AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಾಚರಣೆ: ದೇವಸ್ಥಾನಗಳಿಗೆ ಹರಿದು ಬಂದ ಭಕ್ತರ ದಂಡು, ಧರ್ಮಸ್ಥಳದಲ್ಲಿ ಭಕ್ತ ಸಾಗರ

ಹೊಸ ವರ್ಷಾಚರಣೆಯ ಪ್ರಯುಕ್ತ ಕರಾವಳಿ ಕರ್ನಾಟಕದ ಪ್ರಸಿದ್ಧ ದೇವಸ್ಥಾನಗಳಾದ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನ, ಕದ್ರಿ ಮಂಜುನಾಥ ದೇಗುಲಗಳಲ್ಲಿ ಭಕ್ತ ಸಾಗರವೇ ನೆರೆದಿದೆ. ಮತ್ತೊಂದೆಡೆ ಬೆಂಗಳೂರು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಸೇರಿದ್ದು, ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

ಹೊಸ ವರ್ಷಾಚರಣೆ: ದೇವಸ್ಥಾನಗಳಿಗೆ ಹರಿದು ಬಂದ ಭಕ್ತರ ದಂಡು, ಧರ್ಮಸ್ಥಳದಲ್ಲಿ ಭಕ್ತ ಸಾಗರ
ಧರ್ಮಸ್ಥಳದಲ್ಲಿ ಭಕ್ತ ಸಾಗರ
ಅಶೋಕ್​ ಪೂಜಾರಿ
| Edited By: |

Updated on: Jan 01, 2025 | 9:55 AM

Share

ಮಂಗಳೂರು, ಜನವರಿ 1: ಹೊಸ ವರ್ಷಾರಂಭ ಸಂದರ್ಭದಲ್ಲಿ ಕರ್ನಾಟಕ ಕರಾವಳಿಯ ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದು ಬಂದಿದೆ. ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನ ಹಾಗೂ ಧರ್ಮಸ್ಥಳ ಮಂಜುನಾಥೇಶ್ವರ ದೇಗುಲಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಭಕ್ತರು ದೇಗುಲಗಳಿಗೆ ಆಗಮಿಸಿ ದೇವರ ದರ್ಶನ ಪಡೆದು ಹೊಸ ವರ್ಷದ ದಿನಾರಂಭ ಮಾಡುತ್ತಿದ್ದಾರೆ.

ಕದ್ರಿ ಮಂಜುನಾಥ ದೇಗುಲಕ್ಕೆ ಬೆಳಗ್ಗಿನಿಂದಲೂ ನೂರಾರು ಭಕ್ತರು ಆಗಮಿಸುತ್ತಿದ್ದಾರೆ. ದೇವಳದ ಕೆರೆಯಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿದ್ದಾರೆ. ದೇವಳದ ಮುಂದೆ ಕಲಶ ಸ್ನಾನ ಮಾಡುತ್ತಿದ್ದಾರೆ. ಕದ್ರಿ ದೇವಳದಲ್ಲಿ ಕಲಶ ಸ್ನಾನ ಸೇವೆ ಸಾಕಷ್ಟು ಪ್ರಸಿದ್ಧಿ ಪಡೆದಿದೆ.

ಧರ್ಮಸ್ಥಳದಲ್ಲಿ ಭಕ್ತ ಸಾಗರ

ಹೊಸ ವರ್ಷಾರಂಭದ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಭಕ್ತ ಸಾಗರವೇ ನೆರೆದಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರ ದಂಡು ಮಂಜುನಾಥ ಸ್ವಾಮಿಯ ದರ್ಶನಕ್ಕೆ ಮುಗಿಬಿದ್ದಿದೆ. ಬೆಂಗಳೂರು ಹಾಗೂ ಉತ್ತರ ಕರ್ನಾಟಕ ಭಾಗದಿಂದ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಸದ್ಯ ದೇವಸ್ಥಾನದ ಕ್ಯೂ ಸೆಂಟರ್​ನಲ್ಲಿ ಭಾರೀ ಜನಜಂಗುಳಿ ಏರ್ಪಟ್ಟಿದೆ.

ದೇವಸ್ಥಾನದ ಮುಂಭಾಗದಲ್ಲಿಯೂ ಭಾರೀ ಸಂಖ್ಯೆಯಲ್ಲಿ ಭಕ್ತ ಸಮೂಹ ಸೇರಿದ್ದು, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ.

ಕರಾವಳಿಯ ದೇವಸ್ಥಾನಗಳು ಮಾತ್ರವಲ್ಲದೆ ಮೈಸೂರು, ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಪ್ರದೇಶಗಳ ದೇಗುಲಗಳಲ್ಲಿ ಬೆಳಗ್ಗೆ ಭಕ್ತ ಸಮೂಹ ದೇವರ ದರ್ಶನಕ್ಕೆ ಆಗಮಿಸಿದೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಕೂಡ ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆ ಮಾದಪ್ಪನಿಗೆ ಸಹಸ್ರಾರು ಭಕ್ತರಿಂದ ಪೂಜೆ ಸಲ್ಲಿಕೆಯಾಗಿದೆ. ಮಲೆ ಮಹದೇಶ್ವರನಿಗೆ ಸಾವಿರಾರು ಭಕ್ತರು ಚಿನ್ನದ ರಥ, ಬೆಳ್ಳಿ ರಥ, ಬಸವ ವಾಹನ, ರುದ್ರಾಕ್ಷಿ ಮಂಟಪ ಮತ್ತಿತರ ಸೇವೆ ಸಲ್ಲಿಸುತ್ತಿದ್ದಾರೆ. ಮಂಗಳವಾರದಿಂದಲೇ ಅಪಾರ ಸಂಖ್ಯೆಯ ಭಕ್ತರು ಬೆಟ್ಟದಲ್ಲಿ ಬೀಡುಬಿಟ್ಟಿದ್ದಾರೆ.

ಇದನ್ನೂ ಓದಿ: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು

ಹೊಸ ವರ್ಷದ ಸಂಭ್ರಮಾಚರಣೆ ಹಿನ್ನಲೆ ಚಿಕ್ಕಬಳ್ಳಾಪುರದ ನಂದಿಯ ಇತಿಹಾಸ ಪ್ರಸಿದ್ಧ ಶ್ರೀ ಭೋಗನಂದೀಶ್ವರ ಸ್ವಾಮಿ ದೇವಸ್ಥಾನಕ್ಕೆ ನೂರಾರು ಭಕ್ತರು ಆಗಮಿಸಿದ್ದಾರೆ. ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ. ಹೊಸ ವರ್ಷಾಚರಣೆ ಹಿನ್ನಲೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಪುನಸ್ಕಾರ ನೆರವೇರುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಶೋಕ್​ ಪೂಜಾರಿ
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ