ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ ನಗದು ಬಹುಮಾನ ಘೋಷಿಸಿದ NIA
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ ನಗದು ಬಹುಮಾನ ನೀಡುವುದಾಗಿ ಎನ್‌ಐಎ ಪ್ರಕಟಣೆ ಹೊರಡಿಸಿದೆ.
ಬೆಂಗಳೂರು/ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿ ನೀಡಿದರೆ ಎನ್‌ಐಎ(National Investigation Agency) ನಗದು ಬಹುಮಾನ ಘೋಷಣೆ ಮಾಡಿದೆ. ಇಬ್ಬರ ಆರೋಪಿ ಬಗ್ಗೆ ಮಾಹಿತಿ ನೀಡಿದರೆ 5 ಲಕ್ಷ ರೂಪಾಯಿ ಹಾಗೂ ಇನ್ನಿಬ್ಬರ ಆರೋಪಗಳ ಬಗ್ಗೆ ಮಾಹಿತಿ ತಿಳಿಸಿದರೆ 2 ಲಕ್ಷ ಬಹುಮಾನ ರೂ. ನಗದು ಬಹುಮಾನ ನೀಡುವವುದಾಗಿ ಎನ್‌ಐಎ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ. ಈ ಬಗ್ಗೆ ಟಿವಿ9 ಗೆ NIA ಅಧಿಕಾರಿ ಅಧಿಕೃತ ಮಾಹಿತಿ ನೀಡಿದ್ದಾರೆ.
ನಾಲ್ವರು ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿ ನೀಡಿದ್ರೆ ಒಟ್ಟು 14 ಲಕ್ಷ ರೂ ನಗದು ಬಹುಮಾನ ನೀಡುವಾಗಿ ಎನ್‌ಐಎ ಘೋಷಿಸಿದ್ದು, ಮೊಹಮ್ಮದ್ ಮುಸ್ತಫಾ ಮತ್ತು ತುಫೈಲ್ ಬಗ್ಗೆ ಮಾಹಿತಿ ನೀಡಿದ್ರೆ 5 ಲಕ್ಷ ರೂ. ಬಹುಮಾನ. ಇನ್ನು ಇಬ್ಬರು ಆರೋಪಿಗಳಾದ ಉಮರ್ ಫಾರೂಕ್ ಹಾಗೂ ಅಬೂಬಕರ್ ಸಿದ್ದಿಕ್ ಬಗ್ಗೆ ಮಾಹಿತಿ ನೀಡಿದ್ರೆ 2 ಲಕ್ಷ ಬಹುಮಾನ ರೂಪಾಯಿ ನಗದು ಬಹುಮಾನ ನೀಡುವಾಗಿ ಎನ್‌ಐಎ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಕೇರಳದಲ್ಲಿ ಮೂವರು ಪ್ರಮುಖ ಆರೋಪಿಗಳ ಬಂಧನ
ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು ಅವರನನ್ನು ಜುಲೈ 26 ರಂದು ಬೆಳ್ಳಾರೆಯಲ್ಲಿರವ ಅವರ ಕೋಳಿ ಅಂಗಡಿ ಬಳಿಯೇ ಹಂತಕರು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಇದು ಇಡೀ ರಾಜ್ಯಾದ್ಯಂತ ಕಾರ್ಯಕರ್ತರಲ್ಲಿ ಕಿಚ್ಚು ಹತ್ತಿಸಿತ್ತು. ಇದರ ಬಿಸಿಗೆ ಬಿಜೆಪಿ ರಾಜ್ಯ ಸರ್ಕಾರದ ಬುಡವೇ ಅಲುಗಾಡಿತ್ತು. ನಂತರ ಸರ್ಕಾರ ಈ ಪ್ರಕರಣವನ್ನು ಎನ್‌ಐಎ ತನಿಖಗೆ ವಹಿಸಿತ್ತು.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಪ್ರಮುಖ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಶಿಯಾಬ್, ರಿಯಾಜ್ ಮತ್ತು ಬಶೀರ್ ಎನ್ನುವರನ್ನು ಕೇರಳದಲ್ಲಿ ಬಂಧಿಸಲಾಗಿತ್ತು.