AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ, ಕೇರಳದಿಂದ ಪಿಎಫ್​ಐ ಚಟುವಟಿಕೆಗಳಿಗೆ ದುಬೈ ದುಡ್ಡು ಹಂಚುತ್ತಿದ್ದವನ ಬಂಧಿಸಿದ ಎನ್​ಐಎ

ಪಿಎಫ್​ಐ ಉಗ್ರ ಸಂಘಟನೆಗೆ ದುಬೈಯಿಂದ ಬರುತ್ತಿದ್ದ ಹಣವನ್ನು ಪೂರೈಕೆ ಮಾಡುತ್ತಿದ್ದ ವ್ಯಕ್ತಿಯನ್ನು ದೆಹಲಿಯಲ್ಲಿ ಎನ್​ಐಎ ಬಂಧಿಸಿದೆ. ಬಿಹಾರದ ಮೊಹಮ್ಮದ್ ಸಜ್ಜದ್ ಆಲಂ ಬಂಧನಕ್ಕೊಳಗಾದ ವ್ಯಕ್ತಿಯಾಗಿದ್ದು, ಈತ ದುಬೈನಿಂದ ಬರುತ್ತಿದ್ದ ಹಣವನ್ನು ಕರ್ನಾಟಕ ಹಾಗೂ ಕೇರಳದ ಮೂಲಕ ಬಿಹಾರದ ಪಿಎಫ್​ಐ ಕಾರ್ಯಕರ್ತರಿಗೆ ತಲುಪಿಸುತ್ತಿದ್ದ ಎಂದು ಎನ್​ಐಎ ಹೇಳಿದೆ.

ಕರ್ನಾಟಕ, ಕೇರಳದಿಂದ ಪಿಎಫ್​ಐ ಚಟುವಟಿಕೆಗಳಿಗೆ ದುಬೈ ದುಡ್ಡು ಹಂಚುತ್ತಿದ್ದವನ ಬಂಧಿಸಿದ ಎನ್​ಐಎ
ಎನ್​ಐಎ
TV9 Web
| Edited By: |

Updated on: Jan 06, 2025 | 8:05 AM

Share

ಬೆಂಗಳೂರು, ಜನವರಿ 6: ನಿಷೇಧಿತ ಪಿಎಫ್​ಐ ಉಗ್ರ ಸಂಘಟನೆಯ ಕೃತ್ಯಗಳಿಗೆ ದುಬೈನಿಂದ ಬರುತ್ತಿದ್ದ ಹಣವನ್ನು ಕರ್ನಾಟಕ ಹಾಗೂ ಕೇರಳದಲ್ಲಿನ ತಂಡಗಳ ಮೂಲಕ ಹಂಚುತ್ತಿದ್ದ ಬಿಹಾರ ಮೂಲದ ವ್ಯಕ್ತಿಯನ್ನು ದೆಹಲಿಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್​ಐಎ) ಬಂಧಿಸಿದೆ. ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಮೊಹಮ್ಮದ್ ಸಜ್ಜದ್ ಆಲಂ ಎಂಬಾತ ಬಂಧಿತ ವ್ಯಕ್ತಿ. ಈತ ದುಬೈನಿಂದ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಬಂಧಿಸಲಾಗಿದೆ.

ಪಿಎಫ್‌ಐ ತರಬೇತಿ ಪಡೆದ ಕೇಡರ್ ಆಲಂ ವಿರುದ್ಧ ಬಂಧನ ವಿಶೇಷ ಎನ್‌ಐಎ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ಅವರ ವಿರುದ್ಧ ಲುಕ್‌ಔಟ್ ಸುತ್ತೋಲೆ (ಎಲ್‌ಒಸಿ) ಕೂಡ ಹೊರಡಿಸಲಾಗಿತ್ತು ಎಂದು ಎನ್​ಐಎ ತಿಳಿಸಿದೆ.

ಎನ್​ಐಎ ಹೇಳಿದ್ದೇನು?

ಆರೋಪಿಯು ದುಬೈನಿಂದ ಬಿಹಾರದ ಪಿಎಫ್‌ಐ ಕಾರ್ಯಕರ್ತರಿಗೆ ಬರುತ್ತಿದ್ದ ದುಡ್ಡನ್ನು ಕರ್ನಾಟಕ ಮತ್ತು ಕೇರಳ ಮೂಲದ ತಂಡಗಳ ಮೂಲಕ ಅಕ್ರಮವಾಗಿ ರವಾನಿಸುತ್ತಿದ್ದ. ನಿಷೇಧಿತ ಸಂಘಟನೆಯ ಅಪರಾಧ ಮತ್ತು ಕಾನೂನುಬಾಹಿರ ಚಟುವಟಿಕೆಗಳನ್ನು ಉತ್ತೇಜಿಸಲು ಹಣವನ್ನು ಬಳಸಲಾಗಿತ್ತು ಎಂದು ಎನ್ಐಎ ಪ್ರಕಟಣೆ ತಿಳಿಸಿದೆ.

ಪಿಎಫ್​ಐ ಕಾರ್ಯಕರ್ತರು ಕಾನೂನುಬಾಹಿರ ಮತ್ತು ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಬಗ್ಗೆ 2022 ರ ಜುಲೈನಲ್ಲಿ ಬಿಹಾರದ ಫುಲ್ವಾರಿ ಷರೀಫ್ ಪೊಲೀಸರು ಪ್ರಕರಣ ದಾಖಲಿಸಿದ್ದರು. ನಂತರ ಪ್ರಕರಣದ ತನಿಖೆಯನ್ನು ಎನ್​ಐಎಗೆ ವಹಿಸಲಾಗಿತ್ತು.

ದೇಶದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡಲು ಪೂರ್ವಾಗ್ರಹ ಪೀಡಿತ ಚಟುವಟಿಕೆಗಳ ಮೂಲಕ ವಿವಿಧ ಧರ್ಮಗಳು ಮತ್ತು ಗುಂಪುಗಳ ಸದಸ್ಯರ ನಡುವೆ ಭಯೋತ್ಪಾದನೆಯ ವಾತಾವರಣವನ್ನು ಸೃಷ್ಟಿಸಲು ಮತ್ತು ಧಾರ್ಮಿಕ ದ್ವೇಷವನ್ನು ಹರಡಲು ನಿಷೇಧಿತ ಪಿಎಫ್​ಐ ಸಂಘಟನೆಯ ಕಾರ್ಯಕರ್ತರು ಸಂಚು ರೂಪಿಸಿದ್ದಾರೆ ಎಂದು ಎನ್​ಐಎ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಕರೆ ಬೆನ್ನಲ್ಲೇ ಮೋಸ್ಟ್ ವಾಂಟೆಡ್​​ ನಕ್ಸಲರು ಶರಣಾಗತಿಗೆ ನಿರ್ಧಾರ

ಸಾರ್ವಜನಿಕ ಶಾಂತಿಗೆ ಭಂಗ ತರುವ, ಭಾರತದ ವಿರುದ್ಧ ಜನಾಭಿಪ್ರಾಯ ಉಂಟುಮಾಡುವ ಉದ್ದೇಶದಿಂದ ಮತ್ತು ಭಾರತವನ್ನು 2047ರ ವೇಳೆಗೆ ಇಸ್ಲಾಂ ರಾಷ್ಟ್ರ ಮಾಡುವ ಗುರಿಯೊಂದಿಗೆ ನಿಷೇಧಿತ ಸಂಘಟನೆ ಕಾರ್ಯಾಚರಿಸುತ್ತಿರುವ ಆರೋಪದೊಂದಿಗೆ ಚಾರ್ಜ್​ಶೀಟ್​​ ಸಲ್ಲಿಸಲಾಗಿತ್ತು. ಪ್ರಕರಣದಲ್ಲಿ 17 ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ 18ನೇ ಆರೋಪಿಯಾಗಿ ಮೊಹಮ್ಮದ್ ಸಜ್ಜದ್ ಆಲಂನನ್ನು ಬಂಧಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು