AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nelyadi Accident: ಹೊತ್ತಿ ಉರಿದ ಬಸ್​ನಲ್ಲಿ ನಟಿ ನೀಮಾ ರೇ! ನೆಲ್ಯಾಡಿ ಭೀಕರ ಅಪಘಾತದಲ್ಲಿ ತುಳು ಕಲಾವಿದೆ ಸೇಫ್​ ಆಗಿದ್ದು ಹೇಗೆ?

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿ ಬಳಿ ಬುಧವಾರ (ಮಾ.24) ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದ ಸುದ್ದಿ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಈ ಅಪಘಾತದಲ್ಲಿ ತುಳು ನಟಿ ಬಚಾವ್​ ಆಗಿದ್ದಾರೆ.

Nelyadi Accident: ಹೊತ್ತಿ ಉರಿದ ಬಸ್​ನಲ್ಲಿ ನಟಿ ನೀಮಾ ರೇ! ನೆಲ್ಯಾಡಿ ಭೀಕರ ಅಪಘಾತದಲ್ಲಿ ತುಳು ಕಲಾವಿದೆ ಸೇಫ್​ ಆಗಿದ್ದು ಹೇಗೆ?
ನೀಮಾ ರೇ - ನೆಲ್ಯಾಡಿ ಅಪಘಾತ
ಮದನ್​ ಕುಮಾರ್​
|

Updated on: Mar 25, 2021 | 11:09 AM

Share

ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ನೆಲ್ಯಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ಅಪಘಾತ ಭೀಕರ ಅಪಘಾತ ಸಂಭವಿಸಿದೆ. ಬುಧವಾರ ರಾತ್ರಿ ನಡೆದ ಈ ದುರ್ಘಟನೆಯಲ್ಲಿ ಲಾರಿ ಮತ್ತು ಬಸ್​ಗೆ ಬೆಂಕಿ ಹೊತ್ತಿಕೊಂಡಿದೆ. ಕೆಲವೇ ನಿಮಿಷಗಳಲ್ಲಿ ಎರಡೂ ವಾಹನಗಳು ಸುಟ್ಟು ಭಸ್ಮವಾಗಿವೆ. ಲಾರಿ ಚಾಲಕ ಸಜೀವ ದಹನವಾಗಿದ್ದು, ಬಸ್​ನಲ್ಲಿದ್ದ ಪ್ರಯಾಣಿಸಕರು ಸೇಫ್​ ಆಗಿದ್ದಾರೆ. ಇದೇ ಬಸ್​ನಲ್ಲಿ ತುಳು ನಟಿ ನೀಮಾ ರೇ ಕೂಡ ಪ್ರಯಾಣ ಮಾಡುತ್ತಿದ್ದರು!

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಗೂಡ್ಸ್ ಲಾರಿ ನಡುವೆ ಡಿಕ್ಕಿ ಸಂಭವಿಸಿತು. ಪರಿಣಾಮ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿತು. ಬಸ್​ನಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಅವರ ಪೈಕಿ ತುಳು ಚಿತ್ರರಂಗದ ಖ್ಯಾತ ನಟಿ ನೀಮಾ ರೇ ಕೂಡ ಇದ್ದರು. ಅದೃಷ್ಟವಶಾತ್​ ಅವರೆಲ್ಲರೂ ಪಾರಾಗಿದ್ದಾರೆ.

ಡಿಕ್ಕಿ ಹೊಡೆದ ತಕ್ಷಣ ಬಸ್​ನಲ್ಲಿ ಹೊಗೆ ಆವರಿಸಲು ಆರಂಭ ಆಯಿತು. ಅದರಿಂದ ಎಲ್ಲರೂ ಗಾಬರಿಗೊಂಡಿದ್ದಾರೆ. ಹೇಗೋ ಸಾಹಸಪಟ್ಟು ಬಾಗಿಲು ತೆರೆಯಲು ಪ್ರಯತ್ನಿಸಿದ್ದಾರೆ. ಬೆಂಕಿ ಆವರಿಸಿಕೊಳ್ಳುವ ಮುನ್ನವೇ ಎಲ್ಲರೂ ಬಸ್​ನಿಂದ ಹೊರಬಂದಿದ್ದಾರೆ. ಸ್ವಲ್ಪವೇ ತಡವಾಗಿದ್ದರೂ ಎಲ್ಲರೂ ಸಜೀವದಹನ ಆಗಬೇಕಾಗಿತ್ತು! ಘಟನೆಗೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

‘ಬಾಗಿಲು ತೆಗೆಯುವುದು ತುಂಬ ಕಷ್ಟ ಆಗಿತ್ತು. ಎಲ್ಲವೂ ಜಾಮ್​ ಆಗಿತ್ತು. ತುಂಬ ಕಷ್ಟಪಟ್ಟು ಹೊರಬಂದೆವು. ನಾನು ಈಗ ಚೆನ್ನಾಗಿದ್ದೇನೆ. ಎಲ್ಲ ಪ್ರಯಾಣಿಕರು ಸೇಫ್​ ಆಗಿದ್ದೇವೆ. ಕೆಲವರಿಗೆ ಗಾಯಗಳಾಗಿವೆ’ ಎಂದು ಮಾಧ್ಯಮಗಳಿಗೆ ನೀಮಾ ರೇ ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚೆಗೆ ಘೋಷಣೆಯಾದ 67ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಯಲ್ಲಿ ‘ಅತ್ಯುತ್ತಮ ತುಳು ಸಿನಿಮಾ’ ಎಂಬ ಗೌರವಕ್ಕೆ ಪಾತ್ರವಾದ ‘ಪಿಂಗಾರ’ ಸಿನಿಮಾದಲ್ಲಿ ನೀಮಾ ರೈ ನಟಿಸಿದ್ದಾರೆ.

ಇದನ್ನೂ ಓದಿ: ಕಳೆದೊಂದು ವರ್ಷದಲ್ಲಿ ಕೊರೊನಾಕ್ಕಿಂತ ರಸ್ತೆ ಅಪಘಾತಕ್ಕೆ ಬಲಿಯಾದವರೇ ಹೆಚ್ಚು: ನಿತಿನ್ ಗಡ್ಕರಿ

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್