ಕರ್ನಾಟಕ, ಮಹರಾಷ್ಟ್ರದ 40 ಕ್ಕೂ ಹೆಚ್ಚು ಸ್ಥಳಗಳಲ್ಲಿ ಎನ್​​ಐಎ ದಾಳಿ: 13 ಜನರ ಬಂಧನ

ಐಸಿಸ್ ಭಯೋತ್ಪಾದನೆ ಸಂಚಿನ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಶನಿವಾರ ಬೆಳ್ಳಂ ಬೆಳಿಗ್ಗೆ ಕರ್ನಾಟಕ ಮತ್ತು ಮಹಾರಾಷ್ಟ್ರದ 44 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.

ಕರ್ನಾಟಕ, ಮಹರಾಷ್ಟ್ರದ 40 ಕ್ಕೂ ಹೆಚ್ಚು ಸ್ಥಳಗಳಲ್ಲಿ ಎನ್​​ಐಎ ದಾಳಿ: 13 ಜನರ ಬಂಧನ
ಎನ್​ಐಎ
Follow us
ವಿವೇಕ ಬಿರಾದಾರ
|

Updated on:Dec 09, 2023 | 11:00 AM

ಬೆಂಗಳೂರು, ಡಿಸೆಂಬರ್​ 09:  ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಇಂದು (ಡಿ.09) ಬೆಳ್ಳಂ ಬೆಳಿಗ್ಗೆ ಕರ್ನಾಟಕ (Karnataka) ಮತ್ತು ಮಹಾರಾಷ್ಟ್ರದ (Maharashtra) 44 ಸ್ಥಳಗಳಲ್ಲಿ ದಾಳಿ ನಡೆಸಿದೆ. ಎನ್​ಐಎ ಅಧಿಕಾರಿಗಳು ಕರ್ನಾಟಕದ 1, ಪುಣೆಯಲ್ಲಿ 2, ಥಾಣೆ ಗ್ರಾಮಾಂತರದಲ್ಲಿ 31, ಥಾಣೆ ನಗರದಲ್ಲಿ 9 ಮತ್ತು ಭಾಯಂದರ್‌ನಲ್ಲಿ 1 ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ. ಈವರೆಗೆ 13 ಜನ ಶಂಕಿತ ಉಗ್ರರನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಶಂಕಿತ ಉಗ್ರರು ಐಸಿಸ್ ಜೊತೆ ಸಂಪರ್ಕ ಹೊಂದಿರುವ ಶಂಕೆ ವ್ಯಕ್ತವಾಗಿತ್ತು. ಶಂಕಿತ ಉಗ್ರರು ವಿದೇಶಿ ಐಸಿಸ್ ಹ್ಯಾಂಡ್ಲರ್‌ಗಳ ಜೊತೆಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಭಾರತದಲ್ಲಿ ಐಸಿಸ್ ವಿಚಾರಧಾರೆ ಹರಡುವ ಪ್ರಯತ್ನ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಈ ಹಿಂದೆ ಜುಲೈನಲ್ಲಿ ಪುಣೆ ಪೊಲೀಸರಿಂದ ಇಬ್ಬರ ಬಂಧನವಾಗಿತ್ತು. ಅಮೀರ್ ಅಬ್ದುಲ್ ಹಮೀದ್ ಖಾನ್. ಮೊಹಮ್ಮದ್ ಯಾಕೂಬ್ ಸಾಕಿ ಬಂಧಿತರಾಗಿದ್ದರು. ವಿಚಾರಣೆ ವೇಳೆ ಇಬ್ಬರೂ ಐಸಿಸ್ ಸಂಪರ್ಕದಲ್ಲಿರುವದು  ಪತ್ತೆಯಾಗಿದೆ. ಜೊತೆಗೆ ಮಹಾರಾಷ್ಟ್ರದಲ್ಲಿ ವಿಧ್ವಂಸಕ ಕೃತ್ಯ ಎಸಗಲೂ ಸಂಚು ರೂಪಿಸಿದ್ದರು. ಈ ಹಿನ್ನೆಲೆಯಲ್ಲಿ ಎಟಿಎಸ್ ಅಧಿಕಾರಿಗಳು ತನಿಖೆ ಆರಂಭಿಸಿದ್ದರು. ಶಂಕಿತ ಉಗ್ರರು ಕರ್ನಾಟಕ-ಮಹಾರಾಷ್ಟ್ರ ಗಡಿಯ ಅಂಬೋಲಿ ಅರಣ್ಯ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಿದ್ದರು ಎಂಬ ಅಂಶ ಬಯಲಾಗಿತ್ತು. ಹೀಗಾಗಿ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ.

National Investigation Agency is conducting raids over 40 locations in Karnataka and Maharashtra in an ISIS terror conspiracy case. pic.twitter.com/yhEcMd86ym

ಎನ್​ಐಎ ಅಧಿಕಾರಿಗಳು ಬೆಂಗಳೂರಿನ ಪುಲಿಕೇಶಿನಗರದ ಮೋರ್ ರಸ್ತೆಯ ಬಿಲ್ಡಿಂಗ್ ನ ಮೂರನೇ ಮಹಡಿಯಲ್ಲಿ ಎನ್ಐಎ ಕಾರ್ಯಚರಣೆ ನಡೆಸಿದರು. ಈ ವೇಳೆ ನಗರದಲ್ಲಿ ಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ. ಶಂಕಿತ ಉಗ್ರನಿಂದ 16 ಲಕ್ಷ 42 ಸಾವಿರ ನಗದು ಜಪ್ತಿ ಮಾಡಿಕೊಂಡಿದ್ದಾರೆ. ಶಂಕಿತ ಉಗ್ರ ಬೆಂಗಳೂರಿನಲ್ಲಿ ಡಾಟಾ ಕನ್ಸಲ್‌ಟೆಂಟ್‌ ಆಗಿ ಕೆಲಸ ಮಾಡುತ್ತಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:18 am, Sat, 9 December 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ