AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಗಲಭೆಗೆ ಎಸ್ಪಿ ತಲೆದಂಡ: ಅಧಿಕಾರ ಸ್ವೀಕರಿಸಿದ ಒಂದೇ ದಿನಕ್ಕೆ ಪವನ್ ನೆಜ್ಜೂರು ಸಸ್ಪೆಂಡ್!

ಹಿಂದೊಮ್ಮೆ ಗಣಿ ದೂಳಿನಿಂದಲೇ ಸುದ್ದಿಯಾಗಿದ್ದ ಬಳ್ಳಾರಿ ರಕ್ತ ರಾಜಕೀಯಕ್ಕೆ ಸಾಕ್ಷಿಯಾಗಿದೆ. ಬರೀ ಟ್ವೆಂಟಿ ಬೈ ಟ್ವೆಂಟಿ ಬ್ಯಾನರ್, ಇಡೀ ಜಿಲ್ಲೆಯಲ್ಲಿ ಸಂಘರ್ಷವನ್ನೇ ಸೃಷ್ಟಿಸಿದೆ. ಕಲ್ಲು ತೂರಾಟ, ಖಾರದು ಪುಡಿ ಎರೆಚಾಟ, ದೊಣ್ಣೆಯಿಂದ ಬಡಿದಾಟ ಇಷ್ಟೆ ಯಾಕೆ ಕಣ್ರಿ.. ಗಾಳಿಯಲ್ಲಿ 12ಕ್ಕೂ ಹೆಚ್ಚು ಸುತ್ತು ಫೈರಿಂಗ್ ಮಾಡಲಾಗಿದ್ದು, ಒಂದು ಬಲೆಟ್ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎನ್ನುವರ ದೇಹ ಹೊಕ್ಕಿದೆ. ಇನ್ನೊಂದೆಡೆ ಅಧಿಕಾರ ಸ್ವೀಕರಿಸಿದ್ದ ಒಂದೇ ದಿನದಲ್ಲಿ ಬಳ್ಳಾರಿ ಎಸ್ಪಿ ತಲೆದಂಡವಾಗಿದೆ.

ಬಳ್ಳಾರಿ ಗಲಭೆಗೆ ಎಸ್ಪಿ ತಲೆದಂಡ: ಅಧಿಕಾರ ಸ್ವೀಕರಿಸಿದ ಒಂದೇ ದಿನಕ್ಕೆ ಪವನ್ ನೆಜ್ಜೂರು ಸಸ್ಪೆಂಡ್!
ಪವನ್ ನೆಜ್ಜೂರು, ಶೋಭಾ ರಾಣಿ
ರಮೇಶ್ ಬಿ. ಜವಳಗೇರಾ
|

Updated on: Jan 02, 2026 | 8:33 PM

Share

ಬಳ್ಳಾರಿ, (ಜನವರಿ 02): ಹೊಸ ವರ್ಷ ದಿನದ ರಾತ್ರಿ ಬಳ್ಳಾರಿಯಲ್ಲಿ (Bellary) ನಡೆದ ಫೈರಿಂಗ್​ನಲ್ಲಿ ಕಾಂಗ್ರೆಸ್​ ಕಾರ್ಯಕರ್ತ ರಾಜಶೇಖರ್ ಬಲಿ ಆಗಿದ್ದಾನೆ. ಕಾಂಗ್ರೆಸ್​ ಶಾಸಕ ಭರತ್ ರೆಡ್ಡಿ ಹಾಗೂ ಗಾಲಿ ಜನಾರ್ದನ ರೆಡ್ಡಿ ಬೆಂಬಲಿಗರ ನಡುವೆ ಬರೀ ಟ್ವೆಂಟಿ ಬೈ ಟ್ವೆಂಟಿ ಬ್ಯಾನರ್, ಇಡೀ ಜಿಲ್ಲೆಯಲ್ಲಿ ಸಂಘರ್ಷವನ್ನೇ ಸೃಷ್ಟಿಸಿದೆ. ಕಲ್ಲು ತೂರಾಟ, ಖಾರದು ಪುಡಿ ಎರೆಚಾಟ, ಬಡಿದಾಟ ನಡೆದಿದೆ. ಸಾಲದಕ್ಕೆ ಫೈರಿಂಗ್ ಸಹ ಮಾಡಲಾಗಿದೆ. ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದನ್ನು ರಾಜ್ಯ ಸರ್ಕಾರವೂ ಸಹ ಗಂಭೀರವಾಗಿ ಪರಿಗಣಿಸಿದೆ. ಇದರಿಂದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರು ಅವರನ್ನ ಅಮಾನತು ಮಾಡಲಾಗಿದೆ. ರಾಜಕೀಯ ಕಿತ್ತಾಟದಿಂದ ಬಳ್ಳಾರಿ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ ಒಂದೇ ದಿನದಲ್ಲಿ ಪವನ್ ನೆಜ್ಜೂರು ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ಪರಿಸ್ಥಿತಿ ನಿಭಾಯಿಸುವಲ್ಲಿ ಪೊಲೀಸರು ವಿಫಲವಾಗಿದ್ದಾರೆ. ಘಟನೆಯನ್ನ ಸರಿಯಾಗಿ ನಿಭಾಯಿಸಿಲ್ಲ. ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿಲ್ಲ ಎಂದು ಡಿಜಿ & ಐಜಿಪಿ ವರದಿ ನೀಡಿದೆ. ಹೀಗಾಗಿ ಪವನ್ ನೆಜ್ಜೂರು ಅವರನ್ನು ಅಮಾನತು ಮಾಡುವಂತೆ ಬಳ್ಳಾರಿ ಡಿಐಜಿ ವರ್ತಿಕಾ ಕಟಿಯಾರ ಅವರು ಸರ್ಕಾರಕ್ಕೆ ವರದಿ ನೀಡಿದ್ದಾರೆ. ಇದರ ಬೆನ್ನಲ್ಲೇ ಸರ್ಕಾರ ಈ ಕ್ರಮಕೈಗೊಂಡಿದೆ. ನಿನ್ನೆ(ಜ.1) ರಂದು ಬಳ್ಳಾರಿ ಎಸ್‌ಪಿಯಾಗಿ ಪವನ್ ನೆಜ್ಜೂರ್ (Pavan Nejjuru) ಶೋಭಾರಾಣಿ ಅವರಿಂದ ಅಧಿಕಾರ ಸ್ವೀಕರಿಸಿದ್ದರು. ಈಗ ಈಗ ಬ್ಯಾನರ್‌ ಗಲಾಟೆ ಪ್ರಕರಣವನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂಬ ಕಾರಣ ನೀಡಿ ಅಮಾನತು ಮಾಡಲಾಗಿದೆ.

ಇದನ್ನೂ ನೋಡಿ: ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?

ಒಂದೇ ದಿನದಲ್ಲಿ ಸಸ್ಪೆಂಡ್!

ವಾಲ್ಮೀಕಿ ಪುತ್ತಳಿ ಅನಾವರಣ ನಿಮಿತ್ತ ಬಳ್ಳಾರಿಯಲ್ಲಿ ಬ್ಯಾನರ್ ಹಾಕುವ ಸಂಬಂಧ ಶಾಸಕ ಭರತ್ ರೆಡ್ಡಿ ಹಾಗೂ ಗಾಲಿ ಜನಾರ್ದನ ರೆಡ್ಡಿ ಬೆಂಬಲಿಗರ ನಡುವೆ ಗಲಾಟೆಯಾಗಿದ್ದು, ಪೊಲೀಸರು ಅಶ್ರುವಾಯು ಮೂಲಕ ಗಲಾಟೆಯನ್ನು ಹತೋಟಿಗೆ ತಂದಿದ್ದಾರೆ. ಆದರೂ ದೊಡ್ಡ ಮಟ್ಟದ ಗಲಾಟೆಯಾಗಿದ್ದು, ಒಂದು ಹೆಣ ಬಿದ್ದಿದೆ. ಇದರಿಂದ ಬಳ್ಳಾರಿ ಡಿಐಜಿ ವರ್ತಿಕಾ ಕಟಿಯಾರ ಅವರು ಸರ್ಕಾರಕ್ಕೆ ಅಮಾನತ್ತುಗೊಳಿಸುವಂತೆ ವರದಿ ನೀಡಿದ್ದಾರೆ. ಇದರ ಬೆನ್ನಲ್ಲೇ ಸರ್ಕಾರ, ಬಳ್ಳಾರಿ ಎಸ್ಪಿ ಎಸ್ಪಿ ಪವನ್ ನೆಜ್ಜೂರು ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ. ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್ಪಿ ಆಗಿದ್ದ ಪವನ್ ನೆಜ್ಜೂರು ಅವರನ್ನು ಸರ್ಕಾರ ಬಳ್ಳಾರಿ ಎಸ್ಪಿಯಾಗಿ ವರ್ಗಾವಣೆ ಮಾಡಿತ್ತು. ಅದರಂತೆ ನಿನ್ನೆ ಅಷ್ಟೇ ಪವನ್ ನೆಜ್ಜೂರು ಅವರು ಅಧಿಕಾರ ವಹಿಸಿಕೊಂಡಿದ್ದರು. ಆದ್ರೆ, ದುರದೃಷ್ಟವಶಾತ್ ಅಂದೇ ಈ ಗಲಭೆ ನಡೆದಿದ್ದು, ಒಂದೇ ದಿನದಲ್ಲಿ ಪವನ್ ನೆಜ್ಜೂರು ಸಸ್ಪೆಂಡ್ ಆಗಿದ್ದಾರೆ.

ಸತ್ಯಶೋಧನೆಗೆ ನಿಯೋಗ ರಚನೆ

ಬಳ್ಳಾರಿ ಗಲಭೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಬಗ್ಗೆ ಸಚಿವ ಸಂಪುಟದಲ್ಲೂ ಸಹ ಚರ್ಚೆಯಾಗಿದೆ. ಇದೀಗ ಸರ್ಕಾರ, ಪರಿಸ್ಥಿತಿ ಅವಲೋಕಿಸಲು ನಿಯೋಗ ಕಳುಹಿಸಲು ಮುಂದಾಗಿದ್ದು,ಸಂಬಂಧ ನಿಯೋಗ ನೇಮಕ ತೀರ್ಮಾನಿಸಿದೆ. ಇನ್ನೊಂದೆಡೆ ಪಕ್ಷದ ವತಿಯಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸತ್ಯಶೋಧನಾ ಸಮಿತಿ ರಚನೆ ಮಾಡಿದ್ದಾರೆ. H.M.ರೇವಣ್ಣ, ಜಯಪ್ರಕಾಶ್ ಹೆಗಡೆ, ಟಿ.ರಘುಮೂರ್ತಿ, ಕುಮಾರ್ ನಾಯಕ್, ಜಕ್ಕಪ್ಪನವರ್ ಬಸವನಗೌಡ ಬಾದರ್ಲಿ ಒಳಗೊಂಡ ಸಮಿತಿ ರಚನೆ ಮಾಡಿದ್ದು, ಸ್ಥಳಕ್ಕೆ ತೆರಳಿ ವಾಸ್ತವ ಸ್ಥಿತಿ ವರದಿ ನೀಡುವಂತೆ ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್