ಕರ್ನಾಟಕದಲ್ಲಿ ಪಟಾಕಿ ಬ್ಯಾನ್​​: ಹಸಿರು ಪಟಾಕಿ ಎಂದು ತಿಳಿಯಲು ಬಂತು ಕ್ಯೂ ಆರ್​ ಕೋಡ್​ ಸ್ಕ್ಯಾನ್​​​​​

Green Firecrackers: ಹಸಿರು ಪಟಾಕಿಗಳನ್ನು ಪತ್ತೆಹಚ್ಚಲು ಕ್ಯೂ ಆರ್​ ಕೋಡ್​​​​ ಬಂದಿದೆ. ಹೌದು ನಿಮ್ಮ ಮೊಬೈಲ್​ನಿಂದ ಪಟಾಕಿ ಬಾಕ್ಸ್ ಮೇಲಿರುವ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಪರೀಕ್ಷಿಸಬಹುದು.

ಕರ್ನಾಟಕದಲ್ಲಿ ಪಟಾಕಿ ಬ್ಯಾನ್​​: ಹಸಿರು ಪಟಾಕಿ ಎಂದು ತಿಳಿಯಲು ಬಂತು ಕ್ಯೂ ಆರ್​ ಕೋಡ್​ ಸ್ಕ್ಯಾನ್​​​​​
ಸಾಂದರ್ಭಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Oct 11, 2023 | 11:02 AM

ಬೆಂಗಳೂರು ಅ.11: ಒಂದುವರೆ ತಿಂಗಳ ಹಿಂದೆ ಹಾವೇರಿಯ ಆಲದಟ್ಟಿ ಗ್ರಾಮದ ಬಳಿಯ ಪಟಾಕಿ (Firecrackers) ಗೋಡೌನ್​​ನಲ್ಲಿ ಅಗ್ನಿ ಅವಘಡ ಸಂಭವಿಸಿ ನಾಲ್ವರು ಮೃತಪಟ್ಟಿದ್ದರು. ಇದಾದ ನಂತರ ಆನೆಕಲ್​ ತಾಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ದುರಂತದಲ್ಲಿ 14 ಜನ ಸಾವೀಗೀಡಾಗಿದ್ದರು. ಇದಾದ ಬಳಿಕ ಎಚ್ಚತ್ತ ರಾಜ್ಯ ಸರ್ಕಾರ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಉಪಮುಖ್ಯಮಂತ್ರಿ ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ರಾಜ್ಯದಲ್ಲಿ ಗಣೇಶ ಚತುರ್ಥಿ, ಸಭೆ-ಸಮಾರಂಭ ಮತ್ತು ರಾಜಕೀಯ ಕಾರ್ಯಕ್ರಮದಲ್ಲಿ ಪಟಾಕಿ ನಿಷೇಧಿಸಲಾಗಿದೆ. ದೀಪಾವಳಿ ಹಬ್ಬದಲ್ಲಿ ಹಸಿರು ಪಟಾಕಿ ಹಾರಿಸಬೇಕು ಎಂಬ ಸುಪ್ರೀಂ ಕೋರ್ಟ್​ ಆದೇಶವನ್ನು ಪಾಲಿಸಬೇಕೆಂದು ಹೇಳಿದರು.

ಹಸಿರು ಪಟಾಕಿಗಳನ್ನು ಪತ್ತೆಹಚ್ಚಲು ಕ್ಯೂ ಆರ್​ ಕೋಡ್​​​​ ಬಂದಿದೆ. ಹೌದು ನಿಮ್ಮ ಮೊಬೈಲ್​ನಿಂದ ಪಟಾಕಿ ಬಾಕ್ಸ್ ಮೇಲಿರುವ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಪರೀಕ್ಷಿಸಬಹುದು. ಈ ಬಗ್ಗೆ ತಮಿಳುನಾಡು ಪಟಾಕಿ ತಯಾರಕರ ಸಂಘದ ಉಪಾಧ್ಯಕ್ಷ ಅಯ್ಯನ್ ಪಟಾಕಿ ಕಾರ್ಖಾನೆ ಎಂಡಿ ಜಿ ಅಬಿರುಬೆನ್ ಮಾತನಾಡಿ ಶಿವಕಾಶಿಯಲ್ಲಿ ಪಟಾಕಿ ತಯಾರಕರು ಹಸಿರು ಪಟಾಕಿ ಉತ್ಪಾದನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಹಸಿರು ಲೋಗೋ ಹೊರತುಪಡಿಸಿ, ಈ ವರ್ಷ ನಾವು ‘ಕ್ಯೂಆರ್ ಕೋಡ್’ ಪರಿಕಲ್ಪನೆ ಹೊರತಂದಿದ್ದೇವೆ. ಸ್ಕ್ಯಾನ್ ಮಾಡಿದಾಗ, ಉತ್ಪನ್ನವು ಶೇಕಡಾ 100 ರಷ್ಟು ಹಸಿರು ಪಟಾಕಿ ಎಂದು ಗ್ರಾಹಕರಿಗೆ ಭರವಸೆ ಬರಲು ಕಂಪನಿ, ಉತ್ಪಾದನಾ ಸ್ಥಳ, ದಿನಾಂಕ ಮತ್ತು ಇತರ ವಿವರಗಳನ್ನು ನೀಡುತ್ತದೆ ಎಂದರು.

ಸಾಂಪ್ರದಾಯಿಕ ಪಟಾಕಿಗಳು ಇನ್ನೂ ಲಭ್ಯವಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು “ಅಂಗಡಿ ಮಾಲೀಕರು ಮತ್ತು ವ್ಯಾಪಾರಿಗಳು ಮಾರಾಟವಾಗದ ಪಟಾಕಿಗಳನ್ನು ಸಂಗ್ರಹಿಸಿರಬಹುದು ಮತ್ತು ಅವುಗಳನ್ನು ಮಾರಾಟ ಮಾಡಲು ಕಾಯುತ್ತಿದ್ದಾರೆ”. ಆದರೆ ಹಸಿರು ಪಟಾಕಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಹೆಚ್ಚುತ್ತಿದೆ ಮತ್ತು ಮುಂದೆ ಹಸಿರು ಪಟಾಕಿಗಳು ಮಾತ್ರ ಇರುತ್ತವೆ ಎಂದು ಹೇಳಿದರು.

ಇದನ್ನೂ ಓದಿ: ಅತ್ತಿಬೆಲೆ ಅಗ್ನಿ ದುರಂತ: ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮದಲ್ಲಿ ಪಟಾಕಿ ನಿಷೇಧ: ಸಿಎಂ ಸಿದ್ದರಾಮಯ್ಯ

ಕಳೆದ ದೀಪಾವಳಿಗೆ ನಾವು ಹಸಿರು ಲೋಗೋ ಹೊಂದಿರುವ ಪಟಾಕಿ ಬಾಕ್ಸ್​​ನ್ನು ಕೊಂಡುಕೊಂಡೆವು. ಅವುಗಳನ್ನು ಸಿಡಿಸುವಾಗ, ಅವು ಸಾಮಾನ್ಯ ಪಟಾಕಿಗಳಾಗಿದ್ದವು ಎಂದು ವಿನೋದ್ ಜಯಪಾಲ್ ಎಂಬುವರು ಬೇಸರ ವ್ಯಕ್ತಪಡಿಸಿದರು.

2018 ಸುಪ್ರೀಂ ಕೋರ್ಟ್​ ಆದೇಶ

ಸುಪ್ರೀಂ ಕೋರ್ಟ್ 2018 ರಲ್ಲಿ ಪಟಾಕಿಗಳನ್ನು ನಿಷೇಧಿಸಿತು ಮತ್ತು ದೆಹಲಿಯಲ್ಲಿ ಎನ್‌ಸಿಆರ್‌ನಲ್ಲಿ ಹಸಿರು ಪಟಾಕಿಗಳನ್ನು ಸಿಡಿಸಲು ಮಾತ್ರ ಅವಕಾಶ ನೀಡಿತ್ತು.

2023ರ ಸೆ.22ರ ಆದೇಶ

ಹಸಿರು ಪಟಾಕಿಗಳಲ್ಲಿ ಬೇರಿಯಂ ಸೇರಿಸುವಂತೆ ಪಟಾಕಿ ತಯಾರಕರ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಕಳೆದ ತಿಂಗಳು ಸೆ.22 ರಂದು ಪಟಾಕಿಗಳಲ್ಲಿ ಬೇರಿಯಂ ಆಧಾರಿತ ರಾಸಾಯನಿಕಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಈ ಹಿಂದೆ ನೀಡಿದ್ದ ಆದೇಶಗಳು ಚಾಲ್ತಿಯಲ್ಲಿರುತ್ತವೆ ಎಂದು ನ್ಯಾಯಮೂರ್ತಿಗಳಾದ ಎಎಸ್ ಬೋಪಣ್ಣ ಮತ್ತು ಎಂಎಂ ಸುಂದ್ರೇಶ್ ಅವರ ಪೀಠ ಸ್ಪಷ್ಟಪಡಿಸಿದೆ. ಅಲ್ಲದೆ ದೆಹಲಿಯಂತಹ ರಾಜ್ಯಗಳಲ್ಲಿ ಪಟಾಕಿ ಸಂಪೂರ್ಣ ನಿಷೇಧವಿರುವ ರಾಜ್ಯಗಳಲ್ಲಿ ಹಸಿರು ಪಟಾಕಿ ಸುಡುವುದಕ್ಕೂ ಅವಕಾಶವಿಲ್ಲ, ನ್ಯಾಯಾಲಯ ಯಾವುದೇ ರೀತಿಯಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:52 am, Wed, 11 October 23

ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ