AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿಯರ ಅಂಗಾಂಗಗಳನ್ನು ಮುಟ್ಟಿ ವಿಕೃತಿ ಮೆರೆಯುತ್ತಿದ್ದ ಶಾಲಾ ಮಾಲೀಕ ಅರೆಸ್ಟ್

ನೆಲಮಂಗಲದ ಶಾಲೆಯೊಂದರ ಮಾಲೀಕರೊಬ್ಬರ ಕಾಮಚೇಷ್ಟೆಗಳು ಬಗೆದಷ್ಟು ಹೊರಬರುತ್ತಿವೆ. ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ನಡೆದುಕೊಂಡು ತೃಪ್ತಿಪಡುತ್ತಿದ್ದ ಶಾಲೆ ಮಾಲೀಕ ಈರತ್ತಯ್ಯ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಎಫ್ಐಆರ್ ದಾಖಲಾಗಿದ್ದು, ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ವಿದ್ಯಾರ್ಥಿನಿಯರ ಅಂಗಾಂಗಗಳನ್ನು ಮುಟ್ಟಿ ವಿಕೃತಿ ಮೆರೆಯುತ್ತಿದ್ದ ಶಾಲಾ ಮಾಲೀಕ ಅರೆಸ್ಟ್
ಈರತ್ತಯ್ಯ
ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ| Edited By: |

Updated on:Nov 16, 2024 | 10:52 AM

Share

ಬೆಂಗಳೂರು, (ನವೆಂಬರ್ 15): ನೆಲಮಂಗಲದ ಶಾಲೆಯೊಂದರ ಮಾಲೀಕ ಈರತ್ತಯ್ಯನ ಕಾಮಚೇಷ್ಟೆ ಬಟಾಬಯಲಾಗಿದೆ. ವಿದ್ಯಾರ್ಥಿನಿಯರನ್ನು ತನ್ನ ಕ್ಯಾಬಿನ್​ಗೆ ಕರೆಸಿಕೊಂಡು ಅವರ ಅಂಗಾಂಗಗಳನ್ನು ಮುಟ್ಟಿ, ವರ್ಣಿಸಿ ವಿಕೃತಿ ಮೆರೆಯುತ್ತಿದ್ದ ಎಂದು ಆರೋಪಿಸಲಾಗಿದೆ. ಕಳೆದ ನಾಲ್ಕು ತಿಂಗಳಿನಿಂದ ಹೆಣ್ಣು ಮಕ್ಕಳ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ನಡೆಸುತ್ತಲೇ ಇದ್ದ ಎಂದು ನೊಂದ ವಿದ್ಯಾರ್ಥಿ ದೂರು ದಾಖಲಿಸಿದ್ದು, ದೂರಿನಲ್ಲಿ ಕಾಮಚೇಷ್ಟೆಯ ಬಗ್ಗೆ ಎಳೆ ಎಳೆಯಾಗಿ ವಿವರಿಸಿದ್ದಾರೆ. ಸದ್ಯ ಈ ದೂರಿನ ಮೇರೆಗೆ ಮಾದನಾಯಕನಹಳ್ಳಿಯ ಪೊಲೀಸರು. ಶಾಲಾ ಮಾಲೀಕ ಈರತ್ತಯ್ಯನನ್ನು ಪೋಕ್ಸೋ ಕಾಯ್ದೆ ಅಡಿಯಲ್ಲಿ ‌ಬಂಧಿಸಿ ಜೈಲಿಗಟ್ಟಿದ್ದಾರೆ.

ಕಳೆದ ನಾಲ್ಕು ತಿಂಗಳಿನಿಂದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ತನ್ನ ಕ್ಯಾಬಿನ್ ಗೆ ವಿದ್ಯಾರ್ಥಿನಿಯರನ್ನು ಕರೆಯಿಸಿಕೊಂಡು ಅವರ ಅಂಗಾಂಗಗಳನ್ನು ಮುಟ್ಟಿ ವಿಕೃತ ಆನಂದಪಡುತ್ತಿದ್ದ. ಅವರ ಅಂಗಾಂಗಗಳನ್ನು ಹಣ್ಣುಗಳಿಗೆ ಹೋಲಿಕೆ ಮಾಡಿ ವರ್ಣನೆ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಇನ್ನು ವಿದ್ಯಾರ್ಥಿನಿಯರು ಕೂಡ ತಮಗಾದ ಕಿರುಕುಳ ಬಗ್ಗೆ ಎಫ್​ಐಆರ್​ನಲ್ಲಿ ವಿವರಿಸಿದ್ದಾರೆ.

ಶಾಲಾ ಮಾಲೀಕನ ಕಾಮಚೇಷ್ಟೆ ವಿವರಿಸಿದ ವಿದ್ಯಾರ್ಥಿನಿ

ನಮ್ಮ ಗ್ರಾಮದಲ್ಲಿರುವ ಸ್ಕೂಲ್​ನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿರುತ್ತೇನೆ. ಈಗ್ಗೆ ಕಳೆದ 4 ತಿಂಗಳಿನಿಂದ ನಮ್ಮ ಶಾಲೆಯ ಸೆಕ್ರೆಟರಿಯಾದ ಈರತ್ತಯ್ಯರವರು ನನ್ನನ್ನು ಒಬ್ಬಳನ್ನೇ ಅವರ ಕ್ಯಾಬಿನ್ ಗೆ ಕರೆಸಿಕೊಂಡು ನನ್ನ ತುಟಿಗೆ ಮುತ್ತನ್ನು ಕೊಟ್ಟರು, ಅವರು ನನ್ನ ಬಳಿ ಪೀರಿಯಡ್ಸ್ ಮತ್ತು ನನ್ನ ದೇಹದ ಅಂಗಾಂಗಗಳ ಬಗ್ಗೆ ಅಸಹ್ಯವಾಗಿ ಮಾತನಾಡಿದರು. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ನಿನ್ನ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದು ಹೆದರಿಸಿದ್ದರಿಂದ ಎಲ್ಲವನ್ನು ಸಹಿಸಿಕೊಂಡಿದ್ದೆ ಎಂದು ವಿದ್ಯಾರ್ಥಿನಿಯೊಬ್ಬರು ಹೇಳಿಕೊಂಡಿದ್ದಾರೆ.

ಸುಮಾರು 2 ತಿಂಗಳ ಹಿಂದೆ ನನ್ನನ್ನು ಅವರ ಕ್ಯಾಬಿನ್ ಗೆ ಕರೆಸಿಕೊಂಡು ನಿನಗೊಂದು ಉದಾಹರಣೆ ಕೂಡಲೇ? ಎಂದು ಕೇಳಿದರು. ನಾನು ಹೇಳಿ ಎಂದೆ, ಅದಕ್ಕೆ ಈರತ್ತಯ್ಯರವರು ನನಗೆ ಆಸೆಯಾಗಿ ನಿನ್ನ ಕರೆದರೆ ಬರುತ್ತೀಯಾ ಎಂದು ಕೇಳಿದರು. ಅಷ್ಟೇ ಅಲ್ಲದೇ ನಿನಗೆ ಅಪ್ಪನ ಪ್ರೀತಿ ಬೇಕಾ ಇಲ್ಲ ನನ್ನ ಪ್ರೀತಿ ಬೇಕಾ ಎಂದು ಕೇಳಿದ್ದಾರೆ. ಆಗ ನಾನು ಭಯಪಟ್ಟು ಏನನ್ನೂ ಹೇಳದೇ ಮಾನಸಿಕವಾಗಿ ಕುಗ್ಗಿ ಹೋದೆ. ಆಗಾಗ ಸ್ಪೆಷಲ್ ಕ್ಲಾಸ್ ಭಾನುವಾರದ ವೇಳೆ ಕ್ಯಾಬಿನ್​​ಗೆ ಕರೆದು ಮತ್ತು ಬಸ್ ನಲ್ಲಿ ಹೋಗುವಾಗ ಎಲ್ಲಾ ಮಕ್ಕಳು ಇಳಿದ ಮೇಲೆ ನನ್ನನ್ನು ಲಾಸ್ಟ್ ಸೀಟಿಗೆ ಕರೆದುಕೊಂಡು ಹೋಗಿ ಮುತ್ತು ಕೊಡುವುದು ಮತ್ತು ಅಂಗಾಂಗಗಳನ್ನು ಅಸಭ್ಯವಾಗಿ ಮುಟ್ಟುವುದು ಮಾಡುತ್ತಿದ್ದರು. ಇವರು ನಮ್ಮ ಶಾಲೆಯ ಮಾಲೀಕರು ಎಂದು ಅವರಿಗೆ ಭಯಪಟ್ಟು ಸುಮ್ಮನಾಗಿದ್ದೆ. ಈ ರೀತಿ ಕಿರುಕುಳ ಸಹಿಸಿಕೊಂಡು ಸಾಕಾಗಿತ್ತು ಎಂದು ವಿದ್ಯಾರ್ಥಿನಿ ಅಳಲು ತೋಡಿಕೊಂಡಿದ್ದಾಳೆ.

ಇಷ್ಟೇ ಅಲ್ಲದೆ ಈರಯ್ಯ ಹೆಣ್ಣು ಮಕ್ಕಳ ಎದೆ ಭಾಗ ಮುಟ್ಟಿ ಹಣ್ಣುಗಳಿಗೆ ಹೋಲಿಕೆ ಮಾಡಿ ವರ್ಣನೆ ಮಾಡುತ್ತಿದ್ದನಂತೆ. ಅಸಭ್ಯ ವರ್ತನೆ ಬಗ್ಗೆ ಶಿಕ್ಷಕರು ಶಿಕ್ಷಣ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಕೂಡಲೇ ಮಾದನಾಯಕನಹಳ್ಳಿಯ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಾಥಮಿಕ ಹಂತದ ತನಿಖೆ ನಡೆಸಿ ಅರೋಪಿಯನ್ನು ಜೈಲಿಗೆ ಕಳುಹಿಸಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:23 pm, Fri, 15 November 24

Follow Us
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ