ಕಳಚಿದ ಬಾಳಕೊಂಡಿ: ಹುಟ್ಟಿದ ಕೆಲವೇ ಗಂಟೆಗಳಲ್ಲಿ‌ ಮಗುವನ್ನ ನಿರ್ಜನ ಪ್ರದೇಶದಲ್ಲಿ ಬಿಟ್ಟು ಹೋದ ತಾಯಿ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 15, 2021 | 8:14 PM

ನಿರ್ಜನ ಪ್ರದೇಶದಲ್ಲಿ ಬಿಸಾಡಿ ಹೋಗಿದ್ದ ನವಜಾತ ಶಿಶುವೊಂದನ್ನು ತಲಘಟ್ಟಪುರ ಪೊಲೀಸರು ರಕ್ಷಣೆ ಮಾಡಿದ್ದಾರೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿದ ಪೊಲೀಸರು ಶಿಶುವನ್ನು ರಕ್ಷಣೆ ಮಾಡಿದ್ದಾರೆ.

ಕಳಚಿದ ಬಾಳಕೊಂಡಿ: ಹುಟ್ಟಿದ ಕೆಲವೇ ಗಂಟೆಗಳಲ್ಲಿ‌ ಮಗುವನ್ನ ನಿರ್ಜನ ಪ್ರದೇಶದಲ್ಲಿ ಬಿಟ್ಟು ಹೋದ ತಾಯಿ
ಗಂಡು ಮಗುವನ್ನ ರಕ್ಷಣೆ ಮಾಡಿದ ಪೊಲೀಸರು
Follow us on

ಬೆಂಗಳೂರು: ನಿರ್ಜನ ಪ್ರದೇಶದಲ್ಲಿ ಬಿಟ್ಟು ಹೋಗಿದ್ದ ನವಜಾತ ಶಿಶುವೊಂದನ್ನು ತಲಘಟ್ಟಪುರ ಪೊಲೀಸರು ರಕ್ಷಣೆ ಮಾಡಿದ್ದಾರೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿದ ಪೊಲೀಸರು ಶಿಶುವನ್ನು ರಕ್ಷಣೆ ಮಾಡಿದ್ದಾರೆ.

ಹುಟ್ಟಿದ ಕೆಲವೇ ಗಂಟೆಗಳಲ್ಲಿ‌ ಗಂಡು ಮಗುವನ್ನ ನಿರ್ಜನ ಪ್ರದೇಶದಲ್ಲಿ ಇರಿಸಲಾಗಿತ್ತು. ನವಜಾತ ಶಿಶುವಿನ ಅಳುವಿನ ಶಬ್ದ ಕೇಳಿಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಕೂಡಲೇ ಸ್ಥಳಕ್ಕೆ ಬಂದ ಖಾಕಿ ಪಡೆ ಶಿಶುವನ್ನು ರಕ್ಷಿಸಿದ್ದಾರೆ. ತಲಘಟ್ಟಪುರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

‘ಯಡಿಯೂರಪ್ಪ CDಗೆ ಹೆದರುವವರಲ್ಲ.. ಆದರೆ ಈ ಬಾರಿ ಅಂಜಿದಂತೆ, ಅಳುಕಿದಂತೆ ಕಾಣುತ್ತಿದ್ದಾರೆ’

Published On - 6:03 pm, Fri, 15 January 21