ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ; ನದಿಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲು

| Updated By: Digi Tech Desk

Updated on: Mar 07, 2023 | 11:22 AM

ಗಂಡ, ಅತ್ತೆ, ಮಾವ, ಹತ್ಯೆಗೈದು ಆತ್ಮಹತ್ಯೆ ಎಂದು ಬಿಂಬಿಸುತ್ತಿರುವುದಾಗಿ ಮೃತಳ‌ ಕುಟುಂಬಸ್ಥರು ದೂರು ನೀಡಿದ್ದಾರೆ. ಸದ್ಯ ಈ ಪ್ರಕರಣ‌ ದಾಖಲಿಸಿಕೊಂಡ ನಂದ್ಯಾಲ‌ ಪೊಲೀಸರು, ತನಿಖೆ ಮಾಡುತ್ತಿದ್ದಾರೆ.

ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ; ನದಿಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲು
ಮನೀಷಾ ನೇಣು ಹಾಕಿಕೊಂಡು ಆತ್ಮಹತ್ಯೆ‌
Follow us on

ನವ ವಿವಾಹಿತೆಯೊಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಆಂಧ್ರದ ಕರ್ನೂಲು ಜಿಲ್ಲೆಯ ನಂದ್ಯಾಲನಲ್ಲಿ ನಡೆದಿದೆ. ಮನೀಷಾ ನೇಣು ಹಾಕಿಕೊಂಡು ಆತ್ಮಹತ್ಯೆ‌ ಮಾಡಿಕೊಂಡಿದ್ದಾಳೆ. ಆದರೆ ಗಂಡ, ಅತ್ತೆ, ಮಾವ, ಹತ್ಯೆಗೈದು ಆತ್ಮಹತ್ಯೆ ಎಂದು ಬಿಂಬಿಸುತ್ತಿರುವುದಾಗಿ ಮೃತಳ‌ ಕುಟುಂಬಸ್ಥರು ದೂರು ನೀಡಿದ್ದಾರೆ. ಸದ್ಯ ಈ ಪ್ರಕರಣ‌ ದಾಖಲಿಸಿಕೊಂಡ ನಂದ್ಯಾಲ‌ ಪೊಲೀಸರು, ತನಿಖೆ ಮಾಡುತ್ತಿದ್ದಾರೆ.

ಮಂಡ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ:
ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮಂಡ್ಯ ನಗರದ ಪ್ರವಾಸಿ ಮಂದಿರದ ಬಳಿ ನಡೆದಿದೆ. ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸುಮಾರು 50 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿದ್ದು, ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಸದ್ಯ ಸ್ಥಳಕ್ಕೆ ಪಶ್ಚಿಮ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಬಾಗಲಕೋಟೆಯ ನದಿಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲು:
ನದಿಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕಿತ್ತಲಿ ಗ್ರಾಮದ ಬಳಿ ನಡೆದಿದೆ. ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಕಿತ್ತಲಿ ಗ್ರಾಮದ ನಿವಾಸಿ 17 ವರ್ಷದ ಶಿರಾಜ್ ಹವಾಲ್ದಾರ್ ಸಾವನ್ನಪ್ಪಿದ್ದಾನೆ. ಬಾಲಕನ ಶವ ಪತ್ತೆಗಾಗಿ ಬಾದಾಮಿ ಅಗ್ನಿಶಾಮಕ ದಳ ಸಿಬ್ಬಂದಿಗಳು ಶೋಧ ಕಾರ್ಯ ನಡೆಸಿದ್ದು, ಸದ್ಯ ಬಾಲಕನ ಶವ ಪತ್ತೆಯಾಗಿದೆ.

Published On - 12:16 pm, Tue, 23 March 21