2022-23ನೇ‌ ಸಾಲಿನಿಂದ ಇಂಜಿನಿಯರಿಂಗ್ ಸೇರಿ ಎಲ್ಲಾ ವೃತ್ತಿಪರ ಕೋರ್ಸ್‌ಗಳಲ್ಲಿ ಕನ್ನಡದಲ್ಲೇ ಕಲಿಕೆಗೆ ಅವಕಾಶ

| Updated By: guruganesh bhat

Updated on: Jul 18, 2021 | 9:16 PM

ಶಿಕ್ಷಣ ನೀತಿಯ ಪ್ರಕಾರ ಮಕ್ಕಳು ಎರಡು ದೇಶಿಯ ಭಾಷೆಗಳನ್ನು ಹಾಗೂ ಒಂದು ಅಂತಾರಾಷ್ಟ್ರೀಯ ಭಾಷೆಯನ್ನು ಕಡ್ಡಾಯವಾಗಿ ಕಲಿಯಲೇಬೇಕು. ಅದರಲ್ಲಿ ಮಾತೃಭಾಷೆಗೆ ಮೊದಲ ಪ್ರಾಶಸ್ತ್ಯ ಇರಲಿದೆ. ಮೊದಲು ನಮ್ಮ ಭಾಷೆ, ನಂತರ ಅನ್ಯಭಾಷೆ, ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಅವರು ಸ್ಪಷ್ಟಪಡಿಸಿದರು.

2022-23ನೇ‌ ಸಾಲಿನಿಂದ ಇಂಜಿನಿಯರಿಂಗ್ ಸೇರಿ ಎಲ್ಲಾ ವೃತ್ತಿಪರ ಕೋರ್ಸ್‌ಗಳಲ್ಲಿ ಕನ್ನಡದಲ್ಲೇ ಕಲಿಕೆಗೆ ಅವಕಾಶ
ಡಾ. ಸಿ ಎನ್ ಅಶ್ವತ್ಥ ನಾರಾಯಣ
Follow us on

ಬೆಂಗಳೂರು: 2022-23ನೇ‌ ಸಾಲಿನಿಂದ ಇಂಜಿನಿಯರಿಂಗ್ ಸೇರಿ ಎಲ್ಲಾ ವೃತ್ತಿಪರ ಕೋರ್ಸ್‌ಗಳಲ್ಲಿ ಕನ್ನಡದಲ್ಲೇ ವೃತ್ತಿ ಶಿಕ್ಷಣ ಕಲಿಕೆಗೆ ಅವಕಾಶ ಒದಗಿಸಲಾಗುವುದು ಎಂದು ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್‌ ನಾರಾಯಣ ತಿಳಿಸಿದ್ದಾರೆ.

ಶಿಕ್ಷಣ ನೀತಿಯ ಪ್ರಕಾರ ಮಕ್ಕಳು ಎರಡು ದೇಶಿಯ ಭಾಷೆಗಳನ್ನು ಹಾಗೂ ಒಂದು ಅಂತಾರಾಷ್ಟ್ರೀಯ ಭಾಷೆಯನ್ನು ಕಡ್ಡಾಯವಾಗಿ ಕಲಿಯಲೇಬೇಕು. ಅದರಲ್ಲಿ ಮಾತೃಭಾಷೆಗೆ ಮೊದಲ ಪ್ರಾಶಸ್ತ್ಯ ಇರಲಿದೆ. ಮೊದಲು ನಮ್ಮ ಭಾಷೆ, ನಂತರ ಅನ್ಯಭಾಷೆ, ಈ ಬಗ್ಗೆ ಯಾವುದೇ ಗೊಂದಲ ಬೇಡ. ಅಲ್ಲದೇ, ಯಾವುದೇ ಕೋರ್ಸುಗಳನ್ನು ಯಾರೋ ರೂಪಿಸಿ ನಮ್ಮ ಮೇಲೆ ಹೇರುತ್ತಾರೆಂಬ ಅನುಮಾನ ಬೇಡ. ಎಲ್ಲವನ್ನೂ ರೂಪಿಸುವುದು ಆಯಾ ವಿಶ್ವವಿದ್ಯಾಲಯಗಳು ಮತ್ತು ಆಯಾ ವಿಷಯಗಳಲ್ಲಿ ತಜ್ಞರಾಗಿರುವ ನಮ್ಮ ಪ್ರಾಧ್ಯಾಪಕರೇ ಆಗಿರುತ್ತಾರೆ. ಮುಂದಿನ ದಿನಗಳಲ್ಲಿ ಪ್ರತಿಯೊಂದು ಶಿಕ್ಷಣ ಸಂಸ್ಥೆಗೂ ಸ್ವಾಯತ್ತತೆ ಕೊಟ್ಟು ಸಬಲೀಕರಣ ಮಾಡಲಾಗುವುದು. ಆಡಳಿತಾತ್ಮಕ, ಶೈಕ್ಷಣಿಕ, ಆರ್ಥಿಕ ನಿರ್ಧಾರಗಳನ್ನು ಕೈಗೊಳ್ಳುವ ಎಲ್ಲ ಅಧಿಕಾರಗಳನ್ನು ಕೂಡ ಶಿಕ್ಷಣ ಸಂಸ್ಥೆಗಳಿಗೇ ಕೊಡಲಾಗುವುದು. ಈ ಮೂಲಕ ಶಿಕ್ಷಣ ಸಾಂಸ್ಥಿಕ ನೆಲೆಗಟ್ಟಿನಲ್ಲಿ ಸ್ಥಿರವಾಗಿ ಬೆಳವಣಿಗೆ‌ ಹೊಂದಲಿದೆ ಎಂದು ಉನ್ನತ ಶಿಕ್ಷಣ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: 

ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಬೇಕಿದ್ದ 23 ಮಕ್ಕಳಿಗೆ ಕೊರೊನಾ ಸೋಂಕು: ಪ್ರತ್ಯೇಕ ವ್ಯವಸ್ಥೆಗೆ ಮಂಡಳಿ ಸೂಚನೆ

SSLC Exam 2021: ಜುಲೈ 19 ಹಾಗೂ 22ರಂದು ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

(NEP DCM Higher Education minister Dr Ashwath Narayan says Opportunities for learning in Kannada in all professional courses from 2022-23)