AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಸಂಜೆಯಿಂದ ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ; ಈ ಪ್ರವಾಸಿ ತಾಣಗಳಿಗೂ ನಿಷೇಧ

ಹೊಸ ವರ್ಷದ ಸಂಭ್ರಮಾಚರಣೆಗೆ ಚಿಕ್ಕಬಳ್ಳಾಪುರದ ನಂದಿ ಬೆಟ್ಟ ಬಂದ್ ಆಗಲಿದೆ. ಬೆಂಗಳೂರಿನ ಬಳಿಯ ವಿಶ್ವವಿಖ್ಯಾತ ನಂದಿಗಿರಿಧಾಮ ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಿಗ್ಗೆ 7 ಗಂಟೆಯವರೆಗೆ ಬಂದ್ ಆಗಲಿದೆ. ಹಾಗೇ, ಮಂಡ್ಯ, ಬೆಂಗಳೂರು, ಚಿಕ್ಕಮಗಳೂರಿನಲ್ಲಿ ಕೂಡ ಕೆಲವು ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಆ ಕುರಿತು ಮಾಹಿತಿ ಇಲ್ಲಿದೆ.

ನಾಳೆ ಸಂಜೆಯಿಂದ ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ; ಈ ಪ್ರವಾಸಿ ತಾಣಗಳಿಗೂ ನಿಷೇಧ
Nandi Hills
TV9 Web
| Edited By: |

Updated on: Dec 30, 2024 | 7:05 PM

Share

ಚಿಕ್ಕಬಳ್ಳಾಪುರ: ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ಬೆಂಗಳೂರು ಸಮೀಪದಲ್ಲಿರುವ ಪ್ರವಾಸಿ ತಾಣವಾದ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ನಾಳೆ (ಡಿಸೆಂಬರ್ 31) ಸಂಜೆ 6ರಿಂದ ನಾಡಿದ್ದು (ಜನವರಿ 1) ಬೆಳಗ್ಗೆ 7ರವರೆಗೆ ನಿರ್ಬಂಧ ವಿಧಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಆದೇಶ ಹೊರಡಿಸಿದ್ದಾರೆ. ಚಿಕ್ಕಬಳ್ಳಾಪುರದ ಬಳಿ ಇರುವ ನಂದಿ ಗಿರಿಧಾಮ ಬಂದ್ ಆಗಲಿದೆ. ಹಾಗೇ, ನಂದಿಬೆಟ್ಟದ ಮೇಲಿನ ಗೆಸ್ಟ್​​ಹೌಸ್​​ ಬುಕ್ಕಿಂಗ್ ಅನ್ನು ಸಹ ರದ್ದುಗೊಳಿಸಲಾಗಿದೆ.

ವಿಶ್ವವಿಖ್ಯಾತ ನಂದಿ ಗಿರಿಧಾಮದಲ್ಲಿ ನ್ಯೂಇಯರ್ ಸೆಲೆಬ್ರೇಷನ್‌ಗೆ ನಿರ್ಬಂಧ ಹೇರಲಾಗಿದೆ. ನಂದಿ ಬೆಟ್ಟದ ಸುತ್ತ 150ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸುತ್ತೇವೆ ಎಂದು ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸಿ ಹೇಳಿಕೆ ನೀಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾಡಳಿತ ನಂದಿಗಿರಿಧಾಮ ಪ್ರವೇಶಕ್ಕೆ ಪ್ರವಾಸಿಗರ ನಿಷೇಧ ಹೇರಿದೆ. ಹೊಸ ವರ್ಷದಂದು ರಾತ್ರಿ ಸಮಯದಲ್ಲಿ ಸಂಭ್ರಮಾಚರಣೆಗೆ ನಿರ್ಬಂಧ ವಿಧಿಸಿದೆ. ಪೊಲೀಸ್ ಇಲಾಖೆಯಿಂದ‌ ಹೋಟೆಲ್ ರೆಸಾರ್ಟ್ ಮಾಲೀಕರ ಜೊತೆ ಸಭೆ ಮಾಡಲಾಗಿದೆ. ಹೋಂ ಸ್ಟೇ ರೆಸಾರ್ಟ್​ಗಳಲ್ಲಿ ನಿಗದಿತ ಜನ ಮಾತ್ರ ಇರಬೇಕು. ಹೆಚ್ಚು ಜನ ಸೇರಿಕೊಂಡು ಪಾರ್ಟಿ ಮಾಡುವಂತಿಲ್ಲ, ಡಿಜೆ ಬ್ಯಾನ್ ಮಾಡಲಾಗಿದೆ. ಧ್ವನಿವರ್ಧಕಗಳನ್ನು 10 ಗಂಟೆಯವರೆಗೂ ಮಾತ್ರ ಬಳಸಬೇಕು. ಬೈಕ್ ವ್ಹಿಲಿಂಗ್ ಹಾಗೂ ರ್ಯಾಷ್ ಡ್ರೈವಿಂಗ್ ಮಾಡುವವರ ಮೇಲೂ ಹದ್ದಿನ ಕಣ್ಣು ಇಡಲಾಗುವುದು. ಹೊಸ ವರ್ಷದಂದು ಟ್ರಾಫಿಕ್ ನಿಯಂತ್ರಣಕ್ಕೆ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: ಹೊಸ ವರ್ಷಾಚರಣೆಗೆ ನಾಳೆ ಮುರುಡೇಶ್ವರ ಕಡಲ ತೀರ ಓಪನ್

ಬೆಂಗಳೂರಲ್ಲಿ ಯಾವೆಲ್ಲ ನಿರ್ಬಂಧ?:

ಈ ಬಾರಿ ಬೆಂಗಳೂರಿನಲ್ಲಿ ಸುಮಾರು 10 ಲಕ್ಷ ಜನರು ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಭಾಗವಹಿಸೋ ನಿರೀಕ್ಷೆ ಇದೆ. ಕಾವೇರಿ ನದಿ ತೀರ, ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ. ಬೆಂಗಳೂರಿನಲ್ಲಿ ನಾಳೆ ರಾತ್ರಿ 1 ಗಂಟೆವರೆಗೂ ಪಬ್‌, ಬಾರ್ ಓಪನ್‌ಗೆ ಅವಕಾಶ ನೀಡಲಾಗಿದೆ.

ಮಂಡ್ಯದಲ್ಲಿ ಹೊಸ ವರ್ಷಾಚರಣೆ:

ಮಂಡ್ಯದಲ್ಲಿ ಹೊಸ ವರ್ಷಾಚರಣೆ ಹಿನ್ನೆಲೆ ಕಾವೇರಿ ನದಿ ತೀರಕ್ಕೆ ನಿರ್ಬಂಧ ಹೇರಲಾಗಿದೆ. KRS ಹಿನ್ನೀರು, ಬಲಮುರಿ, ಎಡಮುರಿ, ಮುತ್ತತ್ತಿ ಸೇರಿದಂತೆ ನದಿ ತೀರದ ಸ್ಥಳಗಳಿಗೆ ನಾಳೆ ಬೆಳಗ್ಗೆ 6 ಗಂಟೆಯಿಂದ ಜನವರಿ 1ರ ರಾತ್ರಿ 8ರವರೆಗೆ ಜನರ ಪ್ರವೇಶ ನಿಷೇಧ ಹೇರಲಾಗಿದೆ. ಕಾವೇರಿ ತೀರದಲ್ಲಿ ಮೋಜು-ಮಸ್ತಿಗೆ ಹೋದ್ರೆ ಕ್ರಮ ಕೈಗೊಳ್ಳಲಾಗುವುದು ಎಂದು ಮಂಡ್ಯ ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್​​ರೊಂದಿಗೆ ಕೈಜೋಡಿಸಿದ ಪಾಲಿಕೆ: ಏನೆಲ್ಲಾ ರೂಲ್ಸ್ ಗೊತ್ತಾ?

ಚಿಕ್ಕಮಗಳೂರಿನಲ್ಲೂ ನಿರ್ಬಂಧ:

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೇರಿದಂತೆ ಪ್ರಮುಖ ಪ್ರವಾಸಿತಾಣಗಳಿಗೆ ನಿರ್ಬಂಧ ಹೇರಲಾಗಿದೆ. ನಾಳೆ ಸಂಜೆ 6 ಗಂಟೆಯಿಂದ ಜ.1ರ ಬೆಳಗ್ಗೆ 6ರವರೆಗೆ ನಿರ್ಬಂಧ ಹೇರಿ ಎಸ್​ಪಿ ಸೂಚನೆ ನೀಡಿದ್ದಾರೆ. ರೇವ್ ಪಾರ್ಟಿ, ಡ್ರಗ್ಸ್ ಪಾರ್ಟಿ ಮಾಡಬಾರದು, ರಾತ್ರಿ ವೇಳೆ ಸೌಂಡ್‌ ಸಿಸ್ಟಮ್ ಹಾಕುವಂತಿಲ್ಲ ಕುಡಿದು ವಾಹನ ಚಾಲನೆ ಮಾಡಿದರೆ ಕೇಸ್ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ