AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಬಸ್​ಪೇಟೆ ಬಳಿ ಲಾರಿ ಡಿಕ್ಕಿಯಾಗಿ ಆ್ಯಂಬುಲೆನ್ಸ್​ನಲ್ಲಿದ್ದ ಐವರ ಸ್ಥಿತಿ ಗಂಭೀರ

ನೆಲಮಂಗಲ: ದಾಬಸ್​ಪೇಟೆ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿಯಾಗಿ ಆ್ಯಂಬುಲೆನ್ಸ್​ನಲ್ಲಿದ್ದ ಐವರ ಸ್ಥಿತಿ ಗಂಭೀರವಾಗಿದೆ.

ದಾಬಸ್​ಪೇಟೆ ಬಳಿ ಲಾರಿ ಡಿಕ್ಕಿಯಾಗಿ ಆ್ಯಂಬುಲೆನ್ಸ್​ನಲ್ಲಿದ್ದ ಐವರ ಸ್ಥಿತಿ ಗಂಭೀರ
ದಾಬಸ್​ಪೇಟೆ ಬಳಿ ಲಾರಿ ಡಿಕ್ಕಿಯಾಗಿ ಆ್ಯಂಬುಲೆನ್ಸ್​ನಲ್ಲಿದ್ದ ಐವರ ಪೈಕಿ ಇಬ್ಬರ ಸಾವು
ಸಾಧು ಶ್ರೀನಾಥ್​
|

Updated on:Apr 30, 2021 | 5:27 PM

Share

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕು ದಾಬಸ್​ಪೇಟೆ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿಯಾಗಿ ಆ್ಯಂಬುಲೆನ್ಸ್​ನಲ್ಲಿದ್ದ ಐವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯ ಬಳಿಕ ನೆಲಮಂಗಲ ಸಾರ್ವಜನಿಕ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆಯರಿಬ್ಬರು, ಕಾಲು ಮುರಿದ ಗಾಯಾಳು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಲಾರಿ ತುಮಕೂರಿನಿಂದ ಬೆಂಗಳೂರಿಗೆ ಬರುವಾಗ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಲಾರಿ ನಿಲ್ಲಿಸದೇ ಚಾಲಕ ಪರಾರಿಯಾಗಿದ್ದಾನೆ. ಅಪಘಾತ ಬಳಿಕ ಆ್ಯಂಬುಲೆನ್ಸ್​​ಗೆ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಸ್ಥಳೀಯ ನಿವಾಸಿಗಳು ಬೆಂಕಿಯನ್ನ ನಂದಿಸಿದ್ದಾರೆ.

ಆ್ಯಂಬುಲೆನ್ಸ್​​ನಲ್ಲಿದ್ದ ಅಸೀನಾ (50), ಶಬೀನಾ (45) ಇಬ್ಬರಿಗೂ ಸುಟ್ಟ ಗಾಯಗಳಾಗಿವೆ. ಸಲ್ಮಾನ್ (20), ಆಂಬುಲೆನ್ಸ್ ಚಾಲಕ ಸಾದಿಖ್ (20) ಸಣ್ಣಪುಟ್ಟ ಗಾಯಗಳಾಗಿವೆ. ಮತ್ತೋರ್ವ ಸಾದಿಕ್ ಎಂಬುವವನ ಕಾಲು ಮುರಿದಿದೆ. ನೆಲಮಂಗಲ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

(nelamangala dabaspet road accident lorry rams in to ambulance 5 seriously injured)

ಇದನ್ನೂ ಓದಿ: ನೆಲಮಂಗಲದಲ್ಲಿ ಎರಡು ಪ್ರತ್ಯೇಕ ಭೀಕರ ಅಪಘಾತ.. ಕಾರಿನ ಚಾಲಕ ದುರ್ಮರಣ

Published On - 5:18 pm, Fri, 30 April 21