ಮಂಡ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ:
ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮಂಡ್ಯ ನಗರದ ಪ್ರವಾಸಿ ಮಂದಿರದ ಬಳಿ ನಡೆದಿದೆ. ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸುಮಾರು 50 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿದ್ದು, ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಸದ್ಯ ಸ್ಥಳಕ್ಕೆ ಪಶ್ಚಿಮ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಬಾಗಲಕೋಟೆಯ ನದಿಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲು:
ನದಿಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕಿತ್ತಲಿ ಗ್ರಾಮದ ಬಳಿ ನಡೆದಿದೆ. ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಕಿತ್ತಲಿ ಗ್ರಾಮದ ನಿವಾಸಿ 17 ವರ್ಷದ ಶಿರಾಜ್ ಹವಾಲ್ದಾರ್ ಸಾವನ್ನಪ್ಪಿದ್ದಾನೆ. ಬಾಲಕನ ಶವ ಪತ್ತೆಗಾಗಿ ಬಾದಾಮಿ ಅಗ್ನಿಶಾಮಕ ದಳ ಸಿಬ್ಬಂದಿಗಳು ಶೋಧ ಕಾರ್ಯ ನಡೆಸಿದ್ದು, ಸದ್ಯ ಬಾಲಕನ ಶವ ಪತ್ತೆಯಾಗಿದೆ.
ಶಿರಾಜ್ ಹವಾಲ್ದಾರ್
ಇದನ್ನೂ ಓದಿ:
Ram Swaroop Sharma ಬಿಜೆಪಿ ಸಂಸದ ರಾಮ್ಸ್ವರೂಪ್ ಶರ್ಮಾ ನಿಗೂಢ ಸಾವು.. ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ
ಮಾಜಿ ಸಿಎಂ ಧರಂಸಿಂಗ್ ಸಂಬಂಧಿ ಕೊಲೆ ಕೇಸ್: ಮಲತಾಯಿಯ ಮಸಲತ್ತು? ಎ1 ಆರೋಪಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ