AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಂಕಿತ ಉಗ್ರ ಸುಹೇಲ್‌ಗೆ ಎನ್‌ಐಎ ಗ್ರಿಲ್: ಮಹತ್ವದ ಮಾಹಿತಿ ಕಲೆಹಾಕಿದ ಅಧಿಕಾರಿಗಳು

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಬಂಧಿಸಲಾಗಿದ್ದ ಶಂಕಿತ ಉಗ್ರ ಸುಹೇಲ್‌ನನ್ನು ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ಶುಕ್ರವಾರ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಅಯೋಧ್ಯಾ ರಾಮಮಂದಿರ ಸ್ಫೋಟದ ಸಂಚು ಹಾಗೂ ಪಾಕಿಸ್ತಾನಿ ಉಗ್ರರ ನಂಟು ಹೊಂದಿರುವ ಗಂಭೀರ ಆರೋಪ ಎದುರಿಸುತ್ತಿರುವ ಈತನನ್ನು ಸುಮಾರು ಒಂದು ಗಂಟೆಗಳ ಕಾಲ ಗ್ರಿಲ್ ಮಾಡಲಾಗಿದೆ.

ಶಂಕಿತ ಉಗ್ರ ಸುಹೇಲ್‌ಗೆ ಎನ್‌ಐಎ ಗ್ರಿಲ್: ಮಹತ್ವದ ಮಾಹಿತಿ ಕಲೆಹಾಕಿದ ಅಧಿಕಾರಿಗಳು
ಎನ್​ಐಎ ಹಾಗೂ ಶಂಕಿತ ಉಗ್ರ ಸುಹೇಲ್Image Credit source: tv9
ಗಣಪತಿ ಶರ್ಮಾ
|

Updated on: Jun 27, 2026 | 10:09 AM

Share

ಮುಖ್ಯಾಂಶಗಳು

  • ಎನ್‌ಐಎ ಅಧಿಕಾರಿಗಳಿಂದ ತೀವ್ರ ವಿಚಾರಣೆ
  • ಸಾಮಾಜಿಕ ಜಾಲತಾಣ ಖಾತೆಗಳ ಪರಿಶೀಲನೆ
  • ಆರೋಪಿಗೆ 10 ದಿನ ಪೊಲೀಸ್ ಕಸ್ಟಡಿ

ಬೆಂಗಳೂರು, ಜೂನ್ 27: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಇತ್ತೀಚೆಗೆ ಬಂಧನಕ್ಕೊಳಗಾಗಿದ್ದ ಶಂಕಿತ ಉಗ್ರ ಸುಹೇಲ್‌ನ ಜಾಲವನ್ನು ಬೇರುಸಹಿತ ಬಯಲಿಗೆಳೆಯಲು ರಾಷ್ಟ್ರೀಯ ತನಿಖಾ ದಳ (NIA) ಅಖಾಡಕ್ಕಿಳಿದಿದೆ. ಅಯೋಧ್ಯೆಯ ರಾಮಮಂದಿರ ಸ್ಫೋಟದ ಸಂಚು ಹಾಗೂ ಪಾಕಿಸ್ತಾನಿ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆಘಾತಕಾರಿ ಮಾಹಿತಿ ಹೊರಬಂದ ಬೆನ್ನಲ್ಲೇ, ಶುಕ್ರವಾರ ಹರಿಹರಕ್ಕೆ ಆಗಮಿಸಿದ ಎನ್‌ಐಎ ಅಧಿಕಾರಿಗಳ ವಿಶೇಷ ತಂಡವು ಶಂಕಿತ ಉಗ್ರನನ್ನು ಸುಮಾರು ಹೊತ್ತು ತೀವ್ರ ವಿಚಾರಣೆಗೆ ಒಳಪಡಿಸಿದೆ.

ಸಾಮಾಜಿಕ ಜಾಲತಾಣ ಹಾಗೂ ಬ್ಯಾಂಕ್ ಖಾತೆಗಳ ಜಾಲ ಜಪ್ತಿ

ಎನ್‌ಐಎ ಅಧಿಕಾರಿಗಳು ಶಂಕಿತ ಉಗ್ರ ಸುಹೇಲ್‌ನನ್ನು ಸುಮಾರು ಒಂದು ಗಂಟೆಯ ಕಾಲ ಸುದೀರ್ಘವಾಗಿ ವಿಚಾರಣೆ ನಡೆಸಿದ್ದಾರೆ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೇಖರ್ ಹೆಚ್.ಟಿ. ತಿಳಿಸಿದ್ದಾರೆ. ವಿಚಾರಣೆ ವೇಳೆ ಆತನ ಸಾಮಾಜಿಕ ಜಾಲತಾಣಗಳ ಖಾತೆಗಳು, ಸಂಶಯಾಸ್ಪದ ಇಂಟರ್ನೆಟ್ ಚಟುವಟಿಕೆಗಳು ಹಾಗೂ ಇತರ ಪ್ರಮುಖ ಬ್ಯಾಂಕ್ ಖಾತೆಗಳ ವಹಿವಾಟು ಸೇರಿದಂತೆ ವಿವಿಧ ಆಯಾಮಗಳ ಕುರಿತು ಅಧಿಕಾರಿಗಳು ಮಾಹಿತಿ ಕಲೆಹಾಕಿದ್ದಾರೆ.

ಬನ್ನಿಕೋಡು ಗ್ರಾಮದ ಗುಟ್ಯಪ್ಪ ಎಂಬುವವರ ಮನೆಯಲ್ಲಿದ್ದ ಶಂಕಿತ ಉಗ್ರ ಸುಹೇಲ್​ನನ್ನು ಇತ್ತೀಚೆಗೆ ವಶಕ್ಕೆ ಪಡೆಯಲಾಗಿತ್ತು. ಖಾಸಗಿ ಫ್ಯಾಕ್ಟರಿಯೊಂದರಲ್ಲಿ ಪೇಂಟಿಂಗ್ ಕೆಲಸಕ್ಕಾಗಿ ಬಂದಿದ್ದ 10 ಜನರ ತಂಡದಲ್ಲಿ ಈ ಸುಹೇಲ್ ಮಾತ್ರ ಅತ್ಯಂತ ಸಕ್ರಿಯನಾಗಿದ್ದ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.

ಕೋರ್ಟ್‌ನಿಂದ 10 ದಿನಗಳ ಕಸ್ಟಡಿ

ಸ್ಥಳೀಯ ಪೊಲೀಸರು ಹಾಗೂ ಎನ್‌ಐಎ ಜಂಟಿ ಕಾರ್ಯಾಚರಣೆಯ ಬಳಿಕ ಆರೋಪಿ ಸುಹೇಲ್‌ನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಕೋರ್ಟ್ ಆತನನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ. ಪೊಲೀಸ್ ಕಸ್ಟಡಿಯ ಅವಧಿಯಲ್ಲಿ ಈತನ ದೇಶದ್ರೋಹಿ ಸಂಚು ಹಾಗೂ ಅಂತಾರಾಷ್ಟ್ರೀಯ ಲಿಂಕ್‌ಗಳ ಬಗ್ಗೆ ಇನ್ನಷ್ಟು ಆಳವಾದ ತನಿಖೆ ನಡೆಯಲಿದೆ.

ಇದನ್ನೂ ಓದಿ: ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಂಬ್ ಸ್ಫೋಟಕ್ಕೆ ಸ್ಕೆಚ್: ದಾವಣಗೆರೆಯಲ್ಲಿ ಪೊಲೀಸರ ಕೈಗೆ ಸಿಕ್ಕ ಶಂಕಿತ ಉಗ್ರನಿಂದ ಸ್ಫೋಟಕ ಮಾಹಿತಿ

ಸದ್ಯದ ವಿಚಾರಣೆಯ ವೇಳೆ ಉಗ್ರಗಾಮಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಹಲವು ಅತ್ಯಂತ ಪ್ರಮುಖ ಹಾಗೂ ರಹಸ್ಯ ಮಾಹಿತಿಗಳನ್ನು ಅಧಿಕಾರಿಗಳು ಕಲೆಹಾಕಿದ್ದು, ಮುಂದಿನ ದಿನಗಳಲ್ಲಿ ಕರಾವಳಿ ಹಾಗೂ ಒಳನಾಡಿನ ಇತರ ಭಾಗಗಳಲ್ಲೂ ತನಿಖೆ ಚುರುಕುಗೊಳ್ಳುವ ಸಾಧ್ಯತೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ