ಜಿಮ್ ಬಂದ್ ನಿರ್ಧಾರ ವಾಪಸ್; ಆದರೆ ಷರತ್ತುಗಳು ಅನ್ವಯ
ಜಿಮ್ಗಳಲ್ಲಿ ಶೇಕಡಾ 50ರಷ್ಟು ಅವಕಾಶ ನೀಡಿ, ಕೊರೊನಾ ಮಾರ್ಗಸೂಚಿ ಪಾಲಿಸುವಂತೆ ರಾಜ್ಯ ಸರ್ಕಾರ ತಿಳಿಸಿದೆ. ಜಿಮ್ಗಳಲ್ಲಿ ಉಪಕರಣಗಳನ್ನ ಸ್ಯಾನಿಟೈಸ್ ಮಾಡಬೇಕು ಎಂದು ಜಿಮ್ಗಳಿಗೆ ಹೊರಡಿಸಿದ ಮಾರ್ಗಸೂಚಿಯಲ್ಲಿ ರಾಜ್ಯ ಸರ್ಕಾರ ಸೂಚಿಸಿದೆ.
ಬೆಂಗಳೂರು: ಜಿಮ್ಗಳ ಮೇಲೆ ಹೇರಿದ್ದ ಸಂಪೂರ್ಣ ನಿರ್ಬಂಧವನ್ನು ಪರಿಶ್ಕರಿಸಿ ರಾಜ್ಯ ಸರ್ಕಾರ ಇಂದು (ಏಪ್ರಿಲ್ 4) ನೂತನ ಆದೇಶ ಹೊರಡಿಸಿದೆ. ಜಿಮ್ಗಳನ್ನು ಸಂಪೂರ್ಣವಾಗಿ ಬಂದ್ ಮಾಡಬೇಕು ಎಂದು ರಾಜ್ಯ ಸರ್ಕಾರ ಈ ಮೊದಲು ಹೇಳಿತ್ತು. ಆದರೆ, ಈ ನಿಯಮಕ್ಕೆ ಜಿಮ್ ಅಸೋಸಿಯೇಷನ್ನಿಂದ ಆಕ್ಷೇಪ ವ್ಯಕ್ತವಾಗಿತ್ತು. ಸಿನಿಮಾ ಹಾಲ್ಗಳಿಗೆ ನೀಡಿದಂತೆ ಜಿಮ್ಗಳಿಗೂ ಶೇಕಡಾ 50ರಷ್ಟು ಅವಕಾಶ ನೀಡಿ ಎಂದು ಜಿಮ್ ಅಸೋಸಿಯೇಷನ್ ಮನವಿ ಮಾಡಿತ್ತು.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೂತನ ಆದೇಶವನ್ನು ಇಂದು ಹೊರಡಿಸಿದೆ. ಜಿಮ್ಗಳಲ್ಲಿ ಶೇಕಡಾ 50ರಷ್ಟು ಅವಕಾಶ ನೀಡಿ, ಕೊರೊನಾ ಮಾರ್ಗಸೂಚಿ ಪಾಲಿಸುವಂತೆ ರಾಜ್ಯ ಸರ್ಕಾರ ತಿಳಿಸಿದೆ. ಜಿಮ್ಗಳಲ್ಲಿ ಉಪಕರಣಗಳನ್ನ ಸ್ಯಾನಿಟೈಸ್ ಮಾಡಬೇಕು ಎಂದು ಜಿಮ್ಗಳಿಗೆ ಹೊರಡಿಸಿದ ಮಾರ್ಗಸೂಚಿಯಲ್ಲಿ ರಾಜ್ಯ ಸರ್ಕಾರ ಸೂಚಿಸಿದೆ.
Gyms will be allowed to open with certain specific conditions.@CMofKarnataka @mla_sudhakar@PriyankKharge @BelladArvind @kiranshaw @WFRising @BangaloreBuzz @RCBTweets @NammaKarnataka_@ADinfodeptBIDAR @MangaloreCity pic.twitter.com/ioVsPcDthm
— K’taka Health Dept (@DHFWKA) April 4, 2021
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ಸೋಂಕು ಹರಡುವ ವೇಗಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರದಿಂದ ಏಪ್ರಿಲ್ 2ರಂದು ಹೊಸ ಮಾರ್ಗಸೂಚಿ ಪ್ರಕಟವಾಗಿತ್ತು. 8 ಜಿಲ್ಲೆಗಳಲ್ಲಿ ಸಿನಿಮಾ ಹಾಲ್, ಬಾರ್, ಪಬ್, ಕ್ಲಬ್, ರೆಸ್ಟೊರೆಂಟ್ಗೆ ಶೇ 50ರಷ್ಟು ನಿರ್ಬಂಧ ವಿಧಿಸಲಾಗಿತ್ತು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಉಡುಪಿ, ಕಲಬುರಗಿ, ದಕ್ಷಿಣ ಕನ್ನಡ, ಬೀದರ್, ಧಾರವಾಡ ಜಿಲ್ಲೆಗಳಲ್ಲಿ ಈ ನಿಯಮಗಳು ಅನ್ವಯವಾಗಲಿದೆ ಎಂದು ಸೂಚಿಸಲಾಗಿತ್ತು.
ಇದೀಗ ಏಪ್ರಿಲ್ 7ರ ವರೆಗೆ ಸಿನಿಮಾ ಹಾಲ್ಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಅನುಮತಿ ನೀಡಿದ್ದು, ಜಿಮ್ಗಳಲ್ಲಿ ಕೂಡ ಸಂಪೂರ್ಣ ನಿರ್ಬಂಧ ತೆರವು ಮಾಡಿ, ಶೇ. 50ರಷ್ಟು ಅವಕಾಶ ನೀಡಿ ಆದೇಶ ಹೊರಡಿಸಿದೆ.
6ರಿಂದ 9ನೇ ತರಗತಿಯವರೆಗೆ ಶಾಲೆಗಳು ಕಾರ್ಯನಿರ್ವಹಿಸುವುದಿಲ್ಲ. ವಿದ್ಯಾಗಮ ಸೇರಿದಂತೆ ಎಲ್ಲಾ ಶೈಕ್ಷಣಿಕ ಚಟುವಟಿಕೆ ಬಂದ್ ಆಗಲಿದೆ. ಏಪ್ರಿಲ್ 20ರವರೆಗೆ ಪ್ರಸ್ತುತ ಮಾರ್ಗಸೂಚಿ ಅನ್ವಯವಾಗಲಿದೆ. ಉಳಿದಂತೆ ಇತರ ನಗರಗಳ ಪಬ್, ಬಾರ್‌ಗಳಲ್ಲಿ ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಆಚರಣೆಗಳು, ಜಾತ್ರೆ, ಮೇಳಗಳು, ಗುಂಪು ಸೇರುವುದು ನಿಷೇಧ ಮುಂದುವರಿಯಲಿದೆ. ಸಭೆ, ಸಮಾರಂಭ ಆಚರಣೆಗೆ ಮಾರ್ಚ್ 12ರ ಸುತ್ತೋಲೆ ಅನ್ವಯವಾಗಲಿದೆ ಎಂದು ತಿಳಿಸಿತ್ತು.
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆ ಕಡ್ಡಾಯ. ಅಂತರ ಕಾಪಾಡಿಕೊಳ್ಳುವ ವಿಚಾರದಲ್ಲಿ ಜನರು ಎಚ್ಚರ ವಹಿಸಬೇಕು. ಈ ನಿಯಮಗಳನ್ನು ಪೊಲೀಸರು, ಸ್ಥಳೀಯ ಆಡಳಿತ ಕಟ್ಟುನಿಟ್ಟಾಗಿ ಜಾರಿ ಮಾಡಬೇಕು ಎಂದು ಸೂಚಿಸಲಾಗಿತ್ತು. ಕೊರೊನಾ ತಡೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟವಾಗಿದ್ದು, ಅದರನ್ವಯ ಯಾವುದೇ ರೀತಿಯ ಜಾಥಾ, ಮುಷ್ಕರ, ಧರಣಿ ನಡೆಸುವುದನ್ನು ನಿಷೇಧ ಮಾಡಲಾಗಿದೆ. ಸಾರಿಗೆ ಬಸ್‌ಗಳಲ್ಲಿ ನಿಗದಿತ ಆಸನದಷ್ಟೇ ಜನರನ್ನು ಕೊಂಡೊಯ್ಯಬೇಕು. ಸಾಧ್ಯವಾದ ಮಟ್ಟಿಗೂ ಮನೆಯಿಂದಲೇ ಕಚೇರಿ ಕೆಲಸ (ವರ್ಕ್ಫ್ರಂ) ಸೌಲಭ್ಯ ಬಳಸಿಕೊಳ್ಳಬೇಕು ಎಂದು ಸರ್ಕಾರ ಸೂಚಿಸಿತ್ತು.
ಇದನ್ನೂ ಓದಿ: ಯುವರತ್ನನಿಗೆ ರಿಲೀಫ್: ಏಪ್ರಿಲ್ 7ರವರೆಗೂ ಥಿಯೇಟರ್ ಹೌಸ್ ಫುಲ್ಗೆ ಅವಕಾಶ
ಇದನ್ನೂ ಓದಿ: ‘ಸಿಎಂ ಯಡಿಯೂರಪ್ಪ ನಿಜವಾದ ರಾಜಾಹುಲಿ’: ಹೌಸ್ಫುಲ್ ಅವಕಾಶ ನೀಡಿದ್ದಕ್ಕೆ ಕೇಳಿಬಂತು ಹೊಗಳಿಕೆ
Published On - 6:00 pm, Sun, 4 April 21