ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮ ಪಂಚಾಯತಿನ ನೂತನ ಸದಸ್ಯ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ನೂತನ ಗ್ರಾ.ಪಂ ಸದಸ್ಯ ಶಾಂತಗೌಡ ಮೇಟಿ(54) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಡಿಸೆಂಬರ್ 31ರಿಂದಲೇ ಅನಾರೋಗ್ಯಕ್ಕೀಡಾಗಿದ್ದ ಶಾಂತಗೌಡ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಇಂದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಭಾರಿ ಅಗ್ನಿ ಅವಘಡ: ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಕಾರ್ಖಾನೆಗಳು