ಪಾರದರ್ಶಕತೆಗೆ ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ: ಏನದು?

ಕರ್ನಾಟಕ ಸರ್ಕಾರವು ಅಬಕಾರಿ ಇಲಾಖೆಯಲ್ಲಿ ಪಾರದರ್ಶಕತೆ ಮತ್ತು ಸುಧಾರಣೆ ತರಲು ಹೊಸ ವರ್ಗಾವಣೆ ನೀತಿಯನ್ನು ಜಾರಿಗೆ ತಂದಿದೆ. ಈ ನೀತಿಯು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಪ್ರಕ್ರಿಯೆಯನ್ನು ಸರಳಗೊಳಿಸುತ್ತದೆ ಮತ್ತು ಒಬ್ಬ ಅಧಿಕಾರಿಯನ್ನು ಒಂದೇ ಹುದ್ದೆಯಲ್ಲಿ ದೀರ್ಘಕಾಲ ಇರಿಸುವುದನ್ನು ತಡೆಯುತ್ತದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ದೀರ್ಘಕಾಲ ಕಾರ್ಯನಿರ್ವಹಿಸಿದ ಅಧಿಕಾರಿಗಳನ್ನು ಇತರೆ ಜಿಲ್ಲೆಗಳಿಗೆ ವರ್ಗಾಯಿಸುವುದು ಈ ನೀತಿಯ ಪ್ರಮುಖ ಅಂಶವಾಗಿದೆ.

ಪಾರದರ್ಶಕತೆಗೆ ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ: ಏನದು?
ಪಾರದರ್ಶಕತೆಗೆ ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ: ಏನದು?
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on: Jan 17, 2025 | 3:43 PM

ಬೆಂಗಳೂರು, ಜನವರಿ 17: ಸುಧಾರಣೆ ಹಾಗೂ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಸರ್ಕಾರ ಅಬಕಾರಿ ಇಲಾಖೆಯ (Excise Department) ವರ್ಗಾವಣೆಗೆ ಹೊಸ ನಿಯಮಗಳನ್ನು ರೂಪಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ನಾಗರೀಕ ಸೇವೆಗಳು (ಅಬಕಾರಿ ಇಲಾಖೆಯ ವರ್ಗಾವಣೆ) ನಿಯಮಗಳು 2025 ಅನುಮೋದಿಸಲಾಗಿದೆ. ಆ ಮೂಲಕ ಪಾರದರ್ಶಕ ಮತ್ತು ನಿಯಮಾಧಾರಿತ ವರ್ಗಾವಣೆ ಪದ್ದತಿಯನ್ನು ಜಾರಿಗೊಳಿಸಲು ಮುಂದಾಗಿದೆ.

ಕೌನ್ಸಿಲಿಂಗ್ ಮೂಲಕ ವರ್ಗಾವಣೆ

ಅಬಕಾರಿ ಇಲಾಖೆಯಲ್ಲಿನ ಹುದ್ದೆಗಳನ್ನು ಕಾರ್ಯ ನಿರ್ವಾಹಕ ಮತ್ತು ಕಾರ್ಯನಿರ್ವಾಹಕೇತರ ಎಂದು ವಿಂಗಡಿಣೆ ಮಾಡಲಾಗಿದೆ. ಅಬಕಾರಿ ನಿರೀಕ್ಷಕರು, ಅಬಕಾರಿ ಉಪ ನಿರೀಕ್ಷಕರು, ಅಬಕಾರಿ‌ ಮುಖ್ಯ ಪೇದೆ ಮತ್ತು ಅಬಕಾರಿ ಪೇದೆಗಳ ವರ್ಗಾವಣೆಯನ್ನು ಕೌನ್ಸಿಲಿಂಗ್ ಮುಖಾಂತರ ಮಾಡಲು ನಿರ್ಧಾರ ಮಾಡಲಾಗಿದೆ.

ಇದನ್ನೂ ಓದಿ: ಭ್ರಷ್ಟಾಚಾರ ಆರೋಪ: ಸಿದ್ದರಾಮಯ್ಯ ಸಂಪುಟದ ಮತ್ತೋರ್ವ ಸಚಿವ ವಿರುದ್ಧ ರಾಜ್ಯಪಾಲರಿಗೆ ದೂರು

ಜೊತೆಗೆ ಒಬ್ಬ ಅಧಿಕಾರಿ ಅಥವಾ ಸಿಬ್ಬಂದಿಯನ್ನು ಸತತವಾಗಿ ಎರಡಕ್ಕಿಂತ ಹೆಚ್ಚು ಅವಧಿಗೆ ಕಾರ್ಯನಿರ್ವಾಹಕ ಹುದ್ದೆಗೆ ವರ್ಗಾಯಿಸುವಂತಿಲ್ಲ. ಅಬಕಾರಿ ಅಧಿಕಾರಿಗಳ ಕಡ್ಡಾಯ ವರ್ಗಾವಣೆಗೆ ಹೊಸ ನಿಯಮದಲ್ಲಿ ಪ್ರಸ್ತಾಪಿಸುವುದು.

ಕಳೆದ 05 ವರ್ಷಗಳಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿನ ಕಾರ್ಯನಿರ್ವಾಹಕ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಿದ ಅಬಕಾರಿ ಜಂಟಿ ಆಯುಕ್ತರು, ಉಪ ಆಯುಕ್ತರು, ಅಧೀಕ್ಷಕರು, ನಿರೀಕ್ಷಕರು ಮತ್ತು ಉಪ ನಿರೀಕ್ಷಕರುಗಳನ್ನು ಸದರಿ ಜಿಲ್ಲೆಗಳನ್ನು ಹೊರತುಪಡಿಸಿ ಇತರೆ ಜಿಲ್ಲೆಗಳಿಗೆ ವರ್ಗಾಯಿಸಲು ಹೊಸ ನಿಯಮದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಅಬಕಾರಿ ಅಧಿಕಾರಿಗಳ ಲಂಚಕ್ಕೆ ಬೇಸತ್ತ ಮಾಲೀಕರು, ರಾಜ್ಯಾದ್ಯಂತ ಈ ದಿನ ಮದ್ಯ ಮಾರಾಟ ಬಂದ್​ಗೆ ನಿರ್ಧಾರ

ಅಬಕಾರಿ ಇಲಾಖೆಯು ಸಮವಸ್ತ್ರಾಧಾರಿತ ಮತ್ತು ನಿಯಂತ್ರಕ ಇಲಾಖೆ ಆಗಿರುವುದರಿಂದ ಹೊಸ ವರ್ಗಾವಣೆ ನಿಯಮ ಜಾರಿ ಮತ್ತು ತನಿಖೆ ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ಅನುಕೂಲವಾಗಲಿದೆ. ಇಲಾಖೆಯಲ್ಲಿ ಪಾರದರ್ಶಕತೆ ವ್ಯವಸ್ಥೆ ಜಾರಿಯಾಗುವುದಿಂದ ಭ್ರಷ್ಟಾಚಾರಕ್ಕೆ ಆಸ್ಪದ ಸಿಗುವುದಿಲ್ಲ ಮತ್ತು ಸರ್ಕಾರಕ್ಕೆ ಆದಾಯ ಕೂಡ ಹೆಚ್ಚಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ
ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯನ್ನು ಪೂರ್ತಿಗೊಳಿಸಲ್ಲ: ವಿಜಯೇಂದ್ರ
ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯನ್ನು ಪೂರ್ತಿಗೊಳಿಸಲ್ಲ: ವಿಜಯೇಂದ್ರ