Karnataka Weather: ರಾಜ್ಯದ ಈ 6 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರಿ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್​​​ ಘೋಷಣೆ

|

Updated on: Sep 25, 2023 | 7:04 AM

Karnataka Rain: ರಾಜ್ಯದ ಎಲ್ಲ ಭಾಗದಲ್ಲಿ ಮುಂದಿನ ಏಳು ದಿನ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ರಾಯಚೂರಿನ ಕುರ್ಡಿ, ತುಮಕೂರಿನ ಮಧುಗಿರಿಯಲ್ಲಿ ಅತಿ ಹೆಚ್ಚು ತಲಾ 9 ಸೆಂ.ಮೀ ಮಳೆಯಾದ ವರದಿಯಾಗಿದೆ.

Karnataka Weather: ರಾಜ್ಯದ ಈ 6 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರಿ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್​​​ ಘೋಷಣೆ
ಮಳೆ
Follow us on

ಬೆಂಗಳೂರು ಸೆ.25: ರಾಜ್ಯದ ಆರು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗಲಿದೆ (Karnataka Rain) ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ಕರಾವಳಿಯ ದಕ್ಷಿಣ ಕನ್ನಡ ಹಾಗೂ ರಾಮನಗರ, ತುಮಕೂರಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೋ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ. ಇನ್ನು ರಾಜ್ಯಾದ್ಯಂತ ಮುಂದಿನ ಏಳು ದಿನ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಆರು ದಿನಗಳ ಕಾಲ ಮಳೆಯಾಗಲಿದೆ. ಸೆ.25 ಮತ್ತು ಸೆ.28 ರಂದು ಬಿರುಗಾಳಿ ಸಹಿತ ಮಳೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್​​ ಘೋಷಿಸಲಾಗಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ವಿಜಯನಗರದಲ್ಲಿ ಇಂದು ಬಿರುಗಾಳಿ ಬೀಸಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಇಂದು ಮಳೆಯಾಗುತ್ತದೆ.

ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಇರಲಿದೆ. ಬೀದರ, ಕಲಬುರ್ಗಿ ಮತ್ತು ಯಾದಗಿರಿಯಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಒಟ್ಟಾರೆ ರಾಜ್ಯದ ಎಲ್ಲ ಭಾಗದಲ್ಲಿ ಮುಂದಿನ ಏಳು ದಿನ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ರಾಯಚೂರಿನ ಕುರ್ಡಿ, ತುಮಕೂರಿನ ಮಧುಗಿರಿಯಲ್ಲಿ ಅತಿ ಹೆಚ್ಚು ತಲಾ 9 ಸೆಂ.ಮೀ ಮಳೆಯಾದ ವರದಿಯಾಗಿದೆ. ಉಳಿದಂತೆ ಸಿಂಧನೂರು, ಯಾದಗಿರಿಯ ಹುಣಸಗಿನಲ್ಲಿ ತಲಾ 7, ಪಣಂಬೂರು, ರಾಯಚೂರಿನ ಜಾಲಹಳ್ಳಿ, ತಲಾ 6, ಕಾರ್ಕಳ, ಮಾನ್ವಿತಲಾ 5 ಸೆಂ.ಮೀ ಮಳೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ