ತನ್ನ ಮಗಳಂತೆ ಮತ್ತೋರ್ವ ಯುವತಿ ಹತ್ಯೆ: ಗೃಹ ಸಚಿವರ ವಿರುದ್ಧ ನೇಹಾ ತಂದೆ ನಿರಂಜನ ಕೆಂಡಾಮಂಡಲ

ನೇಹಾ ಹತ್ಯೆ ಸಿಐಡಿ ತನಿಖೆ ನಡೆಯುತ್ತಿರುವಾಗಲೇ ಮತ್ತೊಂದು ಯುವತಿಯನ್ನು ಪಾಗಲ್ ಪ್ರೇಮಯೊಬ್ಬನು ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿರುವಂತಹ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಈ ಘಟನೆ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನೇಹಾ ತಂದೆ ನಿರಂಜನ ಹಿರೇಮಠ ಇನ್ನೂ ಎಷ್ಟು ಬಲಿಯಾಗಬೇಕು. ರಾಜ್ಯದಲ್ಲಿ ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತನ್ನ ಮಗಳಂತೆ ಮತ್ತೋರ್ವ ಯುವತಿ ಹತ್ಯೆ: ಗೃಹ ಸಚಿವರ ವಿರುದ್ಧ ನೇಹಾ ತಂದೆ ನಿರಂಜನ ಕೆಂಡಾಮಂಡಲ
ತನ್ನ ಮಗಳಂತೆ ಮತ್ತೋರ್ವ ಯುವತಿ ಹತ್ಯೆ: ಗೃಹ ಸಚಿವರ ವಿರುದ್ಧ ನೇಹಾ ತಂದೆ ನಿರಂಜನ ಹಿರೇಮಠ ಕೆಂಡಾಮಂಡಲ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on: May 15, 2024 | 3:51 PM

ಹುಬ್ಬಳ್ಳಿ, ಮೇ 15: ಯುವತಿಯನ್ನು ಪಾಗಲ್ ಪ್ರೇಮಯೊಬ್ಬನು ಭೀಕರವಾಗಿ ಹತ್ಯೆ (murder) ಮಾಡಿ ಪರಾರಿಯಾಗಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಕಾಕತಾಳೀಯ ಎಂಬಂತೆ ನಿರಂಜನ ಹಿರೇಮಠ (niranjan hiremath) ವಾರ್ಡ್​​ನಲ್ಲಿಯೇ, ನೇಹಾ ಹತ್ಯೆ ಮಾದರಿಯಲ್ಲಿ ಮತ್ತೊಂದು ಹತ್ಯೆಯಾಗಿದೆ. ಕೊಲೆಯಾದ ಅಂಜಲಿ ಕುಟುಂಬಸ್ಥರನ್ನು ನಿರಂಜನ ಹಿರೇಮಠ ಇಂದು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಬಳಿಕ ಮಾಧ್ಯಮದವವರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಮ್ಮ ಮಗಳು ನೇಹಾ ಕಳೆದುಕೊಂಡ ದುಃಖದಲ್ಲಿದ್ದೇವೆ. ಈಗ ನಮ್ಮ ವಾರ್ಡ್​​ನ ಮಗಳನ್ನು ಕಳೆದುಕೊಂಡಿದ್ದೇವೆ. ಇನ್ನೂ ಎಷ್ಟು ಬಲಿಯಾಗಬೇಕು. ರಾಜ್ಯದಲ್ಲಿ ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಪೊಲೀಸರ ನಿರ್ಲಕ್ಷ್ಯವೇ ಕಾರಣ. ಹೀಗಾಗಿ ಹುಬ್ಬಳ್ಳಿಗೆ ದಕ್ಷ ಪೊಲೀಸ್ ಅಧಿಕಾರಿ ಬೇಕು. ಗೃಹ ಇಲಾಖೆ ನಿರ್ಲಕ್ಷ್ಯ ಮಾಡಿದೆ, ನಿಮಗೆ ನಿಭಾಯಿಸಲು ಆಗದೆ ಹೋದರೆ ರಾಜೀನಾಮೆ ಕೊಡಿ ಎಂದು ಸಚಿವರ ವಿರುದ್ಧ ಕಿಡಿಕಾರಿದ್ದಾರೆ. ಆರೋಪಿಯನ್ನು ಎನ್​ಕೌಂಟರ್ ಮಾಡಬೇಕು. ನೇಹಾ ಕೊಲೆ ಮಾಡಿದ ಆರೋಪಿಯನ್ನು ಎನ್​ಕೌಂಟರ್ ಮಾಡಿದ್ದರೆ ಹೀಗೆ ಆಗುತ್ತಿರಲ್ಲಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅವತ್ತು ಬೆಂಡಿಗೇರಿ ಪೊಲೀಸ್ರು ಕರೆದು ವಿಚಾರಣೆ ಮಾಡಿದ್ರೆ ಅಂಜಲಿ ಹತ್ಯೆಯಾಗ್ತಿರಲಿಲ್ಲ: ಮಹೇಶ್ ಟೆಂಗಿನಕಾಯಿ

ಅಂಜಲಿ ಹತ್ಯೆ ಖಂಡಿಸಿ ಹುಬ್ಬಳ್ಳಿಯ ಚೆನ್ನಮ್ಮ ಸರ್ಕಲ್​ನಲ್ಲಿ ಪ್ರತಿಭಟನೆ ಮಾಡಲಾಗಿದೆ. ಅಂಜಲಿ ಹತ್ಯೆ ಆರೋಪಿಯನ್ನು ಗಲ್ಲಿಗೇರಿಸಬೇಕೆಂದು ಆಗ್ರಹಿಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ. ಪ್ರತಿಭಟನಾಕಾರರನ್ನು ಮನವೊಲಿಸಿದ ಪೊಲೀಸರು, ಪ್ರತಿಭಟನೆ ಕೈ ಬಿಟ್ಟಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ ನಿಯೋಜಿಸಲಾಗಿತ್ತು.

ಹುಬ್ಬಳ್ಳಿ ವೀರಾಪುರ ಓಣಿಯ 21 ವರ್ಷ ಅಂಜಲಿ ಎಂಬ ಯುವತಿಯನ್ನು ವಿಶ್ವ ಅಲಿಯಾಸ್ ಗೀರಿಶ್ ಎಂಬ ಯುವಕ ಭೀಕರವಾಗಿ ಹತ್ಯೆ ಮಾಡಿದ್ದಾನೆ. ಹತ್ಯೆಯಾದ ಅಂಜಲಿ ಮತ್ತು ಆರೋಪಿ ವಿಶ್ವ ಸಹಪಾಠಿಗಳಾಗಿದ್ದು, ಅಂಜಲಿ ಜೊತೆಗೆ ಒಡನಾಟ ಹೊಂದಿದ್ದ ಎನ್ನಲಾಗಿದೆ. ಇಂದು ಬೆಳಗಿನ ಜಾವಾ ಏಕಾಏಕಿ ಅಂಜಲಿ ಮನೆಯ ಬಾಗಿಲು ಬಡಿದ್ದಾನೆ. ಅಂಜಲಿಯೇ ಬಾಗಿಲು ತೆರಿದ್ದಾಳೆ. ಮೊದಲಿಗೆ ಅಂಜಲಿ ಅಜ್ಜಿ ಮತ್ತು ಸಹೋದರಿಯರ ಜೊತೆಗೆ ಮಾತನಾಡಿದ ವಿಶ್ವ, ಬಳಿಕ ಸ್ವಲ್ಪ ಪರ್ಸನಲ್ ಮಾತನಾಡಬೇಕು ಅಂತ ಅಂಜಲಿಯನ್ನು ಪಕ್ಕಕ್ಕೆ ಕರೆದುಕೊಂಡು ಹೋಗಿ ಏಕಾಏಕಿ ಚಾಕು ಹಾಕಲು ಶುರು ಮಾಡಿದ್ದಾನೆ.

ಇದನ್ನೂ ಓದಿ: Hubballi Anjali Murder Case: ತಾನು ಕರೆದ ಕಡೆ ಬಾರದಿದ್ದಕ್ಕೆ ಸಹಪಾಠಿ ಅಂಜಲಿಯನ್ನ ಕೊಲೆ ಮಾಡಿದ್ನಾ ವಿಶ್ವ?

ಇದನ್ನು ಅಂಜಲಿ ಕುಟುಂಬಸ್ಥರು ತಡೆಯಲು ಮುಂದಾದರು ಮನೆಯ ತುಂಬೆಲ್ಲಾ ಅಂಜಲಿ ಎಳೆದಾಡಿ ಚಾಕುವಿನಿಂದ ಮನಬಂದಂತೆ ಚುಚ್ಚಿದ ವಿಶ್ವ, ಅಂಜಲಿ ಸತ್ತ ಬಳಿಕ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಇನ್ನೂ ಆರೋಪಿ ವಿಶ್ವ ಒಂದು ವಾರದ ಹಿಂದೆಯೆ ಅಂಜಲಿಗೆ ಜೀವ ಬೆದರಿಕೆ ಹಾಕಿದ್ದು, ನನ್ನ ಜೊತೆಗೆ ಬಾರದಿದ್ದ್ರೆ ನೇಹಾ ತರ ಕೊಲೆ ಮಾಡುವೆ ಅಂತ ವಾರ್ನಿಂಗ್ ಮಾಡಿದ್ದ ಎನ್ನಲಾಗಿದೆ. ಕೂಡಲೇ ಅಂಜಲಿ ಕುಟುಂಬಸ್ಥರು ಬೆಂಡಿಗೇರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಪೊಲೀಸರು ಅಂಜಲಿ ಕುಟುಂಬಸ್ಥರಿಗೆ ಬೈದು ನಿಮ್ಮದು ಮೂಢನಂಬಿಕೆ ಆಗೇನು ಆಗಲ್ಲ ಹೋಗಿ ಅಂತ ನಿರ್ಲಕ್ಷ್ಯ ತೋರಿದ್ದಾರೆ ಅಂತ ಕುಟುಂಬಸ್ಥರು ಆರೋಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್