AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಗಂಡನ‌ ಮನೆಯಲ್ಲಿ ನವವಿವಾಹಿತೆ ಅನುಮಾನಾಸ್ಪದವಾಗಿ ನೇಣಿಗೆ ಶರಣು; ಮೃತಳ ಕಿವಿ ಕಟ್ -ಕೈ ಮೇಲೆ ಗಾಯ

ಗಂಡ ಅಭಿಲಾಷ್ ವಿರುದ್ಧ ಮೃತಳ ಪೋಷಕರು ಕೊಲೆ ಆರೋಪ ಮಾಡಿದ್ದಾರೆ. ಗಂಡ ಅಭಿಲಾಷ್​ನನ್ನ ಚಿಕ್ಕಬಳ್ಳಾಪುರ ನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Crime News: ಗಂಡನ‌ ಮನೆಯಲ್ಲಿ ನವವಿವಾಹಿತೆ ಅನುಮಾನಾಸ್ಪದವಾಗಿ ನೇಣಿಗೆ ಶರಣು; ಮೃತಳ ಕಿವಿ ಕಟ್ -ಕೈ ಮೇಲೆ ಗಾಯ
ಗಂಡನ‌ ಮನೆಯಲ್ಲಿ ನವವಿವಾಹಿತೆ ಅನುಮಾನಾಸ್ಪದವಾಗಿ ನೇಣಿಗೆ ಶರಣು; ಮೃತಳ ಕಿವಿ ಕಟ್-ಕೈ ಮೇಲೆ ಗಾಯ
TV9 Web
| Edited By: |

Updated on:Jun 04, 2022 | 2:36 PM

Share

ಚಿಕ್ಕಬಳ್ಳಾಪುರ: ಗಂಡನ‌ ಮನೆಯಲ್ಲಿ ನವವಿವಾಹಿತೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ ನಗರಸಭೆಯ 9ನೇ ವಾರ್ಡ್​ನಲ್ಲಿ ಈ ಘಟನೆ ನಡೆದಿದೆ. ಅನುಷಾ(19) ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾದ ಗೃಹಿಣಿ. ಪ್ರೀತಿಸಿ ವಿವಾಹವಾಗಿದ್ದ ವಿದ್ಯಾರ್ಥಿನಿ ಒಂದೇ ವರ್ಷದಲ್ಲಿ ಸಾವು ಕಂಡಿದ್ದಾಳೆ. ಮೃತಳ ಕಿವಿ ಕಟ್ ಆಗಿದೆ, ಕೈ ಮೇಲೆ ಗಾಯ ಆಗಿರೋದು ಪತ್ತೆಯಾಗಿದೆ. ಆದರೆ ನೇಣು‌ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದಾಗಿ ಪತಿ ಹೇಳಿಕೆ ನೀಡಿದ್ದಾನೆ.

ಗಂಡ ಅಭಿಲಾಷ್ ವಿರುದ್ಧ ಮೃತಳ ಪೋಷಕರು ಕೊಲೆ ಆರೋಪ ಮಾಡಿದ್ದಾರೆ. ಗಂಡ ಅಭಿಲಾಷ್​ನನ್ನ ಚಿಕ್ಕಬಳ್ಳಾಪುರ ನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಗುಂಡಿನ ಸದ್ದು… ಅಣ್ಣನಿಂದಲೇ ತಮ್ಮನ ಮೇಲೆ ಗುಂಡಿನ ದಾಳಿ, ಸಾವು

ಕೊಪ್ಪಳ: ಆಸ್ತಿ ಕಲಹ ವಿಕೋಪಕ್ಕೆ ಹೋಗಿ ಕೊಪ್ಪಳ ತಾಲೂಕಿನ ಕವಲೂರು ಗ್ರಾಮದಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ತತ್ಪರಿಣಾಮ ತಮ್ಮ ಸಾವಿಗೀಡಾಗಿದ್ದಾನೆ. ಅಣ್ಣನೇ ತಮ್ಮನ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಗುಂಡಿನ ದಾಳಿಗೆ ಒಳಗಾದ ವಿನಯ ದೇಸಾಯಿ(35) ಮೃತಪಟ್ಟವ. ಕವಲೂರು ಗ್ರಾಮದ ರಾಘವೇಂದ್ರ ದೇಸಾಯಿ ಗುಂಡಿನ ದಾಳಿ ನಡೆಸಿದ ಅಣ್ಣ. ಯೋಗೇಶ ದೇಸಾಯಿ ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಕೊಪ್ಪಳ ಎಸ್ಪಿ ಗಿರಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಸಾಲಬಾಧೆಯಿಂದ ಬೇಸತ್ತು ಯುವ ಉರಗ ರಕ್ಷಕ ನೇಣಿಗೆ ಶರಣು

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಶಾಂತಿನಗರದ ಮನೆಯಲ್ಲಿ ಸಾಲಬಾಧೆಯಿಂದ ಬೇಸತ್ತು ಉರಗ ರಕ್ಷಕ ಪುನೀತ್ ರಾಮ್(28) ನೇಣಿಗೆ ಶರಣಾಗಿದ್ದಾರೆ. ಕೆಲವು ದಿನಗಳ ಹಿಂದೆ ಪುನೀತ್ ರಾಮ್ ಸಾಹಸ ಕ್ರೀಡೆ ಆಯೋಜನೆಗಾಗಿ ಹಣ ಖರ್ಚು ಮಾಡಿ ಸಂಕಷ್ಟಕ್ಕೆ ಸಿಲುಕಿದ್ದರು. ನಗರದಲ್ಲಿ ಹಾವುಗಳನ್ನು ರಕ್ಷಣೆ ಮಾಡಿ ಅರಣ್ಯ ಪ್ರದೇಶಕ್ಕೆ ಬಿಡ್ತಿದ್ದ ಯುವಕ, ಆದ್ರೆ ಸಾಲದ ಹೊರೆ ಹೆಚ್ಚಾಗಿ ಇದೀಗ ನೇಣಿಗೆ ಶರಣಾಗಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗ್ರಾಮದ ಹೆಬ್ಬಾಗಿಲಿಗೆ ಸರಕು ಲಾರಿ ಡಿಕ್ಕಿ; ಕಂಬ ಬಿದ್ದು, ಬೈಕ್​ ಸವಾರ ಸ್ಥಳದಲ್ಲೇ ಮೃತ

ಗ್ರಾಮದ ಹೆಬ್ಬಾಗಿಲಿಗೆ ಸರಕು ತುಂಬಿದ್ದ ಲಾರಿ ಡಿಕ್ಕಿಯಾಗಿ ಡಿಕ್ಕಿ ರಭಸಕ್ಕೆ ಹೆಬ್ಬಾಗಿಲಿನ ಕಂಬ ಬಿದ್ದು, ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ಅಂಧ್ರ ಮೂಲದ ಕಾರ್ಮಿಕ ನರಸಪ್ಪ(30) ಸಾವಿಗೀಡಾದ ವ್ಯಕ್ತಿ. ಕೆಲಸ ಅರಸಿ 5 ತಿಂಗಳ ಮಗು ಹಾಗೂ ಪತ್ನಿಯನ್ನ ಊರಲ್ಲೇ ಬಿಟ್ಟು, 5 ದಿನದ ಹಿಂದೆಯಷ್ಟೇ ಬಂದಿದ್ದ ಕಾರ್ಮಿಕ ನರಸಪ್ಪ. ಪೊಲೀಸ್ ಸಿಬ್ಬಂದಿ ಲಾರಿ ಚಾಲಕನನ್ನ ವಶಕ್ಕೆ ಪಡೆದಿದ್ದಾರೆ. ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಲಾರಿ ಚಾಲಕ ಕನ್ಜಿಮ್ ಪಾಷಾ, ಬೆಂಗಳೂರಿನ ಕಲಾಸಿಪಾಳ್ಯದವ. ಜಖಂಗೊಂಡಿರುವ ಪಕ್ಕದ ಮತ್ತೊಂದು ಆರ್ಚ್ ತೆರವು ಕಾರ್ಯ ಭರದಿಂದ ಸಾಗಿದೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:17 pm, Sat, 4 June 22

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ