AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NIA Raids In Karnataka: ಶಿರಸಿಯಲ್ಲೂ ಎನ್​ಐಎ ದಾಳಿ: 4 ನಗರಗಳ 12 ಸ್ಥಳಗಳಲ್ಲಿ ತಪಾಸಣೆ, ಇಬ್ಬರ ಬಂಧನ

NIA Raids Latest News: ಬೆಂಗಳೂರು, ಮಂಗಳೂರು, ಶಿರಸಿಯಲ್ಲಿ ಗುರುವಾರ ನಸುಕಿನಲ್ಲಿ ಏಕಕಾಲಕ್ಕೆ ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

NIA Raids In Karnataka: ಶಿರಸಿಯಲ್ಲೂ ಎನ್​ಐಎ ದಾಳಿ: 4 ನಗರಗಳ 12 ಸ್ಥಳಗಳಲ್ಲಿ ತಪಾಸಣೆ, ಇಬ್ಬರ ಬಂಧನ
ಎನ್​ಐಎ ಅಧಿಕಾರಿಗಳು (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Sep 22, 2022 | 9:43 AM

Share

ಬೆಂಗಳೂರು: ಬೆಂಗಳೂರು, ಮಂಗಳೂರು, ಶಿರಸಿಯಲ್ಲಿ ಗುರುವಾರ ನಸುಕಿನಲ್ಲಿ ಏಕಕಾಲಕ್ಕೆ ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಇದರಲ್ಲಿ 10 ಸ್ಥಳಗಳು ಪಿಎಫ್​ಐ, ಎಸ್​ಡಿಪಿಐ ಪದಾಧಿಕಾರಿಗಳ ಮನೆಗಳಾಗಿದ್ದರೆ, 2 ಸ್ಥಳಗಳು ಪಿಎಫ್​ಐ ಕಚೇರಿಗಳಾಗಿವೆ. ಕೇರಳ, ತಮಿಳುನಾಡು ಮತ್ತು ಆಂಧ್ರ ಪ್ರದೇಶದ ಹಲವೆಡೆಯೂ ದಾಳಿ ನಡೆದಿದೆ. ಬೆಂಗಳೂರಿನ ಪಾದರಾಯನಪುರದಲ್ಲಿರುವ ಪಿಎಫ್​ಐ ರಾಜ್ಯ ಘಟಕದ ಕಾರ್ಯದರ್ಶಿ ಅಫ್ಸರ್ ಪಾಷಾ ನಿವಾಸದ ಮೇಲೆ, ಟ್ಯಾನರಿ ರಸ್ತೆಯಲ್ಲಿರುವ ಪಿಎಫ್​ಐ ರಾಜ್ಯ ಘಟಕದ ಅಧ್ಯಕ್ಷ ನಾಸಿರ್ ಪಾಷಾ ನಿವಾಸ, ರಿಚ್ಮಂಡ್ ಟೌನ್​ನಲ್ಲಿರುವ ಪಿಎಫ್​ಐ ರಾಷ್ಟ್ರೀಯ ಕಾರ್ಯದರ್ಶಿ ಮೊಹಮ್ಮದ್ ಸಾಕಿಬ್ ಫ್ಲ್ಯಾಟ್​ ಮೇಲೆಯೂ ಎನ್​ಐಎ ದಾಳಿ ನಡೆದಿದೆ. ಬೆಂಗಳೂರಿನ ಮತ್ತೊಂದು ಸ್ಥಳದಲ್ಲಿಯೂ ದಾಳಿ ನಡೆದಿದೆ, ಎಂದು ಹೇಳಲಾಗುತ್ತಿದೆ ಆದರೆ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.

ರಿಚ್ಮಂಡ್ ಟೌನ್​ನ ಮೊಹಮದ್ ಸಾಕಿಬ್ ನಿವಾಸದ ಬಳಿ ಸೇರಿರುವ ಬೆಂಬಲಿಗರನ್ನು ಸ್ಥಳೀಯ ಪೊಲೀಸರು ದೂರ ಕಳಿಸುತ್ತಿದ್ದಾರೆ. ಪಾದರಾಯನಪುರ ಹಾಗೂ ಟ್ಯಾನರಿ ರಸ್ತೆಗಳಲ್ಲಿ ದಾಳಿ ನಡೆದ ಮನೆಗಳ ಸಮೀಪ ಸ್ಥಳೀಯ ಪೊಲೀಸರು ಭದ್ರತೆ ಒದಗಿಸಲು ಮುಂದಾಗಿದ್ದಾರೆ. ಮೊಹ್ಮದ್​ ಸಾಕಿಬ್ ನಿವಾಸದಲ್ಲಿ ಎನ್​ಐಎ ದಾಳಿ ಅಂತ್ಯಗೊಂಡಿದ್ದು, ಮನೆಯಲ್ಲಿ ಕೆಲ ದಾಖಲೆಗಳನ್ನ ವಶಕ್ಕೆ ಪಡೆದು ಹೊರನಡೆದಿದ್ದಾರೆ.

ಮಂಗಳೂರಿನಲ್ಲಿ 4 ಕಡೆ ದಾಳಿ

ಎಸ್​ಡಿಐಪಿನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಅಬುಬಕರ್ ಕುಳಾಯಿ ಸೋದರ ಅಬ್ದುಲ್ ಖಾದರ್ ಕುಳಾಯಿ ಮನೆ ಮೇಲೆಯೂ ಎನ್​ಐಎ ದಾಳಿ ನಡೆದಿದೆ. ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಪಿಎಫ್​ಐ ಮತ್ತು ಎಸ್​ಡಿಪಿಐ ಜಿಲ್ಲಾ ಕಚೇರಿಯ ಮೇಲೆಯೂ ಎನ್​ಐಎ ದಾಳಿ ನಡೆದಿದೆ. ಕುಳಾಯಿ, ಕಾವೂರು, ಜೋಕಟ್ಟೆ, ಬಜಪೆಯ ಪಿಎಫ್​ಐ ಮತ್ತು ಎಸ್​ಡಿಪಿಐ ನಾಯಕರ ಮನೆಗಳ ಮೇಲೆಯೂ ದಾಳಿ ನಡೆದಿದೆ. ಎನ್‌ಐಎ ದಾಳಿಯ ನಂತರ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ದಾಳಿ ನಡೆಯುವ ಸ್ಥಳದಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್​ಪಿಎಫ್) ಭದ್ರತೆ ಒದಗಿಸಿದೆ.

ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್​ಡಿಪಿಐ ಕಚೇರಿ ಮೇಲೆ ದಾಳಿ ನಡೆಸಿದ ಎನ್​ಐಎ ಅಧಿಕಾರಿಗಳು ಎರಡು ಪುಸ್ತಕ, ಲ್ಯಾಪ್​ಟಾಪ್, 1 ಪೆನ್​ಡ್ರೈವ್, 10ಕ್ಕೂ ಹೆಚ್ಚು ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಭಿತ್ತಿಪತ್ರಗಳು, ಟೀ ಶರ್ಟ್ ವಶಕ್ಕೆ ಪಡೆದು ಅಧಿಕಾರಿಗಳು ಹೊರ ನಡೆದರು.

ಶಿರಸಿಯಲ್ಲಿಯೂ ಎನ್​ಐಎ ದಾಳಿ

ಶಿರಸಿಯ ಎಸ್​ಡಿಪಿಐ ಮುಖಂಡ ಅಬ್ದುಲ್ ಶುಕುರ್ ಹೊನ್ನಾವರ್ ಅವರ ಮನೆಯ ಮೇಲೆ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿ, ಕೆಲವು ದಾಖಲೆಗಳೊಂದು ಅಬ್ದುಲ್ ಶುಕುರ್ ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಒಂದು ಲ್ಯಾಪ್​ಟಾಪ್, ಎರಡು ಮೊಬೈಲ್, ಒಂದು ಪುಸ್ತಕ ಹಾಗೂ ಒಂದು ಸಿಡಿ ಜಪ್ತಿ ಮಾಡಲಾಗಿದೆ.

10 ರಾಜ್ಯಗಳಲ್ಲಿ ದಾಳಿ, 100ಕ್ಕೂ ಹೆಚ್ಚು ಪಿಎಫ್​ಐ ಕಾರ್ಯಕರ್ತರು ವಶಕ್ಕೆ

ಭಾರತ 10 ರಾಜ್ಯಗಳಲ್ಲಿ ಎನ್​ಐಎ ಮತ್ತು ಇಡಿ ಅಧಿಕಾರಿಗಳು ಏಕಕಾಲಕ್ಕೆ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿಗೆ ಅಡ್ಡಿಪಡಿಸಿದ 100ಕ್ಕೂ ಹೆಚ್ಚು ಪಿಎಫ್​ಐ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಕರ್ನಾಟಕಕ್ಕಿಂತಲೂ ಕೇರಳ ಹಾಗೂ ತಮಿಳುನಾಡಿನಲ್ಲಿ ಹೆಚ್ಚಿನ ನಗರ-ಪಟ್ಟಣಗಳಲ್ಲಿ ಕಾರ್ಯಾಚರಣೆ ನಡೆದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Published On - 9:06 am, Thu, 22 September 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​