ಮುಂದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ

| Updated By: ವಿವೇಕ ಬಿರಾದಾರ

Updated on: Dec 22, 2024 | 8:37 AM

ಕನ್ನಡ ಸಾಹಿತ್ಯ ಪರಿಷತ್ತಿನ ಶನಿವಾರದ ಸಭೆಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಬಳ್ಳಾರಿ, ಕೋಲಾರ, ಯಾದಗಿರಿ ಜಿಲ್ಲೆಗಳು ಅತಿಥ್ಯಕ್ಕೆ ಅರ್ಜಿ ಸಲ್ಲಿಸಿದ್ದವು. ಆದರೆ, 66 ವರ್ಷಗಳ ಬಳಿಕ ಮತ್ತೆ ಬಳ್ಳಾರಿಗೆ ಈ ಸಮ್ಮೇಳನದ ಅವಕಾಶ ದೊರೆತಿದೆ. 1926, 1938 ಮತ್ತು 1958ರಲ್ಲಿ ಬಳ್ಳಾರಿಯಲ್ಲಿ ಈ ಸಮ್ಮೇಳನ ನಡೆದಿತ್ತು.

ಮುಂದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ
ಕನ್ನಡ ಸಾಹಿತ್ಯ ಪರಿಷತ್​
Follow us on

ಮಂಡ್ಯ, ಡಿಸೆಂಬರ್​ 22: ಸಕ್ಕರೆನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (Akhila Bharata Kannada Sahitya Sammelana) ನಡೆಯುತ್ತಿದೆ. ಮೂರನೇ ದಿನ ಇಂದು (ಡಿಸೆಂಬರ್​ 22) ಸಾಹಿತ್ಯ ಸಮ್ಮೇಳನಕ್ಕೆ ತೆರೆ ಬೀಳಲಿದೆ. 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ಆಯೋಜಿಸಲು ಶನಿವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ತು ಸಭೆಯಲ್ಲಿ ನಿರ್ಧರಿಸಲಾಗಿದೆ.

ಬಳ್ಳಾರಿ, ಕೋಲಾರ, ಯಾದಗಿರಿ ಸೇರಿದಂತೆ ಹೊಸ ಜಿಲ್ಲೆಗಳು ಸಾಹಿತ್ಯ ಸಮ್ಮೇಳನಕ್ಕೆ ಅತಿಥ್ಯಕ್ಕೆ ಕೋರಿಕೆ ಸಲ್ಲಿಸಿದವು. ಆದರೆ, ಅಂತಿಮವಾಗಿ ಬಳ್ಳಾರಿ ಜಿಲ್ಲೆಗೇ ಸಮ್ಮೇಳನದ ಅತಿಥ್ಯ ನೀಡಲು ಎಲ್ಲ ಜಿಲ್ಲಾ ಸಮಿತಿಗಳು ನಿರ್ಧರಿಸಿವೆ.

ಬಳ್ಳಾರಿಗೆ 66 ವರ್ಷದ ಬಳಿಕ ಮರಳಿ ಸಾಹಿತ್ಯ ಸಮ್ಮೇಳನದ ಅತಿಥ್ಯ ದೊರೆಯುತ್ತಿದೆ. ಈ ಹಿಂದೆ 1926, 1938 ಮತ್ತು 1958ರಲ್ಲಿ ಸಾಹಿತ್ಯ ಸಮ್ಮೇಳನ ನಡೆದಿತ್ತು.

ಇನ್ನು ಮಂಡ್ಯದಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನಕ್ಕೆ ಲಕ್ಷಾಂತರ ಜನರು ಆಗಮಿಸುತ್ತಿದ್ದಾರೆ. ದಾಖಲೆ ಪ್ರಮಾಣದಲ್ಲಿ ಸಾಹಿತ್ಯಾಭಿಮಾನಿಗಳು ಸಮ್ಮೇಳನದಲ್ಲಿ ಭಾಗಿಯಾಗುತ್ತಿದ್ದಾರೆ. ಒಂದೆಡೆ ವಿಚಾರಗೋಷ್ಠಿ, ಮತ್ತೊಂದೆಡೆ ಪುಸ್ತಕ ಹಾಗೂ ವಾಣಿಜ್ಯ ಮಳಿಗೆಗಳು ಜನರನ್ನ ಆಕರ್ಷಿಸುತ್ತಿವೆ. ವಿವಿಧ ಬಗೆಯ ಖಾದ್ಯ ಬಾಯಲ್ಲಿ ನೀರು ತರಿಸುತ್ತಿವೆ.

ಇದನ್ನೂ ಓದಿ: ಸಾಹಿತ್ಯ ಸಮ್ಮೇಳನಕ್ಕೆ ಈಗ ಕೋಟಿ ಕೋಟಿ ಹಂಚಿಕೆ; 1945ರಲ್ಲಿ ಮದರಾಸಿನಲ್ಲಿ ನಡೆದ 29ನೇ ಕನ್ನಡ ಸಾಹಿತ್ಯ ಸಮ್ಮೇಳನ ಖರ್ಚು ಎಷ್ಟು ಗೊತ್ತಾ?

ಕಳೆದ ಎರಡು ದಿನಗಳಲ್ಲಿ ಸಾಹಿತ್ಯ ಸಮ್ಮೇಳನಕ್ಕೆ 3 ಲಕ್ಷ ಜನರು ಆಗಮಿಸುವ ಮೂಲಕ ದಾಖಲೆ ನಿರ್ಮಿಸಿದ್ದರು. ಸಮ್ಮೇಳನದ ಅಂಗವಾಗಿ 450 ಪುಸ್ತಕ ಮಳಿಗೆಗಳನ್ನು ತೆರೆಯಲಾಗಿದೆ. ನಾಡಿನ ವಿವಿಧ ಭಾಗಗಳಿಂದ ಆಗಮಿಸಿರುವ ಸಾಹಿತಿಗಳು, ಸಾಹಿತ್ಯಾಸಕ್ತರು ಪುಸ್ತಕ ಮಳಿಗೆಗಳಿಗೆ ಭೇಟಿ ನೀಡಿ ತಮಗಿಷ್ಟವಾದ ಪುಸ್ತಕಗಳ ಖರೀದಿಯಲ್ಲಿ ಬಿಸಿಯಾಗಿದ್ದಾರೆ. ಇನ್ನು, ಪುಸ್ತಕ ಮಳಿಗೆಗಳ ಮಾಲೀಕರು ಕೂಡ ಉತ್ತಮ ವ್ಯಾಪಾರದಿಂದಾಗಿ ಖುಷಿಯಾಗಿದ್ದಾರೆ.

ಸಾಹಿತ್ಯ ಸಮ್ಮೇಳನಕ್ಕೆ ಇಂದು ತೆರೆ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರವಿವಾರ ತೆರೆ ಬೀಳಲಿದೆ. ಸಂಜೆ 4ಕ್ಕೆ ನಡೆಯಲಿರುವ ಸಮಾರೋಪ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಶ್ರೀಗಳ ದಿವ್ಯ ಸಾನಿದ್ಯ ವಹಿಸಲಿದ್ದಾರೆ. ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಹಲವು ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ. ಸಮ್ಮೇಳನಾಧ್ಯಕ್ಷರಾದ ನಾಡೋಜ ಡಾ.ಗೊ.ರು.ಚನ್ನಬಸಪ್ಪ, ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಷಿ ಉಪಸ್ಥಿತರಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:35 am, Sun, 22 December 24