ನೆಲಮಂಗಲ: ಟೆಂಪೊ ಮತ್ತು ಕ್ಯಾಂಟರ್ ನಡುವೆ ಡಿಕ್ಕಿ, ಮೂವರು ದುರ್ಮರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಬಳಿಯ ಎನ್​ಎಚ್​ 4ರಲ್ಲಿ ಟೆಂಪೊ, ಕ್ಯಾಂಟರ್ ಡಿಕ್ಕಿಯಾಗಿ ಪಾದಚಾರಿ ಸೇರಿದಂತೆ ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಅಪಘಾತದ ನಂತರ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಚಾರ ಅಸ್ತವ್ಯಸ್ತವಾಗಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನೆಲಮಂಗಲ: ಟೆಂಪೊ ಮತ್ತು ಕ್ಯಾಂಟರ್ ನಡುವೆ ಡಿಕ್ಕಿ, ಮೂವರು ದುರ್ಮರಣ
ನೆಲಮಂಗಲ: ಟೆಂಪೊ-ಕ್ಯಾಂಟರ್ ನಡುವೆ ಡಿಕ್ಕಿ, ಮೂವರು ದುರ್ಮರಣ
Follow us
ಬಿ ಮೂರ್ತಿ, ನೆಲಮಂಗಲ
| Updated By: ಗಂಗಾಧರ​ ಬ. ಸಾಬೋಜಿ

Updated on:Aug 11, 2024 | 7:08 PM

ನೆಲಮಂಗಲ, ಆಗಸ್ಟ್​ 11: ಲಾರಿ ಡಿಕ್ಕಿ (collision) ಹೊಡೆದ ಪರಿಣಾಮ ಟೆಂಪೊದಲ್ಲಿದ್ದ ಮೂವರು ದುರ್ಮರಣ (death) ಹೊಂದಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕು ಕುಲುವನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಸಂಭವಿಸಿದೆ. ಯಾದಗಿರಿ ಮೂಲದ ಕಟ್ಟಡ ಕಾರ್ಮಿಕಾರದ ನರಸಪ್ಪ(35), ಹುಸೇನಪ್ಪ(34), ಪಾದಚಾರಿ ತುಮಕೂರು ತಾಲೂಕಿನ ಸೀತಕಲ್ಲು ನಿವಾಸಿ ಶಿವಗಂಗಪ್ಪ(55) ಮೃತರು. ನೆಲಮಂಗಲ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಟೆಂಪೊ ಹಿಂದೆ ಕಾಂಕ್ರೀಟ್ ಮಿಕ್ಸರ್ ಮಾಡುವ ಟ್ರಾಲಿ ಕಟ್ಟಿಕೊಂಡು ಹೋಗುತ್ತಿದ್ದಾಗ ಘಟನೆ ನಡೆದಿದ್ದು, ಕ್ಯಾಂಟರ್ ಡಿಕ್ಕಿ ಬಳಿಕ ಮುಂದೆ ಪಾದಚಾರಿಗೂ ಡಿಕ್ಕಿಯಾಗಿ ಆತನ ಕೂಡ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಲವರ್ ಜತೆ ಏಕಾಂತದಲ್ಲಿದ್ದಾಗ ಸಿಕ್ಕಿಬಿದ್ದ ಹೆಂಡ್ತಿ: ಪ್ರಿಯಕರನ ಜೊತೆ‌ ಸೇರಿ ಗಂಡನ ಕೊಲೆ

ಟೆಂಪೊದಲ್ಲಿ ತೆರಳುತ್ತಿದ್ದ ಯಾದಗಿರಿ ಮೂಲದ ಲಕ್ಷ್ಮೀ, ಭಾನುಪ್ರಿಯಾ, ಅನಂತಪ್ಪ, ನಾಗರಾಜು, ಮೂವರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಬಂಗಾರಪ್ಪ ಸ್ಥಿತಿ ಗಂಭೀರವಾಗಿದ್ದು, ಸಾಬಣ್ಣ, ಕಟ್ಟಪ್ಪಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೂವರು ಗಾಯಾಳುಗಳನ್ನು ನೆಲಮಂಗಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅಪಘಾತದ ನಂತರ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಚಾರ ಅಸ್ತವ್ಯಸ್ತ ಉಂಟಾಗಿತ್ತು.

ವೈದ್ಯರ ನಿರ್ಲಕ್ಷ್ಯದಿಂದ ಯುವಕ ಮೃತಪಟ್ಟ ಆರೋಪ: ಕುಟುಂಬಸ್ಥರಿಂದ ಧರಣಿ

ಬೆಂಗಳೂರು: ವೈದ್ಯರ ನಿರ್ಲಕ್ಷ್ಯದಿಂದ ಯುವಕ ಮೃತಪಟ್ಟಿರುವಂತಹ ಘಟನೆ ಕೊಡಿಗೇಹಳ್ಳಿಯಲ್ಲಿರುವ ನಾರಾಯಣ್​ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆದಿದೆ. ಚಿಕಿತ್ಸೆ ಪಡೆದ ಬಳಿಕ ರಮೇಶ್​ ಮೃತಪಟ್ಟಿದ್ದಾಗಿ ಆರೋಪ ಮಾಡಲಾಗಿದೆ. ಸದ್ಯ ಯುವಕನ ಕುಟುಂಬಸ್ಥರಿಂದ ಧರಣಿ ಮಾಡಲಾಗಿದೆ.

ಇದನ್ನೂ ಓದಿ: ಒಂದು ಫೋನ್ ಕರೆಯಿಂದ ಕೋಟ್ಯಾಂತರ ರೂ ಹಣ ಕಳೆದುಕೊಂಡ ದಂಪತಿ: ಲಂಡನ್​ನಲ್ಲಿ ಕುಳಿತು ಕೃತ್ಯ

ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಮನೆಗೆ ಬಂದ ಕೂಡಲೇ ಕುಸಿದುಬಿದ್ದಿದ್ದಾರೆ. ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ. ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಜಸ್ಥಾನದಲ್ಲಿ ಬಾಗಲಕೋಟೆ ಮೂಲದ ಯೋಧ ಅನಾರೋಗ್ಯದಿಂದ ಸಾವು

ಬಾಗಲಕೋಟೆ: ರಾಜಸ್ಥಾನದಲ್ಲಿ ಬಾಗಲಕೋಟೆ ಮೂಲದ ಯೋಧ ಅನಾರೋಗ್ಯದಿಂದ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮಿಷನ್ ರೆಜಿಮೆಂಟ್​ನಲ್ಲಿದ್ದ ಯೋಧ ಮಂಜುನಾಥ ಬೈಲಕುರ್(33) ಮೃತ ಯೋಧ. ಜಿಲ್ಲೆಯ ಹುನಗುಂದ ತಾಲೂಕಿನ ಬಸವನಾಳ ಗ್ರಾಮದ ನಿವಾಸಿ. ನಿನ್ನೆ ಆರೋಗ್ಯದಲ್ಲಿ ಏರುಪೇರಾಗಿತ್ತು, ಇಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:41 pm, Sun, 11 August 24

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್