ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ: ಖಾಸಗಿ ಶಾಲೆ ಮಾಲೀಕ ಪೊಲೀಸ್​ ವಶಕ್ಕೆ

ಬೆಂಗಳೂರಿನ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಖಾಸಗಿ ಶಾಲೆ ಮಾಲೀಕ ನಾಲ್ಕು ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿಬಂದಿದೆ. ಸದ್ಯ ಮಾದನಾಯಕನಹಳ್ಳಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಖಾಸಗಿ ಶಾಲೆ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ: ಖಾಸಗಿ ಶಾಲೆ ಮಾಲೀಕ ಪೊಲೀಸ್​ ವಶಕ್ಕೆ
ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ: ಖಾಸಗಿ ಶಾಲೆ ಮಾಲೀಕ ಪೊಲೀಸ್​ ವಶಕ್ಕೆ
Follow us
ಬಿ ಮೂರ್ತಿ, ನೆಲಮಂಗಲ
| Updated By: ಗಂಗಾಧರ​ ಬ. ಸಾಬೋಜಿ

Updated on:Nov 14, 2024 | 5:45 PM

ನೆಲಮಂಗಲ, ನವೆಂಬರ್ 14: ವಿದ್ಯಾರ್ಥಿನಿಯರ (students) ಜೊತೆ ಖಾಸಗಿ ಶಾಲೆ ಮಾಲೀಕ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿಬಂದಿದೆ. ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ಘಟನೆ ನಡೆದಿದ್ದು, ಶಾಲೆಯ ಮಾಲೀಕ ಈರತ್ತಯ್ಯ(50)ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಲ್ವರು ವಿದ್ಯಾರ್ಥಿನಿಯರನ್ನು ಶಾಲೆಯ ಕೊಠಡಿಗೆ ಕರೆಸಿದ್ದ ಮಾಲೀಕ, ಈ ವೇಳೆ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಪೊಲೀಸರು ಮತ್ತು ಬೆಂಗಳೂರು ಉತ್ತರ ತಾಲೂಕಿನ ಬಿಇಒ ತಾರನಾಥ್ ಅವರಿಗೆ​ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ. ಸದ್ಯ ಖಾಸಗಿ ಶಾಲೆ ಬಳಿ ಪೋಷಕರು ಮತ್ತು ವಿದ್ಯಾರ್ಥಿಗಳಿಂದ ಪ್ರತಿಭಟನೆ ಮಾಡಲಾಗಿದೆ.

ಕೆಎಸ್​ಆರ್ ಟಿಸಿ ಬಸ್​ನಲ್ಲಿ ಕಂಡಕ್ಟರ್ ಅಸಭ್ಯ ವರ್ತನೆ ಆರೋಪ

ರಾಯಚೂರು: ರಾಯಚೂರಿನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಮಹಿಳೆಗೆ ಕಂಡಕ್ಟರ್ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿ ಬಂದಿತ್ತು. ಹೌದು.. ಇತ್ತೀಚೆಗೆ ರಾತ್ರಿ ಕೆಎ-36,ಎಫ್-1532 ನಂಬರ್​ನ ಬಸ್​ನಲ್ಲಿ ಮಹಿಳೆಯೋರ್ವರು ರಾಯಚೂರು ಟು ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ತಡ ರಾತ್ರಿ ಬಸ್​ ಒಳಗಿನ ಲೈಟ್ ಆಫ್ ಆದಾಗ ರಾಯಚೂರು ನಗರ ಘಟಕದ ಕಂಡಕ್ಟರ್ ಲಕ್ಷ್ಮಿಕಾಂತ್ ರೆಡ್ಡಿ ಮಹಿಳೆಯ ಖಾಸಗಿ ಅಂಗಾಂಗಗಳನ್ನ ಮುಟ್ಟಿ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಇದನ್ನೂ ಓದಿ: ದಾವಣಗೆರೆ: ಪತ್ನಿ ಇದ್ರು‌‌ ಮತ್ತೊಬ್ಬಳೊಂದಿಗೆ ಚಕ್ಕಂದ; ಕಿಲಾಡಿ ಪೊಲೀಸ್ ಕಾನ್ಸ್​ಸ್ಟೇಬಲ್ ಅಮಾನತು

ಸಂತ್ರಸ್ತ ಮಹಿಳೆ ಡ್ರೈವರ್ ಸೀಟ್ ಹಿಂಬದಿಯಲ್ಲಿ ಕುಳಿತು ಪ್ರಯಾಣ ಮಾಡುತ್ತಿದ್ದರು. ಡ್ರೈವರ್ ಮಲಗೋಕೆ ಇರುವ ಸೀಟ್​ನಲ್ಲಿ ಕಂಡಕ್ಟರ್ ಮಲಗಿದ್ದ. ಪಕ್ಕದಲ್ಲಿದ್ದ ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ಕಿರುಕುಳ ನೀಡಿದ್ದಾನೆ ಅಂತ ಸಂತ್ರಸ್ತ ಮಹಿಳೆ ಆರೋಪಿಸಿದ್ದರು. ಫ್ರೀ ಟಿಕೆಟ್ ಹರಿದು ತನ್ನ ಜೇಬ್​ನಲ್ಲಿ ಇಟ್ಟುಕೊಂಡು ಟಿಕೆಟ್ ಬೇಕಾದರೆ ಲೈಂಗಿಕವಾಗಿ ಸಹಕರಿಸು, ಇಲ್ಲ ಫೈನ್ ಬೀಳುತ್ತೆ ಎಂದು ಹೇಳಿ ಪಟ್ಟು ಹಿಡಿದಿದ್ದ ಎಂದು ಸಂತ್ರಸ್ತೆ ಆರೋಪಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:43 pm, Thu, 14 November 24

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!