AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಆತಂಕ ಹೆಚ್ಚಳ; ಪಂಜಾಬ್, ಚಂಡೀಗಡದಿಂದ ಆಗಮಿಸುವ ಪ್ರಯಾಣಿಕರಿಗೂ ಕೊವಿಡ್ ನೆಗೆಟಿವ್ ಪತ್ರ ಕಡ್ಡಾಯ

ರಾಜ್ಯದಲ್ಲಿ ಇಂದು ಹೊಸದಾಗಿ 1,445 ಜನರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9,71,647ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ ಕೊರೊನಾಗೆ 12,444 ಜನರು ಬಲಿಯಾಗಿದ್ದು, ಇಂದು ಸೋಂಕಿನಿಂದ 10 ಜನರ ಸಾವನ್ನಪ್ಪಿದ್ದಾರೆ.

ಕೊರೊನಾ ಆತಂಕ ಹೆಚ್ಚಳ; ಪಂಜಾಬ್, ಚಂಡೀಗಡದಿಂದ ಆಗಮಿಸುವ ಪ್ರಯಾಣಿಕರಿಗೂ ಕೊವಿಡ್ ನೆಗೆಟಿವ್ ಪತ್ರ ಕಡ್ಡಾಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 06, 2022 | 6:50 PM

Share

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಿಸಲು ಕೇರಳ ಮತ್ತು ಮಹಾರಾಷ್ಟ್ರದಿಂದ ಆಗಮಿಸುವ ಪ್ರಯಾಣಿಕರಿಗೆ ಜಾರಿ ಮಾಡಿರುವ ನಿಯಮವನ್ನು ಪಂಜಾಬ್ ಮತ್ತು ಚಂಡೀಗಡದಿಂದ ಆಗಮಿಸುವ ಪ್ರಯಾಣಿಕರಿಗೂ ವಿಸ್ತರಿಸಲಾಗಿದ್ದು, ಈ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರು 72 ಗಂಟೆಗಳಿಗಿಂತ ಹಳೆಯದಲ್ಲದ ಕೋವಿಡ್ ನೆಗಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದೆ.

ರಾಜ್ಯದಲ್ಲಿ ಇಂದು ಹೊಸದಾಗಿ 1,445 ಜನರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9,71,647ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ ಕೊರೊನಾಗೆ 12,444 ಜನರು ಬಲಿಯಾಗಿದ್ದು, ಇಂದು ಸೋಂಕಿನಿಂದ 10 ಜನರ ಸಾವನ್ನಪ್ಪಿದ್ದಾರೆ.

ಬೆಂಗಳೂರಲ್ಲಿ ಇಂದು ಒಂದೇ ದಿನ 886 ಜನರಿಗೆ ಸೋಂಕು ಪತ್ತೆಯಾಗಿದೆ. ತನ್ಮೂಲಕ ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 4,18,558ಕ್ಕೆ ಏರಿಕೆಯಾಗಿದೆ. ಹಾಗೂ ನಗರದಲ್ಲಿ ಸೋಂಕಿನಿಂದ ಇಂದು ನಾಲ್ವರು ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಕೊವಿಡ್​ನಿಂದ ತೀರಿಕೊಂಡವರ ಸಂಖ್ಯೆ 4,553 ಆಗಿದೆ.

ರಾಜ್ಯದ ಒಟ್ಟು ಸೋಂಕಿತರ ಪೈಕಿ 9,44,917 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಪ್ರಸ್ತುತ 14,267 ಮಂದಿ ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಕುರಿತು ಮಾಹಿತಿ ನೀಡಿದೆ.

ಮಣಿಪಾಲ MIT ಕ್ಯಾಂಪಸ್​ನಲ್ಲಿ ಇಂದು 72 ಜನರಿಗೆ ಕೊರೊನಾ ದೃಢ ಉಡುಪಿ ಜಿಲ್ಲೆಯಲ್ಲಿ ಇಂದು 113 ಜನರಿಗೆ ಕೊರೊನಾ ದೃಢವಾಗಿದೆ. ಮಣಿಪಾಲದ MIT ಕ್ಯಾಂಪಸ್ ಒಂದರಲ್ಲೇ 72 ಜನರಿಗೆ ಕೊರೊನಾ ಪತ್ತೆಯಾಗಿದೆ. ಈ ಮೂಲಕ, ಎಂಐಟಿ ಕ್ಯಾಂಪಸ್​ನಲ್ಲಿ ಸೋಂಕಿತರ ಸಂಖ್ಯೆ 372ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾದಿಂದ 190 ಜನರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಉಡುಪಿ DHO ಡಾ. ಸುಧೀರ್ ಚಂದ್ರ ಸೂಡ ಮಾಹಿತಿ ನೀಡಿದ್ದಾರೆ.

ಕೊರೊನಾ ಪ್ರಕರಣಗಳ ಪ್ರಮಾಣ ಮತ್ತೆ ಏರಿಕೆಯಾಗುತ್ತಿದೆ. ಮಹಾರಾಷ್ಟ್ರ, ಕೇರಳ, ಪಂಜಾಬ್, ಚಂಡೀಗಢ, ರಾಜಸ್ಥಾನ್, ಗುಜರಾತ್ ಸಹಿತ ಕರ್ನಾಟಕದಲ್ಲೂ ಕೊವಿಡ್19 ಆತಂಕ ಹೆಚ್ಚಾಗಿದೆ. ಈ ನಡುವೆ, ನೆರೆಯ ರಾಜ್ಯವಾದ ತಮಿಳುನಾಡಿನಲ್ಲಿ ಎಲ್ಲಾ‌ ಕಾಲೇಜುಗಳಿಗೆ ಇಂದು (ಮಾರ್ಚ್ 22) ರಜೆ ಘೋಷಣೆ ಮಾಡಲಾಗಿದೆ. ಆನ್‌ಲೈನ್‌ ತರಗತಿಗಳನ್ನು ಮಾತ್ರ ನಡೆಸುವಂತೆ ಸೂಚನೆ ನೀಡಲಾಗಿದೆ. ನಿನ್ನೆಯಷ್ಟೇ 9, 10, 11ನೇ ತರಗತಿ ಶಾಲೆಗಳಿಗೆ ರಜೆ ನೀಡಲಾಗಿತ್ತು.

ಇದನ್ನೂ ಓದಿ: ಕೋವಿಶೀಲ್ಡ್ ಎರಡು ಡೋಸ್​ ನಡುವಿನ ಅಂತರ 6-8 ವಾರಗಳಿಷ್ಟಿರಬೇಕು ಎಂದ ಕೇಂದ್ರ ಸರ್ಕಾರ

ಉತ್ತರಾಖಂಡ ಮುಖ್ಯಮಂತ್ರಿ ತೀರಥ್​ ಸಿಂಗ್ ರಾವತ್​ಗೆ ಕೊರೊನಾ ಸೋಂಕು; ದೆಹಲಿ ಭೇಟಿ ರದ್ದು

Published On - 10:38 pm, Mon, 22 March 21

Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ