New Year 2025: ಹೊಸ ವರ್ಷ ಸಂಭ್ರಮಾಚರಣೆಗೆ ಕ್ಷಣಗಣನೆ; ರಾಜ್ಯಾದ್ಯಂತ ಹೇಗಿದೆ ಸಿದ್ಧತೆ?

ಈ ಬಾರಿ 2025ರ ವರ್ಷದ ಸ್ವಾಗತಕ್ಕೆ ಈಗಾಗಲೇ ಬೆಂಗಳೂರು ಸಜ್ಜಾಗಿದೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿದ್ದು, ಪಾರ್ಟಿ ನಂತರ ಮಹಿಳೆಯರನ್ನು ಮನೆಗೆ ತಲುಪಿಸಲು ಸುರಕ್ಷಾ ಕ್ಯಾಬ್ ಸರ್ವಿಸ್ ವ್ಯವಸ್ಥೆ ಮಾಡಲಾಗುವುದು. ಹೀಗಾಗಿ, ನ್ಯೂ ಇಯರ್ ಪಾರ್ಟಿ ಮಾಡಲು ಮಹಿಳೆಯರು ಸುರಕ್ಷತೆಯ ಬಗ್ಗೆ ಆತಂಕ ಪಡಬೇಕಾದ ಅಗತ್ಯವಿಲ್ಲ. ಬೆಂಗಳೂರು ಮಾತ್ರವಲ್ಲದೆ ಬೇರೆ ಜಿಲ್ಲೆಗಳಲ್ಲೂ ಹೊಸ ವರ್ಷಾಚರಣೆಯ ವೇಳೆ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರ ವಹಿಸಲಾಗಿದೆ.

New Year 2025: ಹೊಸ ವರ್ಷ ಸಂಭ್ರಮಾಚರಣೆಗೆ ಕ್ಷಣಗಣನೆ; ರಾಜ್ಯಾದ್ಯಂತ ಹೇಗಿದೆ ಸಿದ್ಧತೆ?
New Year Celebration
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 30, 2024 | 10:53 PM

ಬೆಂಗಳೂರು: ಹೊಸ ವರ್ಷ ಸಂಭ್ರಮಾಚರಣೆಗೆ ಕೌಂಟ್‌ಡೌನ್ ಶುರುವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೊಸ ವರ್ಷದ ಸ್ವಾಗತಕ್ಕೆ ಸಿದ್ಧತೆಗಳು ನಡೆದಿವೆ. ಬೆಂಗಳೂರಿನಲ್ಲಿ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಪಡೆ ಹದ್ದಿನ ಕಣ್ಣಿಟ್ಟಿದೆ. 2024ಕ್ಕೆ ಗುಡ್‌ಬೈ ಹೇಳಿ ಹೊಸ ವರ್ಷಕ್ಕೆ ವೆಲ್‌ಕಮ್ ಹೇಳಲು ಬೆಂಗಳೂರು ಜನ ಸಜ್ಜಾಗಿದ್ದಾರೆ. ಈಗಾಗಲೇ ಬೆಂಗಳೂರಲ್ಲಿ ನ್ಯೂ ಇಯರ್ ಜೋಶ್ ಎಲ್ಲೆಡೆ ಕಾಣುತ್ತಿದೆ. ಎಂ.ಜಿ ರೋಡ್, ಬ್ರಿಗೇಡ್‌ ರೋಡ್‌ನಲ್ಲಿ ಅಂತಿಮ ಹಂತದ ಸಿದ್ಧತೆ ಮುಗಿದಿದ್ದು, ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಮಹಿಳೆಯರಿಗೂ ನ್ಯೂ ಇಯರ್ ಸೆಲೆಬ್ರೇಷನ್‌ನಲ್ಲಿ ಭಾಗಿಯಾಗಬೇಕೆಂಬ ಆಸೆ ಇರುತ್ತದೆ. ಆದರೆ, ಈ ಹಿಂದೆ ನಡೆದಿರೋ ಅಹಿತಕರ ಘಟನೆಗಳಿಂದ ಮಹಿಳೆಯರಲ್ಲಿ ಸಹಜವಾಗಿಯೇ ಭಯ ಇರುತ್ತದೆ. ಆದರೆ, ಈ ಬಾರಿ ಮಹಿಳೆಯರು ನಿರಾಂತಕವಾಗಿ ನ್ಯೂ ಇಯರ್ ಸೆಲೆಬ್ರೇಷನ್‌ನಲ್ಲಿ ಭಾಗಿಯಾಗಬಹುದು. ಎಂ.ಜಿ ರೋಡ್‌, ಬ್ರಿಗೇಡ್‌ ರಸ್ತೆಯಲ್ಲಿ ಸಂಭ್ರಮಿಸಬಹುದು. ಯಾಕಂದರೆ, ಈ ಬಾರಿ ಮಹಿಳೆಯರ ಸುರಕ್ಷತೆಗೆ ವಿಶೇಷ ಆದ್ಯತೆ ನೀಡಲಾಗಿದೆ.

ಮಹಿಳೆಯರ ಸುರಕ್ಷತೆಗೆ ಆದ್ಯತೆ:

ಮಹಿಳೆಯರ ರಕ್ಷಣೆಗಾಗಿ ಪಬ್‌ಗಳಲ್ಲಿ ಲೇಡಿ ಬೌನ್ಸರ್ಸ್ ನಿಯೋಜನೆ ಮಾಡಲಾಗಿದೆ. ಮಹಿಳೆಯರು ಕುಣಿದು ಕುಪ್ಪಳಿಸಲು ಪ್ರತ್ಯೇಕ ಡ್ಯಾನ್ಸ್ ಫ್ಲೋರ್ ನಿರ್ಮಿಸಲಾಗಿದೆ. ಪತಿ-ಪತ್ನಿ, ಕಪಲ್ಸ್, ಲವರ್ಸ್‌ಗೆ ಪ್ರತ್ಯೇಕ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಲೇಡಿ ಬೌನ್ಸರ್ಸ್, ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗಿದ್ದು, ಪಾರ್ಟಿ ನಂತರ ಮಹಿಳೆಯರನ್ನು ಮನೆಗೆ ತಲುಪಿಸಲು ಆದ್ಯತೆ ನೀಡಲಾಗುವುದು. ಸುರಕ್ಷಾ ಕ್ಯಾಬ್ ಸರ್ವಿಸ್ ಮೂಲಕ ಮನೆಗೆ ಕಳುಹಿಸಲು ವ್ಯವಸ್ಥೆ ಮಾಡಲಾಗುವುದು.

ಇದನ್ನೂ ಓದಿ: ಹೊಸ ವರ್ಷಾಚರಣೆಗೆ ನಾಳೆ ಮುರುಡೇಶ್ವರ ಕಡಲ ತೀರ ಓಪನ್

ಈ ಬಾರಿ ಕೂಡ ಎಚ್ಚರಿಕೆಯಿಂದ ಹೊಸ ವರ್ಷಾಚರಣೆ ಮಾಡುವಂತೆ ಗೃಹ ಸಚಿವ ಪರಮೇಶ್ವರ್​ ಮನವಿ ಮಾಡಿದ್ದಾರೆ. ವರ್ಷಾಚರಣೆ ವೇಳೆ ಅನೇಕರು ಪ್ರಾಣ ಕಳೆದುಕೊಂಡಿದ್ದನ್ನ ನೋಡಿದ್ದೇವೆ. ಬೆಂಗಳೂರಿನಲ್ಲಿ ಸೆಲೆಬ್ರೇಷನ್​​ಗೆ 10 ಲಕ್ಷ ಜನ ಸೇರುವ ಸಾಧ್ಯತೆ ಇದೆ. ಹೀಗಾಗಿ ಎಚ್ಚರಿಕೆಯಿಂದ ಇರಬೇಕೆಂದು ಸಲಹೆ ಕೊಟ್ಟಿದ್ದಾರೆ.

ವರ್ಷಾಂತ್ಯದ ಹಿನ್ನೆಲೆಯಲ್ಲಿ ಅಂಗವಾಗಿ ಸ್ನೇಹಿತರು, ಫ್ಯಾಮಿಲಿ ಅಂತ ಎಲ್ರೂ ಪ್ರವಾಸಿ ತಾಣಗಳತ್ತ ತೆರಳ್ತಿದ್ದಾರೆ. ಹೀಗಾಗಿ, ಮುಳ್ಳಯ್ಯನಗಿರಿ, ಸೀತಾಳಯ್ಯನ ಗಿರಿ ಸೇರಿದಂತೆ ಪ್ರವಾಸಿ ತಾಣಗಳು ನಾಳೆ ಸಂಜೆ 6 ಗಂಟೆಯಿಂದ ಹೊಸ ವರ್ಷದ ಮೊದಲ ದಿನದ ಬೆಳಗ್ಗೆ 6 ಗಂಟೆ ತನಕ ಬಂದ್ ಆಗಲಿವೆ. ಹೋಮ್​ ಸ್ಟೇ, ರೆಸಾರ್ಟ್​​ಗಳಲ್ಲಿ ನಾಳೆ ರಾತ್ರಿ 10 ಗಂಟೆಗೆ ಡಿಜೆ, ಸ್ಪೀಕರ್​ ಬಂದ್ ಮಾಡಬೇಕು. ಅನುಮತಿ ಪಡೆಯದೇ ಪಾರ್ಟಿ ಮಾಡುವ ಹಾಗಿಲ್ಲ ಎಂದು ಚಿಕ್ಕಮಗಳೂರು ಎಸ್​​ಪಿ ಆದೇಶಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್​​ರೊಂದಿಗೆ ಕೈಜೋಡಿಸಿದ ಪಾಲಿಕೆ: ಏನೆಲ್ಲಾ ರೂಲ್ಸ್ ಗೊತ್ತಾ?

ಇದರ ಜೊತೆಗೆ ಮಂಡ್ಯದಲ್ಲೂ KRS ಹಿನ್ನೀರು, ಬಲಮುರಿ, ಎಡಮುರಿ, ಕಾವೇರಿ ನದಿ ತೀರಕ್ಕೆ ನಿರ್ಬಂಧ ವಿಧಿಸಲಾಗಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಜನವರಿ 1 ರಾತ್ರಿ 8ರ ತನಕ ಪ್ರವೇಶವಿಲ್ಲ. ಮಳವಳ್ಳಿ ತಾಲೂಕಿನ ಮುತ್ತತ್ತಿ ಕಾವೇರಿ ತೀರದಲ್ಲೂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಂದಿಬೆಟ್ಟಕ್ಕೆ ನಾಳೆ ಸಂಜೆ 6ರಿಂದ ಜನವರಿ 1ರ ಬೆಳಗ್ಗೆ 7ರವರೆಗೆ ನಿರ್ಬಂಧ ವಿಧಿಸಲಾಗಿದೆ. ನಾಳೆ ಸಂಜೆ 7 ಗಂಟೆ ನಂತರ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ ಹೇರಲಾಗಿದೆ. ಜನವರಿ 1ರಂದು ಎಂದಿನಂತೆ ಚಾಮುಂಡಿಬೆಟ್ಟಕ್ಕೆ ಹೋಗಲು ಅವಕಾಶ ನೀಡಲಾಗುವುದು.

ಇನ್ನು, ಕಾರವಾರದ ಮುರುಡೇಶ್ವರ ಕಡಲ ತೀರ 20 ದಿನದಿಂದ ಬಂದ್ ಆಗಿತ್ತು. ನಾಳೆಯಿಂದ ಕಡಲ ತೀರ ಓಪನ್ ಆಗಲಿದೆ ಅಂತ ಡಿಸಿ ತಿಳಿಸಿದ್ದಾರೆ. ವಿವಿಧ ಅಭಿವೃದ್ಧಿಗಳ ಕಾಮಗಾರಿ ಹಿನ್ನೆಲೆಯಲ್ಲಿ ಶಿವಮೊಗ್ಗದ ಜೋಗ ಜಲಪಾತ ವೀಕ್ಷಣೆಗೂ, ಜನವರಿ 1ರಿಂದ ಮಾರ್ಚ್​​ 15ರ ತನಕ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು. ಆದರೆ, ಈಗ, ಜಲಪಾತ ವೀಕ್ಷಣೆಗಿದ್ದ ನಿರ್ಬಂಧವನ್ನು ತೆರವು ಮಾಡಲಾಗಿದೆ. ಜೋಗ ನಿರ್ವಹಣಾ ಪ್ರಾಧಿಕಾರ ಪ್ರವೇಶದ್ವಾರ ಬಿಟ್ಟು ಉಳಿದೆಡೆಯಿಂದ ಜಲಪಾತದ​ ವೀಕ್ಷಣೆಗೆ ಅವಕಾಶ ನೀಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ
ಹುಲಿ ಹಿಂಸ್ರಪಶುವಾದರೂ ತನ್ನ ಮರಿಗಳ ವಿಷಯದಲ್ಲಿ ಮಮತಾಮಯಿ
ಹುಲಿ ಹಿಂಸ್ರಪಶುವಾದರೂ ತನ್ನ ಮರಿಗಳ ವಿಷಯದಲ್ಲಿ ಮಮತಾಮಯಿ
ಐಶ್ವರ್ಯಾಗೆ ಲೈನ್ ಹೊಡೀತಿದ್ರಾ ಧನರಾಜ್? ಪತ್ನಿಗೆ ಮೂಡಿದೆ ಅನುಮಾನ
ಐಶ್ವರ್ಯಾಗೆ ಲೈನ್ ಹೊಡೀತಿದ್ರಾ ಧನರಾಜ್? ಪತ್ನಿಗೆ ಮೂಡಿದೆ ಅನುಮಾನ