ಲಾಕ್​ಡೌನ್: ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ, ಏನೇನಿದೆ?

ಬೆಂಗಳೂರು: ಕೊರೊನಾ ವೈರಸ್ ಸೋಂಕು ತಡೆಗಟ್ಟಲು ದೇಶಾದ್ಯಂತ ಲಾಕ್​ಡೌನ್ ವಿಸ್ತರಿಸಿ ಕೇಂದ್ರ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿ ಪಾಲಿಸಲು ರಾಜ್ಯ ಸರ್ಕಾರವೂ ನಿರ್ಧರಿಸಿದ್ದು, ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಮೇ 3ರ ಬಳಿಕ ಮದ್ಯ ಮಾರಾಟಕ್ಕೆ ಅವಕಾಶ: ಮದ್ಯಪ್ರಿಯರಿಗೂ ಗುಡ್ ನ್ಯೂಸ್ ನೀಡಿದ್ದು, ಮೇ 3ರ ಬಳಿಕ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ರೆಡ್, ಆರೆಂಜ್​, ಗ್ರೀನ್​ ವಲಯಗಳಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ಕೊಟ್ಟಿದ್ದು, ಕನಿಷ್ಠ 6 ಅಡಿ ಅಂತರ […]

ಲಾಕ್​ಡೌನ್: ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ, ಏನೇನಿದೆ?
ಸಿಎಂ ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ)
Follow us
ಸಾಧು ಶ್ರೀನಾಥ್​
|

Updated on:May 02, 2020 | 3:36 PM

ಬೆಂಗಳೂರು: ಕೊರೊನಾ ವೈರಸ್ ಸೋಂಕು ತಡೆಗಟ್ಟಲು ದೇಶಾದ್ಯಂತ ಲಾಕ್​ಡೌನ್ ವಿಸ್ತರಿಸಿ ಕೇಂದ್ರ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿ ಪಾಲಿಸಲು ರಾಜ್ಯ ಸರ್ಕಾರವೂ ನಿರ್ಧರಿಸಿದ್ದು, ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಮೇ 3ರ ಬಳಿಕ ಮದ್ಯ ಮಾರಾಟಕ್ಕೆ ಅವಕಾಶ: ಮದ್ಯಪ್ರಿಯರಿಗೂ ಗುಡ್ ನ್ಯೂಸ್ ನೀಡಿದ್ದು, ಮೇ 3ರ ಬಳಿಕ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ರೆಡ್, ಆರೆಂಜ್​, ಗ್ರೀನ್​ ವಲಯಗಳಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ಕೊಟ್ಟಿದ್ದು, ಕನಿಷ್ಠ 6 ಅಡಿ ಅಂತರ ಕಾಪಾಡಿಕೊಂಡು ಮದ್ಯ ಖರೀದಿ ಮಾಡಬೇಕಿದೆ. ನಿಯಮಗಳ ಕಟ್ಟುನಿಟ್ಟಿನ ಪಾಲನೆ ಹೊಣೆ ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ.

21 ದಿನಗಳ ಕಾಲ ಹೊಸ ಕೇಸ್​ ಪತ್ತೆಯಾಗದಿದ್ರೆ ಜೋನ್ ಬದಲಾವಣೆಯಾಗಲಿದೆ. ರೆಡ್​ ಜೋನ್​ ವಲಯವಿದ್ದರೆ ಆರೆಂಜ್ ಜೋನ್, ಆರೇಂಜ್​ ಜೋನ್​ನಲ್ಲಿದ್ರೆ ಅದು ಗ್ರೀನ್​ ಜೋನ್​ ಆಗಿ ಬದಲಾವಣೆಯಾಗಲಿದೆ.

ಕಾರಿನಲ್ಲಿ ಇಬ್ಬರು, ಬೈಕ್​ನಲ್ಲಿ ಒಬ್ಬರಿಗೆ ಅವಕಾಶ: ಆರೆಂಜ್ ಜೋನ್​ನ 284 ಜಿಲ್ಲೆಗಳಲ್ಲಿ ಸ್ವಲ್ಪ ಸಡಿಲಿಕೆ ಮಾಡಿದ್ದು, ಕಾರಿನಲ್ಲಿ ಇಬ್ಬರು, ಬೈಕ್​ನಲ್ಲಿ ಒಬ್ಬರು ಓಡಾಡಬಹುದಾಗಿದೆ. ಆರೆಂಜ್ ಜೋನ್​ನಲ್ಲಿ ಕ್ಯಾಬ್, ಟ್ಯಾಕ್ಸಿ ಓಡಾಟಕ್ಕೆ ಅವಕಾಶ ಕೊಟ್ಟಿದ್ದು, ಅಂತರ್ ಜಿಲ್ಲಾ ಖಾಸಗಿ ವಾಹನಗಳ ಓಡಾಟಕ್ಕೂ ಅವಕಾಶ ನೀಡಲಾಗಿದೆ.

ಆರೋಗ್ಯ ಸೇತು ಆ್ಯಪ್ ಕಡ್ಡಾಯ: ರೆಡ್​ ಮತ್ತು ಆರೆಂಜ್​ ಜೋನ್​ನಲ್ಲಿರುವ ಪ್ರದೇಶ ಕಂಟೇನ್​ಮೆಂಟ್​ ಜೋನ್​ ಎಂದು ಪರಿಗಣಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಕಂಟೇನ್​ಮೆಂಟ್​ ಪ್ರದೇಶಗಳನ್ನ ಜಿಲ್ಲಾಡಳಿತಗಳು ನಿಗದಿಪಡಿಸಬೇಕು. ಕಂಟೇನ್​ಮೆಂಟ್​ ಜೋನ್​ಗಳಲ್ಲಿ ಆರೋಗ್ಯ ಸೇತು ಆ್ಯಪ್ ಕಡ್ಡಾಯವಾಗಿದೆ. ಕಂಟೇನ್​ಮೆಂಟ್​ ಜೋನ್​ಗಳಲ್ಲಿ ಸಂಪರ್ಕಿತರ ಕುರಿತು ನಿಗಾ ಇಡಲಾಗುತ್ತೆ. ಈ ಪ್ರದೇಶಗಳಿಗೆ ಒಳ ಹೋಗಲು ಅಥವಾ ಹೊರ ಬರಲು ಅವಕಾಶವಿಲ್ಲ.

ಎಲ್ಲಾ​ ಜೋನ್​ಗಳಲ್ಲಿ ಆಸ್ಪತ್ರೆಗಳ ಒಪಿಡಿಗೆ ಅನುಮತಿ: ಎಲ್ಲಾ​ ಜೋನ್​ಗಳಲ್ಲಿ ಆಸ್ಪತ್ರೆಗಳ ಒಪಿಡಿಗೆ ಅನುಮತಿ. ಆದ್ರೆ ಕಂಟೇನ್​ಮೆಂಟ್​ ಜೋನ್​ಗಳಲ್ಲಿ ಒಪಿಡಿಗೆ ಅನುಮತಿ ಇಲ್ಲ. ಕೇಂದ್ರ ಗೃಹ ಇಲಾಖೆ ಅನುಮತಿ ಇದ್ದರೆ ಸಾರಿಗೆಗೆ ಅನುಮತಿ ನೀಡಲಾಗುವುದು. ಬಸ್​, ವಿಮಾನ, ರೈಲು ಸಂಚಾರಕ್ಕೆ ಅನುಮತಿ ಅತ್ಯಗತ್ಯ. ಆದ್ರೆ, ಆಟೋ ರಿಕ್ಷಾ, ಟ್ಯಾಕ್ಸಿ, ಕ್ಯಾಬ್​, ಸಲೂನ್​ಗಳು ಬಂದ್​ ಆಗಲಿವೆ.

ಅಗತ್ಯವಲ್ಲದ ಉದ್ದೇಶಕ್ಕೆ ಸಾರ್ವಜನಿಕರ ಓಡಾಟ ನಿರ್ಬಂಧ: ಅಗತ್ಯವಲ್ಲದ ಉದ್ದೇಶಕ್ಕೆ ರಾತ್ರಿ 7 ರಿಂದ ಬೆಳಗ್ಗೆ 7 ಗಂಟೆಯವರೆಗೆ ಸಾರ್ವಜನಿಕರು ಓಡಾಡುವಂತಿಲ್ಲ. 65 ವರ್ಷ ಮೇಲ್ಪಟ್ಟವರು, ಮಕ್ಕಳಿಗೆ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ವೃದ್ಧರು, ಗರ್ಭಿಣಿಯರು, ಮಕ್ಕಳು ಮನೆಯಲ್ಲಿಯೇ ಇರಬೇಕು. ಆರೋಗ್ಯ ಸಮಸ್ಯೆ ಇದ್ದರೆ ಆಸ್ಪತ್ರೆಗೆ ಹೋಗಲು ಅನುಮತಿ ನೀಡಲಾಗಿದೆ.

Published On - 3:14 pm, Sat, 2 May 20

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ