AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಹೆಸರು ಬದಲಾವಣೆ‌ ನೋಂದಣಿಗೆ ಮಾರ್ಗಸೂಚಿ ರೂಪಿಸಿ ಹೈಕೋರ್ಟ್ ಮಹತ್ವದ ಆದೇಶ

ಕರ್ನಾಟಕ ಹೈಕೋರ್ಟ್ ಮಕ್ಕಳ ಹೆಸರು ಬದಲಾವಣೆಗೆ ಹೊಸ ಮಾರ್ಗಸೂಚಿಗಳನ್ನು ರೂಪಿಸಿದೆ. ತಂದೆ-ತಾಯಿಗಳ ಪ್ರಮಾಣಪತ್ರದೊಂದಿಗೆ ಹೆಸರು ಬದಲಾವಣೆಗೆ ಅವಕಾಶ ನೀಡಲಾಗಿದೆ. ಹೊಸ ಹೆಸರಿನೊಂದಿಗೆ ಹಳೆಯ ಹೆಸರನ್ನೂ ದಾಖಲಿಸಬೇಕು ಎಂದು ಆದೇಶಿಸಲಾಗಿದೆ. ವಯಸ್ಕರ ಹೆಸರು ಬದಲಾವಣೆಗೂ ಈ ನಿಯಮಗಳು ಅನ್ವಯಿಸುತ್ತವೆ ಎಂದು ಹೈಕೋರ್ಟ್ ತಿಳಿಸಿದೆ.

ಮಕ್ಕಳ ಹೆಸರು ಬದಲಾವಣೆ‌ ನೋಂದಣಿಗೆ ಮಾರ್ಗಸೂಚಿ ರೂಪಿಸಿ ಹೈಕೋರ್ಟ್ ಮಹತ್ವದ ಆದೇಶ
ಮಕ್ಕಳ ಹೆಸರು ಬದಲಾವಣೆ‌ ನೋಂದಣಿಗೆ ಮಾರ್ಗಸೂಚಿ ರೂಪಿಸಿ ಹೈಕೋರ್ಟ್ ಮಹತ್ವದ ಆದೇಶ
Ramesha M
| Updated By: ಗಂಗಾಧರ​ ಬ. ಸಾಬೋಜಿ|

Updated on:Feb 14, 2025 | 9:32 PM

Share

ಬೆಂಗಳೂರು, ಫೆಬ್ರವರಿ 14: ಮಕ್ಕಳ ಹೆಸರು ಬದಲಾವಣೆಗೆ ಕಾನೂನಿನಲ್ಲಿ ಅವಕಾಶವಿಲ್ಲದ‌ ಹಿನ್ನೆಲೆ ಕರ್ನಾಟಕ ಹೈಕೋರ್ಟ್ (High Court) ಮಕ್ಕಳ ಹೆಸರು ಬದಲಾವಣೆಗೆ ಹೊಸ ಮಾರ್ಗಸೂಚಿಯನ್ನು ರೂಪಿಸಿದೆ. 1969ರ ಜನನ ಮತ್ತು ಮರಣ ನೋಂದಣಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಜನನ ನೋಂದಣಿಯಲ್ಲಿ ಹೆಸರು ಬದಲಾವಣೆಗೆ ಅವಕಾಶ ಕಲ್ಪಿಸುವಂತೆ ಹೈಕೋರ್ಟ್ ಶಾಸಕಾಂಗಕ್ಕೆ ಸೂಚಿಸಿದೆ. ನ್ಯಾ.ಎನ್.ಎಸ್.ಸಂಜಯ್ ಗೌಡ ಅವರಿದ್ದ ಹೈಕೋರ್ಟ್ ಪೀಠ ಶುಕ್ರವಾರ ಆದೇಶ ಹೊರಡಿಸಿದೆ.

ಅದ್ರಿತ್ ಭಟ್ ಹೆಸರನ್ನು ಶ್ರೀಜಿತ್ ಭಟ್ ಎಂದು ಬದಲಿಸಲು ಕೋರಲಾಗಿತ್ತು. ಆದರೆ ಉಡುಪಿ ಜನನ ನೋಂದಣಾಧಿಕಾರಿಗಳು ನಿರಾಕರಿಸಿದ ಹಿನ್ನೆಲೆ ರಿಟ್ ಸಲ್ಲಿಕೆ ಮಾಡಲಾಗಿತ್ತು. ಇಂದು ವಿಚಾರಣೆ ಮಾಡಿದ ಹೈಕೋರ್ಟ್, ಮಗುವಿನ ಹೆಸರು ಬದಲಾವಣೆಗೆ ತಂದೆ ತಾಯಿ ಪ್ರಮಾಣಪತ್ರ ಸಲ್ಲಿಸಬೇಕು. ತಂದೆ ತಾಯಿಯ ಗುರುತು ಧೃಡಪಟ್ಟ ನಂತರ ಹೆಸರು ಬದಲಾವಣೆ ಮಾಡಬಹುದಾಗಿದೆ. ಆದರೆ ಹೊಸ ಹೆಸರಿನೊಂದಿಗೆ, ಹಳೆಯ ಹೆಸರೂ ದಾಖಲೆಯಲ್ಲಿರಬೇಕು. ಇದರಿಂದ ದುರುದ್ದೇಶದ ಹೆಸರು ಬದಲಾವಣೆ ತಪ್ಪಿಸಬಹುದಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ಜಯಲಲಿತಾರ 11,344 ರೇಷ್ಮೆ ಸೀರೆ, 750 ಜೋಡಿ ಚಪ್ಪಲಿ ಸೇರಿದಂತೆ ಆಸ್ತಿ ಪತ್ರ ಹಸ್ತಾಂತರ ಪ್ರಕ್ರಿಯೆ ಆರಂಭ

ವಯಸ್ಕರ ಹೆಸರು ಬದಲಾವಣೆಗೂ ಇದೇ ಪದ್ಧತಿ ಅನುಸರಿಸಬಹುದು. ಸರ್ಕಾರ ಸೂಕ್ತ ನಿಯಮ ರೂಪಿಸುವವರೆಗೂ ಈ ನಿರ್ದೇಶನ ಪಾಲಿಸಬೇಕು ಎಂದು ಜನನ ನೋಂದಣಾಧಿಕಾರಿಗಳಿಗೆ ನ್ಯಾ.ಎನ್.ಎಸ್.ಸಂಜಯ್ ಗೌಡ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಜನಾಕ್ರೋಶ ಹಿನ್ನೆಲೆ ಪ್ರಯಾಣ ದರ ಸರಿಪಡಿಸಿದ ಮೆಟ್ರೋ: ಎಲ್ಲಿಂದ ಎಲ್ಲಿಗೆ ಎಷ್ಟು ಕಡಿಮೆಯಾಯ್ತು? ಇಲ್ಲಿದೆ ವಿವರ

ಓರ್ವ ವ್ಯಕ್ತಿಗೆ ಹೊಸ ಹೆಸರನ್ನು ನೀಡಲು ನಿರ್ಧರಿಸುವುದು ಅಥವಾ ಈಗಾಗಲೇ ಹೆಸರನ್ನು ನೀಡಿದ್ದರೂ ಹೆಸರನ್ನು ಬದಲಾಯಿಸಲು ನಿರ್ಧರಿಸುವುದು ನಮ್ಮ ದೇಶದಲ್ಲಿ ಸಾಮಾನ್ಯವಾಗಿ ಹೋಗಿದೆ. ವಾಸ್ತವವಾಗಿ, ನಮ್ಮ ದೇಶದಲ್ಲಿ ಒಬ್ಬರಿಗೆ ಅನೇಕ ಹೆಸರುಗಳನ್ನು ನೀಡುವುದು ಪರಿಪಾಠವಾಗಿದೆ. ಆದರೆ ದಾಖಲೆಗಳಲ್ಲಿ ಒಂದು ಹೆಸರನ್ನು ನಮೂದಿಸಲಾಗುತ್ತದೆ. ಇದು ಕೆಲವೊಮ್ಮೆ ವ್ಯಕ್ತಿಯನ್ನು ಗುರುತಿಸುವುದಕ್ಕೆ ಗೊಂದಲ ಉಂಟು ಮಾಡುತ್ತದೆ ಎಂದು ನ್ಯಾ.ಎನ್.ಎಸ್.ಸಂಜಯ್ ಗೌಡ ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:31 pm, Fri, 14 February 25

Daily horoscope: ಹಿಂಜರಿಕೆಯಿಂದ ನಿಮಗೆ ಒಳ್ಳೆಯದೇ ಆಗಲಿದೆ
Daily horoscope: ಹಿಂಜರಿಕೆಯಿಂದ ನಿಮಗೆ ಒಳ್ಳೆಯದೇ ಆಗಲಿದೆ
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ
ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ
2014ರಿಂದ ಕರ್ನಾಟಕ ರೈಲ್ವೆ ಬಜೆಟ್​ನಲ್ಲಿ 9 ಪಟ್ಟು ಹೆಚ್ಚಳ: ಅಶ್ವಿನಿ
2014ರಿಂದ ಕರ್ನಾಟಕ ರೈಲ್ವೆ ಬಜೆಟ್​ನಲ್ಲಿ 9 ಪಟ್ಟು ಹೆಚ್ಚಳ: ಅಶ್ವಿನಿ
ಹಳದಿ ಮಾರ್ಗಕ್ಕೆ ಚಾಲನೆ ನೀಡಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ವಿಡಿಯೋ ನೋಡಿ
ಹಳದಿ ಮಾರ್ಗಕ್ಕೆ ಚಾಲನೆ ನೀಡಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ವಿಡಿಯೋ ನೋಡಿ
ಈ ಭಾಗದ ಕನಸು ಸಾಕಾರಗೊಳಿಸಿದ ಮೋದಿ: ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ
ಈ ಭಾಗದ ಕನಸು ಸಾಕಾರಗೊಳಿಸಿದ ಮೋದಿ: ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ
ವಿಲ್ ಜ್ಯಾಕ್ಸ್ ಬಿರುಗಾಳಿ ಬ್ಯಾಟಿಂಗ್: 57 ಎಸೆತಗಳಲ್ಲಿ ಮುಗಿದ ಪಂದ್ಯ
ವಿಲ್ ಜ್ಯಾಕ್ಸ್ ಬಿರುಗಾಳಿ ಬ್ಯಾಟಿಂಗ್: 57 ಎಸೆತಗಳಲ್ಲಿ ಮುಗಿದ ಪಂದ್ಯ