AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಡಿಲು ಭೂಮಿ ಕೃಷಿ ಪ್ರಕ್ರಿಯೆ ಉಡುಪಿಯಲ್ಲಿ ಮತ್ತೆ ಆರಂಭ; 2000 ಎಕರೆಯಲ್ಲಿ ಭತ್ತ ಭಿತ್ತನೆಗೆ ಸಿದ್ಧತೆ

ಈ ಮಳೆಗಾಲದಲ್ಲಿ ಎರಡು ಸಾವಿರ ಎಕರೆ ಕೃಷಿ ಭೂಮಿ ಮತ್ತೆ ಹಸಿರಾಗಿ ಕಂಗೊಳಿಸಲು ಸಿದ್ಧವಾಗುತ್ತಿದೆ. ಇದಕ್ಕಾಗಿ ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳು, ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಶಾಸಕ ಕೆ.ರಘುಪತಿ ಭಟ್ ಹಲವು ಸುತ್ತಿನ ಸಭೆ ನಡೆಸಿದ್ದಾರೆ.

ಹಡಿಲು ಭೂಮಿ ಕೃಷಿ ಪ್ರಕ್ರಿಯೆ ಉಡುಪಿಯಲ್ಲಿ ಮತ್ತೆ ಆರಂಭ; 2000 ಎಕರೆಯಲ್ಲಿ ಭತ್ತ ಭಿತ್ತನೆಗೆ ಸಿದ್ಧತೆ
ಹಡಿಲು ಭೂಮಿ ಗುರುತಿಸುವ ಪ್ರಕ್ರಿಯೆ ಉಡುಪಿಯಲ್ಲಿ ಮತ್ತೆ ಆರಂಭ
TV9 Web
| Updated By: preethi shettigar

Updated on: Jun 02, 2021 | 11:23 AM

Share

ಉಡುಪಿ: ಒಂದು ಕಾಲಕ್ಕೆ ಉಡುಪಿಯಲ್ಲಿ ಕೃಷಿಯೇ ಜೀವನ ಪದ್ಧತಿಯಾಗಿತ್ತು. ಆದರೆ ಕಾಲಕ್ರಮೇಣ ಭತ್ತ ಬೆಳೆಯುವುದು ಬಿಟ್ಟು ಇಲ್ಲಿನ ಜನ ಇತರ ವಾಣಿಜ್ಯ ಚುಟವಟಿಕೆಗಳಲ್ಲೇ ಆಸಕ್ತರಾದರು. ಪರಿಣಾಮ ಜಿಲ್ಲೆಯಲ್ಲಿ ಹೆಕ್ಟೇರುಗಟ್ಟಲೆ ಭೂಮಿ ಕೃಷಿ ಮಾಡದೆ ಖಾಲಿ ಬಿದ್ದಿದೆ. ಆದರೆ ಮತ್ತೆ ಈ ಭಾಗದಲ್ಲಿ ಕೃಷಿ ಮಾಡಲು ಉತ್ಸಾಹ ತೋರಿದ್ದು, ಹೊಸತೊಂದು ಕೃಷಿಕ್ರಾಂತಿಗೆ ಇಲ್ಲಿನ ಜನ ಸಿದ್ಧರಾಗಿದ್ದಾರೆ. ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಕೃಷಿಭೂಮಿ ಹಡಿಲು ಬೀಳಬಾರದು ಎಂಬ ಕಾಳಜಿಯಿಂದ ಇಲ್ಲಿನ ಶಾಸಕ ರಘುಪತಿ ಭಟ್ ಅವರೇ ಸತಃ ಈ ಕಾರ್ಯಕ್ಕೆ ಮುಂದಾಗಿದ್ದು, ಖಾಲಿಬಿಟ್ಟ ಕೃಷಿ ಭೂಮಿಯಲ್ಲಿ ಭತ್ತ ಬಿತ್ತನೆ ಮಾಡಲು ತಯಾರಿ ನಡೆಸಿದ್ದಾರೆ.

ಲಾಕ್​ಡೌನ್ ಸಂದರ್ಭದಲ್ಲಿ ಜನರು ಕೆಲಸ ಇಲ್ಲದೆ ಮನೆಯಲ್ಲಿ ಕುಳಿತಿದ್ದಾರೆ. ಮತ್ತೆ ಕೃಷಿಯತ್ತ ಮುಖ ಮಾಡಲು ಇದು ಸರಿಯಾದ ಸಮಯ. ಹಾಗಾಗಿಯೇ ತನ್ನ ವಿಧಾನಸಭಾ ಕ್ಷೇತ್ರದ ನಗರಸಭಾ ವ್ಯಾಪ್ತಿಯ 35 ವಾರ್ಡ್ ಮತ್ತು ನಗರ ಸಭೆಗೆ ಹೊಂದಿಕೊಂಡಿರುವ 19 ಗ್ರಾಮ ಪಂಚಾಯತಿಗಳಲ್ಲಿ ಹಡಿಲು ಭೂಮಿ ಕೃಷಿ ಸಾಗುವಳಿ ಚಳುವಳಿ ನಡೆಸಲು ಮುಂದಾಗಿದ್ದೇವೆ ಎಂದು ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.

ಈ ಮಳೆಗಾಲದಲ್ಲಿ ಎರಡು ಸಾವಿರ ಎಕರೆ ಕೃಷಿ ಭೂಮಿ ಮತ್ತೆ ಹಸಿರಾಗಿ ಕಂಗೊಳಿಸಲು ಸಿದ್ಧವಾಗುತ್ತಿದೆ. ಇದಕ್ಕಾಗಿ ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳು, ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಶಾಸಕ ಕೆ.ರಘುಪತಿ ಭಟ್ ಹಲವು ಸುತ್ತಿನ ಸಭೆ ನಡೆಸಿದ್ದಾರೆ.

ಈ ಮಳೆಗಾಲದಲ್ಲಿ ಅಂದಾಜು ಎರಡು ಸಾವಿರ ಎಕರೆಗೂ ಅಧಿಕ ಹಡಿಲು ಕೃಷಿ ಭೂಮಿಯಲ್ಲಿ ಭತ್ತದ ಭಿತ್ತನೆ ನಡೆಯಲಿದೆ. ಇದಕ್ಕಾಗಿ ಭೂ ಮಾಲಿಕರ ಮನವೊಲಿಸಲಾಗಿದೆ. ಜತೆಗೆ ಸ್ಥಳೀಯ ಯುವ ಸಂಘಟನೆಗಳ ಬೆಂಬಲ ಪಡೆಯಲಾಗಿದೆ. ಪ್ರತಿಯೊಬ್ಬ ಜನಪ್ರತಿನಿಧಿಗಳು ಹಡಿಲು ಕೃಷಿ ಭೂಮಿಗಳನ್ನು ಗುರುತಿಸಿ, ಸ್ಥಳೀಯರನ್ನು, ಕೃಷಿಯಲ್ಲಿ ಆಸಕ್ತಿ ಇರುವವರನ್ನು, ಸಮಾಜ ಸೇವಕರನ್ನು ಹಾಗೂ ಸಂಘ-ಸಂಸ್ಥೆಯವರನ್ನು ಒಟ್ಟುಗೂಡಿಸಿ ಕೃಷಿ ನಡೆಸುವ ಸವಾಲು ಹೊಂದಿದ್ದೇವೆ. ಸಾವಯವ ಪದ್ಧತಿಯಲ್ಲಿ ಹಡಿಲು ಭೂಮಿ ಕೃಷಿ ಸಾಗುವಳಿ ನಡೆಸಲು ಭೂಮಿ ಹದಗೊಳಿಸಿ ಭತ್ತ ಬಿತ್ತನೆಗೆ ಸಿದ್ಧತೆ ಮಾಡಲಾಗಿದೆ ಎಂದು ಶಾಸಕ ಕೆ.ರಘುಪತಿ ಭಟ್ ಹೇಳಿದ್ದಾರೆ.

ಉಡುಪಿಯ ಜನಪ್ರಿಯ ಶಿಕ್ಷಣ ಸಂಸ್ಥೆ ನಿಟ್ಟೂರು ಹೈಸ್ಕೂಲ್ ಈ ಯೋಜನೆಗೆ ಮಾದರಿಯಾಗಿದೆ. ಕಳೆದ ಮಳೆಗಾಲದಲ್ಲಿ ಕೊರೊನಾ ಸಂಬಂಧ ಲಾಕ್​ಡೌನ್ ಇದ್ದಾಗ, ಈ ಹೈಸ್ಕೂಲ್​ನ ಹಳೆ ವಿದ್ಯಾರ್ಥಿಗಳು ಸೇರಿ ಶಾಲಾ ಪರಿಸರದಲ್ಲಿ ಕೃಷಿ ನಡೆಸಿದ್ದರು. ಸುಮಾರು ಐವತ್ತು ಎಕರೆ ಖಾಲಿ ಕೃಷಿ ಭೂಮಿಯಲ್ಲಿ ಅಂದಾಜು 30 ಟನ್ ಭತ್ತ ಬೆಳೆದಿದ್ದರು. ಬಳಿಕ ತಮ್ಮದೇ ಶಾಲೆಯ ಹೆಸರಿನ ಬ್ರಾಂಡ್ ಕ್ರಿಯೇಟ್ ಮಾಡಿ, ನಿಟ್ಟೂರು ಸ್ವರ್ಣಾ ಕಜೆ ಅಕ್ಕಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದರು. ಸದ್ಯ ಕರಾವಳಿ ಭಾಗದಲ್ಲಿ ಈ ಕುಚ್ಚಿಗೆ ಅಕ್ಕಿ ಅತೀ ಹೆಚ್ಚಿನ ಬೇಡಿಕೆಯನ್ನು ಹೊಂದಿದೆ.

ಒಂದು ಶಾಲೆ ಈ ಕೆಲಸವನ್ನು ಮಾಡಬಹುದಾದರೆ, ಸರ್ಕಾರಿ ವ್ಯವಸ್ಥೆಗೆ ಯಾಕೆ ಸಾಧ್ಯವಾಗುವುದಿಲ್ಲ ಎಂಬ ವಿಚಾರವನ್ನು ಸವಾಲಾಗಿ ಸ್ವೀಕರಿಸಿದ ಶಾಸಕರು ತನ್ನ ಕ್ಷೇತ್ರದಲ್ಲಿ ಕೃಷಿಕ್ರಾಂತಿಗೆ ಸಜ್ಜಾಗಿದ್ದಾರೆ. ಲಾಕ್​ಡೌನ್ ಸಂಪೂರ್ಣ ಅವಧಿಯನ್ನು ಕೃಷಿ ಚಟುವಟಿಕೆಗಾಗಿ ಮೀಸಲಿರಿಸಿದ್ದಾರೆ. ಕೇದಾರೋತ್ಥಾನ ಟ್ರಸ್ಟ್​ನ ಹೆಸರಲ್ಲಿ ಎಲ್ಲರನ್ನೂ ಒಂದುಗೂಡಿಸಿ ಟ್ರಸ್ಟ್ ನಿಂದಲೇ ಹಣವನ್ನು ಭರಿಸಿ ಕೃಷಿ ಚಟುವಟಿಕೆ ಆರಂಭಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಉಡುಪಿ ಜಿ‌ ಜಗದೀಶ್ ತಿಳಿಸಿದ್ದಾರೆ.

ಒಂದು ವೇಳೆ ಈ ಹಡಿಲು ಭೂಮಿ ಸಾಗುವಳಿ ಯಶಸ್ವಿಯಾದರೆ, ರಾಜ್ಯಕ್ಕೆ ಮಾದರಿಯಾಗಲಿದೆ, ಕರಾವಳಿಯಲ್ಲಿ ಮತ್ತೆ ಕೃಷಿ ನಳನಳಿಸಲಿದೆ. ಪ್ರತ್ಯೇಕ ಬ್ರಾಂಡ್​ನ ಗುಣಮಟ್ಟದ ಅಕ್ಕಿ ಗ್ರಾಹಕರಿಗೆ ಲಭ್ಯವಾಗಲಿದೆ. ಕೃಷಿ ಸಂಸ್ಕೃತಿಯ ಜೊತೆಗೆ ಜನರು ಗ್ರೀನ್ ಕಾಲರ್ ಜಾಬ್​ಗೆ ಆಸಕ್ತಿವಹಿಸುವ ಸಾಧ್ಯತೆಯೂ ಇದೆ.

ಇದನ್ನೂ ಓದಿ:

ಕೃಷಿಕ್ರಾಂತಿಗೆ ಮುಂದಾದ ಉಡುಪಿ ಜಿಲ್ಲೆ; ಶಾಸಕರ ಮುಂದಾಳತ್ವದಲ್ಲಿ ನಡೆಯಲಿದೆ ಹಡಿಲು ಭೂಮಿ ಬಿತ್ತನೆ ಕಾರ್ಯ

ನಿಟ್ಟೂರು ಸ್ವರ್ಣ ಭತ್ತ: ಸುವರ್ಣ ಸಂಭ್ರಮದಲ್ಲಿದ್ದ ಪ್ರೌಢಶಾಲೆಯು ಮಾಡಿದ ಅನನ್ಯ ಸಾಧನೆ ಇದು..

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು