಜನ ನಿವಾಸಕ್ಕೆ ಪೊಲೀಸ್ ಸಿಬ್ಬಂದಿ ನಿಯೋಜನೆ
ಪೊಲೀಸ್ ಸಿಬ್ಬಂದಿ ನಿಯೋಜನೆ
ಶಿವಕುಮಾರ್ ಪತ್ತಾರ್
| Edited By: |

Updated on: Apr 26, 2024 | 3:58 PM

Share

ಹುಬ್ಬಳ್ಳಿ, ಏಪ್ರಿಲ್​​ 26: ವಿದ್ಯಾರ್ಥಿನಿ ನೇಹಾ ಹತ್ಯೆಯಾಗಿ (Neha murder case) ವಾರವೇ ಕಳೆದಿದೆ. ನಿನ್ನೆ ನೇಹಾ ನಿವಾಸಕ್ಕೆ ತೆರಳಿದ ಸಿಎಂ ಸಿದ್ದರಾಮಯ್ಯ, ಪೋಷಕರಿಗೆ ಸಾಂತ್ವನ ಹೇಳಿದ್ದರು. ಜೊತೆಗೆ ಆರೋಪಿಗೆ ಕಠಿಣ ಶಿಕ್ಷೆ ಕೊಡಿಸುವ ಭರವಸೆ ನೀಡಿದ್ದರು. ಈ ವೇಳೆ ಭದ್ರತೆ ಒದಗಿಸುವಂತೆ ಸಿಎಂಗೆ ನೇಹಾ ತಂದೆ ನಿರಂಜನ (Niranjan) ಮನವಿ ಮಾಡಿದ ಬೆನ್ನಲ್ಲೇ ನಗರದ ಬಿಡನಾಳದಲ್ಲಿರುವ ನಿರಂಜನ ಹಿರೇಮಠ ನಿವಾಸಕ್ಕೆ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಜೀವ ಬೆದರಿಕೆಯಿದೆ ಎಂದು ನಿರಂಜನ ಅವರು ದೂರು ನೀಡಿದ್ದರು. ಹೀಗಾಗಿ ಭದ್ರತೆ ಒದಗಿಸುವ ಮೂಲಕ ರಾಜ್ಯ ಸರ್ಕಾರ ಸ್ಪಂದಿಸಿದೆ.

ನಿನ್ನೆ ನೇಹಾ ನಿವಾಸಕ್ಕೆ ಭೇಟಿ ನೀಡಿದ್ದ ಸಿದ್ದರಾಮಯ್ಯ, ನೇಹಾ ತಂದೆ ನಿರಂಜನ್‌ ಹಾಗೂ ತಾಯಿ ಗೀತಾಗೆ ಸಾಂತ್ವನ ಹೇಳಿದ್ದರು. ಪ್ರಕರಣವನ್ನ ಸಿಐಡಿಗೆ ವಹಿಸಲಾಗಿದೆ. ಆರೋಪಿಗೆ ಘೋರ ಶಿಕ್ಷೆ ಕೊಡಿಸಲು ಪ್ರಯತ್ನಿಸುತ್ತೇನೆ ಎಂದಿದ್ದರು. ಶೀಘ್ರದಲ್ಲಿಯೇ ಡಿಸಿಎಂ ಡಿಕೆ ಶಿವಕುಮಾರ್ ಕೂಡ ನಿರಂಜನ್‌ ಮನೆಗೆ ಭೇಟಿ ನೀಡಲಿದ್ದಾರೆ.

ಇದನ್ನೂ ಓದಿ: ಹತ್ಯೆಯಾದ ನೇಹಾ ಮನೆಗೆ ಸಿಎಂ ಭೇಟಿ, ನಿರಂಜನ್ ಮನವಿಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು?

ಇನ್ನು ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್, ಎಸ್​ಪಿ ವೆಂಕಟೇಶ್ ನೇತೃತ್ವದ ತಂಡ ನಿನ್ನೆ ನೇಹಾ ನಿವಾಸಕ್ಕೆ ಭೇಟಿ ನೀಡಿತ್ತು. ಪೋಷಕರಿಂದ ಹೇಳಿಕೆ ಪಡೆದಿತ್ತು. ಈ ವೇಳೆ ಮಾತನಾಡಿದ್ದ ನೇಹಾ ತಂದೆ ನಿರಂಜನ್‌, ಕೆಲ ದಿನಗಳಿಂದ ನಮಗೆ ಬೆದರಿಕೆ ಇದೆ. ಯಾರ್ಯಾರೋ ಮನೆಗೆ ಬಂದು ವಿಡಿಯೋ ಮಾಡುತ್ತಿದ್ದಾರೆ ಅಂತಾ ಆರೋಪಿಸಿದ್ದರು. ಅಷ್ಟೇ ಅಲ್ಲ ಫಯಾಜ್​ ಪ್ರಾಣ ತಗೋತೀನಿ ಅಂತಾ ನನ್ನ ಮಗಳ ಶವದ ಮೇಲೆ ನಾನು ಶಪಥ ಮಾಡಿದ್ದೇನೆ ಎಂದು ಹೇಳಿದ್ದರು.

ಇದನ್ನೂ ಓದಿ: ನನ್ನ ಪ್ರಾಣ ಹೋದರೂ ಪರವಾಗಿಲ್ಲ, ಫಯಾಜ್​ ಪ್ರಾಣ ತಗೊಳ್ಳುವೆ; ಮಗಳ ಶವದ ಮೇಲೆ ಶಪಥ ಮಾಡಿದ್ದೇನೆಂದ ನೇಹಾ ತಂದೆ ಹಿರೇಮಠ

ಏಪ್ರಿಲ್‌ 18 ರಂದು ನೇಹಾ ಹತ್ಯೆಯಾಗಿತ್ತು ನಿಜ. ಆದರೆ ಅದಕ್ಕೂ ಐದು ದಿನ ಮುನ್ನವೇ ಚಾಕು ಖರೀದಿಸಿದ್ದ ಫಯಾಜ್‌, ನೇಹಾ ಮನೆ ಬಳಿ ಓಡಾಡಿದ್ದನಂತೆ. ಏಪ್ರಿಲ್‌ 18 ರಂದು ಕಾಲೇಜ್‌ ಬಳಿ ಸ್ಕೂಟಿಯಲ್ಲಿ ಹೋಗಿದ್ದವನು, ರಸ್ತೆ ಕಡೆ ಮುಖ ಮಾಡಿಯೇ ಸ್ಕೂಟಿ ನಿಲ್ಲಿಸಿದ್ದ. ಕೊಲೆ ಬಳಿಕ ಎಸ್ಕೇಪ್ ಆಗಲು ಎಲ್ಲಾ ಪ್ಲ್ಯಾನ್‌ ಮಾಡಿಕೊಂಡಿದ್ದ ಎನ್ನಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ