ಬೆಂಗಳೂರು, ಕೋಲಾರದಲ್ಲಿ NIA ದಾಳಿ: ಒಟ್ಟು ಮೂವರು ಶಂಕಿತ ಉಗ್ರರ ಬಂಧನ..!
ಬೆಂಗಳೂರು, ಕೋಲಾರದಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಒಟ್ಟು 5 ಕಡೆ ದಾಳಿ ನಡೆಸಿದ್ದು, ಈ ವೇಳೆ ಮೂವರು ಶಂಕಿತ ಉಗ್ರರನ್ನು ಬಂಧಿಸಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಮನೋವೈದ್ಯ ಹಾಗೂ ಪರಪ್ಪನ ಅಗ್ರಹಾರ ಜೈಲಿನ ಎಎಸ್ಐ ಸೇರಿದಂತೆ ಮೂವರನ್ನು ಉಗ್ರರ ಚಟುವಟಿಕೆಗೆ ನೆರವು ನೀಡುತ್ತಿದ್ದ ಆರೋಪದಡಿ ಬಂಧಿಸಲಾಗಿದೆ.

ಬೆಂಗಳೂರು, (ಜುಲೈ 08): ರಾಷ್ಟ್ರೀಯ ತನಿಖಾ ದಳ (ಎನ್ಐಎ) ಬೆಂಗಳೂರು (Bengaluru), ಕೋಲಾರದಲ್ಲಿ (Kolar) ಒಟ್ಟು ಐದು ಕಡೆ ದಾಳಿ ಮಾಡಿದ್ದು, ಮೂವರು ಶಂಕಿತ ಉಗ್ರರನ್ನು (suspected terrorists) ಬಂಧಿಸಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಮನೋವೈದ್ಯ ಡಾ.ನಾಗರಾಜ್, ಪರಪ್ಪನ ಅಗ್ರಹಾರ ಜೈಲಿನ ಎಎಸ್ಐ ಚಾಂದ್ ಪಾಷಾ ಅನೀಸ್ ಹಾಗೂ ಫಾತಿಮಾ ಎನ್ನುವರನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಉಗ್ರರ ಚಟುವಟಿಕೆಗೆ ನೆರವು ನೀಡುತ್ತಿದ್ದ ಆರೋಪದಡಿ ಮೂವರನ್ನು ಬಂಧಿಸಲಾಗಿದ್ದು, ದಾಳಿ ವೇಳೆ ಎನ್ಐಎ ಅಧಿಕಾರಿಗಳು 2 ವಾಕಿಟಾಕಿ, ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ.
ಉಗ್ರರ ಚಟುವಟಿಕೆಗೆ ನೆರವು ನೀಡುತ್ತಿದ್ದ ಆರೋಪದಡಿ ಈ ಮೂವರನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಫಾತಿಮಾ ಉಗ್ರ ಕೃತ್ಯದಲ್ಲಿ ಶಾಮೀಲಾಗಿರುವ ಜುನೈದ್ ಅಹ್ಮದ್ನ ತಾಯಿ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಕೈದಿಗಳನ್ನು ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಗೆ ಸೇರುವಂತೆ ಟಿ.ನಾಸೀರ್ ಪ್ರಚೋದನೆ ನೀಡುತ್ತಿದ್ದ ಎಂದು ತಿಳಿದುಬಂದಿದೆ.
ಸತೀಶ್ ಗೌಡ ಎಂಬುವರಿಗೆ ನೋಟಿಸ್
ಕೋಲಾರ ತಾಲ್ಲೂಕು ಭಟ್ರಹಳ್ಳಿ ಗ್ರಾಮದ ಸತೀಶ್ ಗೌಡ ಎಂಬುವರಿಗೆ ಎನ್.ಐ.ಎ ನೋಟೀಸ್ ನೀಡಿದೆ. ಬೆಂಗಳೂರಿನ ವೈಟ್ ಫೀಲ್ಡ್ ಬಳಿ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಸತೀಶ್ ಗೌಡ ಮನೆಯಲ್ಲಿ ಲಭ್ಯವಿಲ್ಲದ ಕಾರಣ ಕುಟುಂಬಸ್ಥರಿಗೆ ಎನ್ಐಎ ನೋಟೀಸ್ ನೀಡಿದ್ದು, 9-07-25 ರಂದು 10 ಗಂಟೆಗೆ ಬೆಂಗಳೂರು ಎನ್.ಐ.ಎ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
Published On - 9:39 pm, Tue, 8 July 25



