ಕರ್ನಾಟಕದಲ್ಲಿ ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ: ಎನ್​ಐಎ ಕಾರ್ಯಾಚರಣೆ

ಜಿಹಾದಿ ಸಂಘಟನೆಗೆ ಹಣ ಹೊಂದಿಸಲು ಉಗ್ರಗಾಮಿಗಳು ಸಾಮಾಜಿಕ ಜಾಲತಾಣಗಳನ್ನು ಬಳಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಕರ್ನಾಟಕದಲ್ಲಿ ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ: ಎನ್​ಐಎ ಕಾರ್ಯಾಚರಣೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Aug 04, 2021 | 10:39 PM

ಬೆಂಗಳೂರು: ದೇಶದ ವಿವಿಧೆಡೆ ಕಾರ್ಯಾಚರಣೆ ನಡೆಸಿದ ರಾಷ್ಟ್ರೀಯ ತನಿಖಾ ದಳದ (National Investigating Agency – NIA) ಭದ್ರತಾ ಸಿಬ್ಬಂದಿ ಹಲವು ಐಸಿಸ್ ಉಗ್ರರನ್ನು ಬಂಧಿಸಿದ್ದಾರೆ. ರಾಜ್ಯದಲ್ಲಿಯೂ ಇಬ್ಬರು ಶಂಕಿತ ಐಸಿಸ್ ಉಗ್ರರನ್ನು ಬಂಧಿಸಲಾಗಿದೆ. ಬೆಂಗಳೂರಿನ ಶಂಕರ್ ವೆಂಕಟೇಶ್ ಪೆರುಮಾಳ್, ಮಂಗಳೂರಿನ ಅಮರ್ ಅಬ್ದುಲ್ ರೆಹಮಾನ್ ಬಂಧಿತರು. ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತಿಬ್ಬರು ಶಂಕಿತ ಉಗ್ರರನ್ನು ಸೆರೆ ಹಿಡಿಯಲಾಗಿದೆ.

ಕರ್ನಾಟಕ ಸೇರಿದಂತೆ ದೇಶದ 5 ಕಡೆ ಎನ್‌ಐಎ ಬುಧವಾರ ದಾಳಿ ನಡೆಸಿತ್ತು. ಕರ್ನಾಟಕದ ಬಂಧಿತ ಉಗ್ರರು ಕೇರಳದ ಮೊಹಮದ್ ಅಮೀನ್ ಜೊತೆಗೆ ನಂಟು ಹೊಂದಿದ್ದರು ಎಂದು ಆರೋಪಿಸಲಾಗಿದೆ. ಐಸಿಎಸ್ ಉಗ್ರಗಾಮಿಗಳೊಂದಿಗೆ ಸಂಪರ್ಕದಲ್ಲಿದ್ದ ಮೊಹಮದ್ ಅಮೀನ್, ಉಗ್ರಗಾಮಿ ಚಟುವಟಿಕೆಗಳಿಗೆ ಹಣಕಾಸು ಒದಗಿಸುತ್ತಿದ್ದ. ಬಂಧಿತರು ಸಹ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿ ಹಣ ಸಂಗ್ರಹಿಸುತ್ತಿದ್ದರು ಎಂದು ದೂರಲಾಗಿದೆ.

ಜಿಹಾದಿ ಸಂಘಟನೆಗೆ ಹಣ ಹೊಂದಿಸಲು ಉಗ್ರಗಾಮಿಗಳು ಸಾಮಾಜಿಕ ಜಾಲತಾಣಗಳನ್ನು ಬಳಸುತ್ತಿದ್ದರು ಎಂದು ಆರೋಪಿಸಲಾಗಿದೆ. ಉಗ್ರರ ಬಂಧನದ ವೇಳೆ ರಾಷ್ಟ್ರೀಯ ತನಿಖಾ ದಳವು ಲ್ಯಾಪ್‌ಟಾಪ್, ಹಾರ್ಡ್​ಡಿಸ್ಕ್, ಪೆನ್ ಡ್ರೈವ್, ಸಿಮ್ ಕಾರ್ಡ್​ಗಳು ಸೇರಿದಂತೆ ಎಲೆಕ್ಟ್ರಾನಿಕ್ ವಸ್ತುಗಳು ಜಪ್ತಿ ಮಾಡಿದೆ.

(NIA Arrests two ISIS Terrorist Suspects in Karnataka)

ಇದನ್ನೂ ಓದಿ: ಐಇಡಿ, ಪಿಸ್ತೂಲ್ ಸಮೇತ ದೆಹಲಿಯಲ್ಲಿ ಐಸಿಸ್ ಉಗ್ರನ ಬಂಧನ

ಇದನ್ನೂ ಓದಿ: ಬೆಂಗಳೂರಿನಲ್ಲಿ ಸಿನಿಮೀಯ ರೀತಿ ಶಂಕಿತ ಐಸಿಸ್​​​ ಉಗ್ರ ಅರೆಸ್ಟ್

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್