ಕರ್ನಾಟಕ ಸೇರಿ 9 ಕಡೆ NIA ದಾಳಿ: ಮೊಬೈಲ್, ಬ್ಯಾಟರಿ ಹಾಗೂ ದಾಖಲೆಗಳು ವಶಕ್ಕೆ
ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದೆ. 2023ರಲ್ಲಿ ಬಂಧನವಾದ ಬಾಂಗ್ಲಾದೇಶದ ನಾಲ್ವರು ಪ್ರಜೆಗಳು ನೀಡಿದ ಮಾಹಿತಿ ಆಧಾರಿಸಿ ಈ ದಾಳಿ ಮಾಡಲಾಗಿದೆ ಎಂದು ಎನ್‌ಐಎ ತಿಳಿಸಿದೆ. ಉಗ್ರ ಸಂಘಟನೆ ಅಲ್ಖೈದಾ ಜೊತೆ ನಂಟು ಹೊಂದಿದವರ ವಿರುದ್ಧ ಈ ದಾಳಿ ನಡೆದಿದೆ.
ಬೆಂಗಳೂರು, ನವೆಂಬರ್ 12: ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಸೋಮವಾರ (ನ.11) ಕರ್ನಾಟಕ (Karnataka) ಸೇರಿದಂತೆ ಒಂಬತ್ತು ರಾಜ್ಯಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿ, ಶೋಧ ಕಾರ್ಯಾಚರಣೆ ನಡೆಸಿದರು. ಭಾರತವನ್ನು ಅಸ್ಥಿರಗೊಳಿಸುವ ಅಲ್ಖೈದಾ ಉಗ್ರ ಸಂಘಟನೆಯ ಸಂಚಿಗೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.
ಭಾರತದಲ್ಲಿ ನೆಲೆಸಿರುವ ಬಾಂಗ್ಲಾದೇಶ ಪ್ರಜೆಗಳು ಅಲ್ ಖೈದಾ ಜೊತೆಗೆ ನಂಟು ಹೊಂದಿದ್ದಾರೆ. ಜೊತೆಗೆ ಅಲ್ ಖೈದಾ ಉಗ್ರ ಸಂಘಟನೆ ಕುರಿತು ಪ್ರಚಾರ, ಚಟುವಟಿಕೆಗಳನ್ನು ಬೆಂಬಲಿಸುವ ಮತ್ತು ಧನಸಹಾಯ ಮಾಡುವ ವ್ಯಕ್ತಿಗಳ ವಿರುದ್ದ ಜಮ್ಮು-ಕಾಶ್ಮೀರ, ಕರ್ನಾಟಕ, ಪಶ್ಚಿಮ ಬಂಗಾಳ, ಬಿಹಾರ, ಆಸ್ಸಾಂನ 9 ಕಡೆ ದಾಳಿ ಮಾಡಲಾಗಿದೆ.
ಎನ್‌ಐಎ ಅಧಿಕಾರಿಗಳು ಕಾರ್ಯಾಚಾರಣೆ ವೇಳೆ ಬ್ಯಾಂಕಿಂಗ್ ವಹಿವಾಟುಗಳು, ಮೊಬೈಲ್ ಫೋನ್, ಡಿಜಿಟಲ್ ಸಾಧನಗಳು ಮತ್ತು ಭಯೋತ್ಪಾದಕ ನಿಧಿ ಚಟುವಟಿಕೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡರು.
ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಉಗ್ರರಿಗೆ ಐಸಿಸ್ ನಂಟು: ಮೆಜೆಸ್ಟಿಕ್, ಯಶವಂತಪುರದಲ್ಲಿ ಬಸ್ ಸ್ಫೋಟಗೊಳಿಸುವಂತೆ ಟಾಸ್ಕ್
2023ರ ನವೆಂಬರ್‌ನಲ್ಲಿ, ಮೊಹಮ್ಮದ್ ಎಂದು ಗುರುತಿಸಲಾದ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ ಐವರು ಆರೋಪಿಗಳ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್ ಸಲ್ಲಿಸಿತ್ತು. ಸೋಜಿಬ್ಮಿಯಾನ್, ಮುನ್ನಾ ಖಾಲಿದ್ ಅನ್ಸಾರಿ ಅಲಿಯಾಸ್ ಮುನ್ನಾ ಖಾನ್, ಅಜರುಲ್ ಇಸ್ಲಾಂ ಅಲಿಯಾಸ್ ಜಹಾಂಗೀರ್ ಅಥವಾ ಆಕಾಶ್ ಖಾನ್, ಅಬ್ದುಲ್ ಲತೀಫ್ ಅಲಿಯಾಸ್ ಮೊಮಿನುಲ್ ಅನ್ಸಾರಿ ಮತ್ತು ಐದನೇ ಆರೋಪಿ ಫರೀದ್ ಭಾರತೀಯ ಪ್ರಜೆಯಾನ್ನು ಬಂಧಿಸಲಾಗಿತ್ತು ಎಂದು ಎನ್‌ಐಎ ತಿಳಿಸಿದೆ.
ಟ್ವಿಟರ್ ಪೋಸ್ಟ್
NIA Searches Pan India Locations in B’Deshi Linked Al-Qaida Case pic.twitter.com/vFV9A5khXz
— NIA India (@NIA_India) November 11, 2024
ಐವರು ಆರೋಪಿಗಳು ತಮ್ಮ ಚಟುವಟಿಕೆಗಳನ್ನು ಗೌಪ್ಯವಾಗಿ ನಡೆಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದರು ಎಂಬುದು ಅವರ ಪೂರ್ವಾಪರದ ಬಗ್ಗೆ ಎನ್‌ಐಎ ತನಿಖೆ ನಡೆಸಿದಾಗ ತಿಳಿದು ಬಂದಿತ್ತು. ಭಾರತದಲ್ಲಿನ ಮುಸ್ಲಿಂ ಯುವಕರನ್ನು ಪ್ರೇರೇಪಿಸುವಲ್ಲಿ ಇವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಅಲ್-ಖೈದಾದ ಹಿಂಸಾತ್ಮಕ ಸಿದ್ಧಾಂತವನ್ನು ಪ್ರಚಾರ ಮಾಡುತ್ತಿದ್ದರು. ಹಣ ಸಂಗ್ರಹಿಸಿ ಅದನ್ನು ಅಲ್-ಖೈದಾಕ್ಕೆ ಕಳುಹಿಸುತ್ತಿದ್ದರು ಎನ್‌ಐಎ ಮಾಹಿತಿ ನೀಡಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:57 am, Tue, 12 November 24